ಮೂಡಿಗೆರೆ: ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜು ತಿರುವಿನಲ್ಲಿ ಪ್ರವಾಸಿಗರ ಕಾರು ಪಲ್ಟಿಯಾದ ಘಟನೆ ಮಾ.27ರಂದು ನಡೆದಿದೆ.
ಶಿವಮೊಗ್ಗದಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಪ್ರವಾಸಿಗರ ಸ್ವಿಫ್ಟ್ ಕಾರು ಮಲೆಯಮಾರುತ ತಿರುವಿನಲ್ಲಿ 60 ಅಡಿಗಳ ಪ್ರಪಾತಕ್ಕೆ ಕಾರು ಪಲ್ಟಿಯಾಗಿದೆ.
ಕಾರಿನಲ್ಲಿದ್ದ ಒಂದು ವರ್ಷದ ಮಗು ಸೇರಿದಂತೆ ಐವರ ರಕ್ಷಣೆ ಮಾಡಲಾಗಿದೆ.
ಸ್ಥಳೀಯರಿಂದ ಕಾರಿನಲ್ಲಿದ್ದ ಶಿವಮೊಗ್ಗ ಮೂಲದ ಪ್ರವಾಸಿಗರನ್ನು ರಕ್ಷಿಸಿ, ಗಾಯಗೊಂಡವರನ್ನು ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಲಾಗಿದೆ.