
ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ಬ್ರಿಜೇಶ್ ಚೌಟ ಅವರೊಂದಿಗೆ ಕೇಂದ್ರ ಸರ್ಕಾರದ ಪ್ರಮುಖ ಯೋಜನೆಯಾದ “ಪ್ರಸಾದಂ”ಯೋಜನೆಯಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ದೇವಾಲಯಗಳಾದ ಬೆಳ್ತಂಗಡಿ ತಾಲ್ಲೂಕಿನ ಶ್ರೀ ನಂದಿಕೆಶ್ವರ ದೇವಸ್ಥಾನ ನಂದಿಬೆಟ್ಟ ಗರ್ಡಾಡಿ, ಬೆಳ್ತಂಗಡಿ ತಾಲ್ಲೂಕಿನ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಬೆಳ್ತಂಗಡಿ ತಾಲ್ಲೂಕಿನ ಶ್ರೀ ಶಿಶಿಲೇಶ್ವರ ದೇವಸ್ಥಾನ ಶಿಶಿಲ, ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನ ಉಪ್ಪಿನಂಗಡಿ ಹಾಗೂ ಶ್ರೀ ತೋಡಿಕ್ಕಾನ ಮಲ್ಲಿಕಾರ್ಜುನ ದೇವಸ್ಥಾನದ ಅಭಿವೃದ್ದಿಗೆ ಪ್ರಸಾದಂ ಯೋಜನೆಯಡಿಯಲ್ಲಿ ಅನುದಾನ ಒದಗಿಸುವಂತೆ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರು ಮಾ.27 ರಂದು ನವದೆಹಲಿಯ ಕಚೇರಿಯಲ್ಲಿ ಭೇಟಿಯಾಗಿ ದೇವಸ್ಥಾನಗಳಿಗೆ ಅನುದಾನ ಒದಗಿಸಿ ದೇವಸ್ಥಾನದ ಅಭಿವೃದ್ಧಿಗೆ ಸಹಕರಿಸುವಂತೆ ಮನವಿ ಸಲ್ಲಿಸಲಾಯಿತು.