ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಆಡಳಿತ ಸೌಧಕ್ಕೆ ದ.ಕ.ಜಿಲ್ಲಾಧಿಕಾರಿ ಮುಲೈಮುಹಿಲನ್ ರವರು ಮಾ.27 ರಂದು ಧಿಡೀರ್ ಭೇಟಿ ನೀಡಿದರು.


ಜಿಲ್ಲೆಯಲ್ಲಿ 1-5 ಕಡತಗಳು ಬಗ್ಗೆ ಜಿಲ್ಲೆಯಾದ್ಯಂತ ಪರಿಶೀಲನೆ ಮಾಡಲಾಗುತ್ತಿದೆ. ಬೆಳ್ತಂಗಡಿಯಲ್ಲಿ 1-5 ಕಡತಗಳು ಅರ್ಜಿ ಅಧಿಕವಾಗಿದ್ದು ಅದನ್ನು ಬಗೆಹರಿಸಲು ಕಾರ್ಯ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಮುಲೈ ಮುಹಿಲನ್ ಹೇಳಿದರು.
ಆರ್ ಇ ಗಳೊಂದಿಗೆ ಚರ್ಚೆ ನಡೆಸಿ ಅರ್ಜಿಗಳ ವಿಲೇವಾರಿಯ ಬಗ್ಗೆ ಮಾಹಿತಿ ಪಡೆದುಕೊಂಡರು. ಬಳಿಕ ಭದ್ರತಾ ಕೊಠಡಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.