ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ಟರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ (ರಿ) ನಡೆಸುತ್ತಿರುವ ಎಲ್ ಸಿ ಆರ್ ಇಂಡಿಯನ್ ಪದವಿ ಕಾಲೇಜು ಇಲ್ಲಿನ ಬಿ.ಕಾಂ ವಿಭಾಗದ ವಿದ್ಯಾರ್ಥಿಗಳಿಗೆ ಸಂದರ್ಶನ ಕೌಶಲ್ಯಗಳ ಕುರಿತು ಮಾಹಿತಿ ಕಾರ್ಯಾಗಾರ ಮಾ26 ರಂದು ನಡೆಸಲಾಯಿತು.
ಬಯಸಿದ ಉದ್ಯೋಗವನ್ನು ಪಡೆಯುವುದು ಪ್ರತಿಯೊಬ್ಬರ ಕನಸು. ಆದರೆ, ನಿರಂತರವಾಗಿ ಹೆಚ್ಚುತ್ತಿರುವ ಜನಸಂಖ್ಯೆ ಹಾಗೂ ಹೆಚ್ಚುತ್ತಿರುವ ಸ್ಪರ್ಧಾತ್ಪಕ ಜಗತ್ತಿನಲ್ಲಿ ಉದ್ಯೋಗ ಅವಕಾಶಗಳನ್ನು ಪಡೆಯಬೇಕಾದರೆ ಉತ್ತಮ ಜ್ಞಾನದೊಂದಿಗೆ ಸಂದರ್ಶನವನ್ನು ಎದುರಿಸುವ ಧೈರ್ಯ ,ಬುದ್ಧಿವಂತಿಕೆ ಜೊತೆಗೆ ಕೌಶಲ್ಯವು ಬೇಕು ಎಂಬ ನಿಟ್ಟಿನಲ್ಲಿ ವಿದ್ಯಾರ್ಥಿಗಳನ್ನು ಮುಂದಿನ ವೃತ್ತಿ ಜೀವನಕ್ಕೆ ತಯಾರಿಸುವ ಹಾಗೂ ಸಂದರ್ಶಗಳನ್ನು ಹೇಗೆ ಎದುರಿಸಬೇಕು ಎಂಬುವುದರ ಅರಿವು ಮೂಡಿಸುವ ಸಲುವಾಗಿ ‘ಸಂದರ್ಶನ ಕೌಶಲ್ಯ” ಕುರಿತು ಮಾಹಿತಿ ಕಾರ್ಯಗಾರವನ್ನು ನಡೆಸಲಾಯಿತು.
ಸಂಸ್ಥೆಯ ಸಂಯೋಜಕರಾದ ಯಶವಂತ ಜಿ ನಾಯಕ್ ಇವರು ಮಾಹಿತಿ ಕಾರ್ಯಾಗಾರ ನಡೆಸಿಕೊಟ್ಟರು.
ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೊ, ಪದವಿ ವಿಭಾಗದ ಮುಖ್ಯಸ್ಥರಾದ ದೀಕ್ಷಿತಾ.ಎ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ವಿಂದ್ಯಾಶ್ರೀ. ಎ, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳ ಉಪಸ್ಥಿತಿಯಲ್ಲಿ ಕಾರ್ಯಾಗಾರವು ಯಶಸ್ವಿಯಾಗಿ ನಡೆಯಿತು.