April 2, 2025
Uncategorizedತಾಲೂಕು ಸುದ್ದಿಬೆಳ್ತಂಗಡಿವರದಿ

ನಂದಿನಿ ಹಾಲಿನ ದರ 4 ರೂ. ಏರಿಕೆ

ಬೆಂಗಳೂರು: ಈಗಾಗಲೇ ಹಲವು ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಿಗೆ ರಾಜ್ಯ ಸರ್ಕಾರ ಮತ್ತೊಂದು ಏರಿಕೆ ಶಾಕ್ ನೀಡಿದ್ದು, ನಂದಿನಿ ಹಾಲಿನ ದರ ಏರಿಕೆ ಮಾಡಲು ಸಚಿವ ಸಂಪುಟ ಅನುಮೋದನೆ ನೀಡಿದೆ.

ಇಂದು (ಮಾ.27) ನಡೆದ ಸಚಿವ ಸಂಪುಟ ಸಭೆಯಲ್ಲಿ ಹಾಲಿನ ದರ ಪ್ರತಿ ಲೀಟರ್‌ಗೆ 4 ರೂಪಾಯಿ ಏರಿಕೆಯಾಗಲಿದೆ. ಈ ಮೂಲಕ ಒಂದು ವರ್ಷದ ಅಂತರದಲ್ಲಿ ಎರಡು ಬಾರಿ ಹಾಲಿನ ದರ ಹೆಚ್ಚಳವಾಗಿದೆ

ಹಾಲು ಒಕ್ಕೂಟ ಹಾಗೂ ರೈತರಿಂದ ಹಾಲು ದರ ಹೆಚ್ಚಳಕ್ಕೆ ಬೇಡಿಕೆ ನಿರಂತವಾಗಿ ಹೆಚ್ಚಿದ ಹಿನ್ನೆಲೆಯಲ್ಲಿ ಪ್ರತಿ ಲೀಟ‌ರ್ ಹಾಲಿನ ದರ 5 ರೂ. ಹೆಚ್ಚಳ ಮಾಡಬೇಕೆಂದು ಒಕ್ಕೂಟಗಳು ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದ್ದರು. ಆದರೆ ಇದೀಗ ಸಚಿವ ಸಂಪುಟ ಪ್ರತಿ ಲೀಟರ್ ಹಾಲಿಗೆ ನಾಲ್ಕು ರೂ ಏರಿಕೆಗೆ ಒಪ್ಪಿಗೆ ನೀಡಿದೆ.

ರಾಜ್ಯದಲ್ಲಿ ಸದ್ಯ ಹೋಮೋಜಿನೆಸ್ಟ್ ಟೋನ್ಸ್ ಹಾಲು ಅರ್ಧ ಲೀಟರ್ ₹24 ರೂಪಾಯಿ. ಹೋಮೋಜಿನೆಸ್ಟ್ ಟೋನ್ಸ್ ಹಾಲು ಒಂದು ಲೀಟರ್ ₹45 ರೂಪಾಯಿ ಇದೆ. ಹೊಸ ದರ ಜಾರಿಗೆ ಬಂದ್ರೆ ಅರ್ಧ ಲೀಟರ್ 26 ಮತ್ತು ಒಂದು ಒಂದು ಲೀಟರ್ ಹಾಲು 49 ರೂಪಾಯಿ ಆಗಲಿದೆ.

Related posts

ಉಜಿರೆ: ಎಸ್‌ಡಿಎಂ ಐಟಿ ಕಾಲೇಜಿನ ಗಣಿತ ವಿಭಾಗದ ಉಪನ್ಯಾಸಕಿ ಶೋಭಾ ಪಿ. ಜೀವಂದರ್ ರವರಿಗೆ ಪಿ.ಹೆಚ್.ಡಿ ಪದವಿ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಶಿವಾನಂದ ಪ್ರಭು ಅವರಿಗೆ ಶ್ರದ್ಧಾಂಜಲಿ

Suddi Udaya

ಲಾಯಿಲ ಕುಂಟಿನಿ ಭಾಗದಲ್ಲಿ ವೋಲ್ಟೇಜ್ ಸಮಸ್ಯೆ ಪರಿಹರಿಸಲು ಎಸ್‌ಡಿಪಿಐ ಮನವಿ

Suddi Udaya

ಬೆಳ್ತಂಗಡಿ ತಾಲೂಕು ಔಷಧಿ ವ್ಯಾಪಾರಸ್ಥರ ಸಂಘ : ವೀಲ್ ಚೇರ್ ಹಸ್ತಾಂತರ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ಎಸ್.ಡಿ.ಎಂ ಪ್ರೌ. ಶಾಲಾ ವಿದ್ಯಾರ್ಥಿ ಚಿನ್ಮಯ್ ಜಿ.ಕೆ ರಾಜ್ಯಕ್ಕೆ 2ನೇ ಸ್ಥಾನ, ತಾಲೂಕಿಗೆ ಪ್ರಥಮ ಸ್ಥಾನ

Suddi Udaya
error: Content is protected !!