ಶಿರ್ಲಾಲು: ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶಿರ್ಲಾಲು ಇದರ ಮುಂದಿನ ಅವಧಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ತಾ ಪಂ ಮಾಜಿ ಸದಸ್ಯ ಸುಧೀರ್ ಆರ್ ಸುವರ್ಣ ಹಾಗೂ ಉಪಾಧ್ಯಕ್ಷರಾಗಿ ಶೀನಪ್ಪ ಎಂ ಮಲೆಕ್ಕಿಲ ಅವಿರೋಧವಾಗಿ ಆಯ್ಕೆಯಾದರು.

ಚುನಾವಣಾ ಪ್ರಕ್ರಿಯೆಯನ್ನು ಚುನಾವಣಾಧಿಕಾರಿ ನಡೆಸಿಕೊಟ್ಟರು, ಮುಖ್ಯಕಾರ್ಯನಿರ್ವಹಣಾಧಿಕಾರಿ ಅಮ್ಮಾಜಿ ಕೋಟ್ಯಾನ್, ಹಾಗೂ ಸಿಬ್ಬಂದಿಗಳು ಸಹಕರಿಸಿದರು.
ನೂತನ ಅಧ್ಯಕ್ಷ ಉಪಾಧ್ಯಕ್ಷರನ್ನು ಬಿಜೆಪಿ ಮಂಡಲದ ವತಿಯಿಂದ ಗೌರವಿಸಲಾಯಿತು. ಮಂಡಲದ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಸೀತರಾಮ್ ಬೆಳಾಲು, ಪ್ರಮುಖರಾದ ಸದಾನಂದ ಪೂಜಾರಿ ಉಂಗಿಲಬೈಲು, ನವೀನ್ ಸಾಮಾನಿ, ಕೊರಗಪ್ಪ ಗೌಡ ಚಾರ್ಮಾಡಿ , ನಿರ್ದೇಶಕರು ಹಾಗೂ ಇತರರು ಉಪಸ್ಥಿತರಿದ್ದರು.