September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶಿರ್ಲಾಲು ಇದರ ಚುನಾವಣೆ: ಅಧ್ಯಕ್ಷರಾಗಿ ತಾ‌.ಪಂ. ಮಾಜಿ ಸದಸ್ಯ ಸುಧೀರ್ ಆರ್ ಸುವರ್ಣ, ಉಪಾಧ್ಯಕ್ಷರಾಗಿ ಶೀನಪ್ಪ ಎಂ ಮಲೆಕ್ಕಿಲ ಆಯ್ಕೆ

ಶಿರ್ಲಾಲು: ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶಿರ್ಲಾಲು ಇದರ ಮುಂದಿನ ಅವಧಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ತಾ‌ ಪಂ ಮಾಜಿ ಸದಸ್ಯ ಸುಧೀರ್ ಆರ್ ಸುವರ್ಣ ಹಾಗೂ ಉಪಾಧ್ಯಕ್ಷರಾಗಿ ಶೀನಪ್ಪ ಎಂ ಮಲೆಕ್ಕಿಲ ಅವಿರೋಧವಾಗಿ ಆಯ್ಕೆಯಾದರು.

ಚುನಾವಣಾ ಪ್ರಕ್ರಿಯೆಯನ್ನು ಚುನಾವಣಾಧಿಕಾರಿ ನಡೆಸಿಕೊಟ್ಟರು, ಮುಖ್ಯಕಾರ್ಯನಿರ್ವಹಣಾಧಿಕಾರಿ ಅಮ್ಮಾಜಿ ಕೋಟ್ಯಾನ್, ಹಾಗೂ ಸಿಬ್ಬಂದಿಗಳು ಸಹಕರಿಸಿದರು.

ನೂತನ ಅಧ್ಯಕ್ಷ ಉಪಾಧ್ಯಕ್ಷರನ್ನು ಬಿಜೆಪಿ ಮಂಡಲದ ವತಿಯಿಂದ ಗೌರವಿಸಲಾಯಿತು. ಮಂಡಲದ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಸೀತರಾಮ್ ಬೆಳಾಲು, ಪ್ರಮುಖರಾದ ಸದಾನಂದ ಪೂಜಾರಿ ಉಂಗಿಲಬೈಲು, ನವೀನ್ ಸಾಮಾನಿ, ಕೊರಗಪ್ಪ ಗೌಡ ಚಾರ್ಮಾಡಿ , ನಿರ್ದೇಶಕರು ಹಾಗೂ ಇತರರು ಉಪಸ್ಥಿತರಿದ್ದರು.

Related posts

ಪದ್ಮುಂಜ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಅನುಜ್ಞಾ ಕಲಶ ಹಾಗೂ ಜೀರ್ಣೋದ್ಧಾರ ಕಾರ್ಯಾರಂಭ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಬ್ರಹ್ಮಾವರ ವಲಯ ಹಾಗೂ ರೋಟರಿ ಕ್ಲಬ್ ವತಿಯಿಂದ ಪ್ರತಿಷ್ಠಿತ ಛಾಯಾರತ್ನ ಪ್ರಶಸ್ತಿಗೆ ಉಮೇಶ್ ಮದ್ದಡ್ಕ ಆಯ್ಕೆ

Suddi Udaya

ಜನತೆಯ ನಾಡಿ ಮಿಡಿತ ಅರಿತು ವಿಕಸಿತ ಭಾರತದ ಬಜೆಟ್ ಮಂಡನೆ: ಶಾಸಕ ಹರೀಶ್ ಪೂಂಜ

Suddi Udaya

ಡಿ.13: ಪಿಲಿಚಾಮುಂಡಿಕಲ್ಲಿನಲ್ಲಿ ದೊಂಪದ ಬಲಿ ಉತ್ಸವ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದಿಂದ ಲೋ ಅಸ್ಸಿಸ್ಟೆಂನ್ಸ್ ವಿಸಿಟ್( LAV) ಕಾರ್ಯಕ್ರಮ

Suddi Udaya
error: Content is protected !!