24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಿಜೆಪಿ ಆಡಳಿತದಲ್ಲಿ ಮಂಜೂರುಗೊಂಡ ಕಾಮಗಾರಿಗಳನ್ನು ತನ್ನದೆಂದು ಬಿಂಬುಸುವುದೇ ಸ್ಥಳೀಯ ಕಾಂಗ್ರೆಸಿಗರ ಸಾಧನೆ: ಪ್ರಕಾಶ್ ಎಳನೀರು

ಬೆಳ್ತಂಗಡಿ: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರಕಾರ ಹೊಸದಾಗಿ ಯಾವುದೇ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡದೆ ಹಿರಿಯ ಕಾಂಗ್ರೆಸ್ ಶಾಸಕರೇ ಅಸಮಾಧಾನ ವ್ಯಕ್ತಪಡಿಸಿದ್ದು ಜಗಜ್ಜಾಹಿರಾಗಿರುತ್ತದೆ. ತಮ್ಮ ಸರಕಾರದ ಲೋಪಗಳನ್ನು ಮುಚ್ಚಿಹಾಕಲು ಸ್ಥಳೀಯ ಕಾಂಗ್ರೆಸಿಗರು, ಬಿಜೆಪಿ ಸರಕಾರದ ಆಡಳಿತಾವಧಿಯಲ್ಲಿ ಶಾಸಕ ಹರೀಶ್ ಪೂಂಜ ಬೆಳ್ತಂಗಡಿ ತಾಲೂಕು ಲಾಯಿಲ ಗ್ರಾಮದ ಟಿ.ಬಿ ಕ್ರಾಸ್ ನಿಂದ ನಡ ಗ್ರಾಮದ ಕುತ್ರೊಟ್ಟು ಸಂಪರ್ಕ ರಸ್ತೆಗೆ ರೂ.3.00 ಕೋಟಿ ಅನುದಾನ ಮಂಜೂರುಗೊಳಿಸಿ 28.03.2023ರಂದು ಕಾಮಗಾರಿಗೆ ಆದೇಶ ದೊರಕಿಸುವಲ್ಲಿ ಯಶಸ್ವಿಯಾಗಿದ್ದರು.

ಬಳಿಕ ಬಂದ ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ ಎಲ್ಲಾ ಅಭಿವೃದ್ಧಿ ಕಾಮಗಾರಿಗಳಿಗೆ ತಡೆಯೊಡ್ಡಿತ್ತು. ಈಗ ವಿಳಂಬವಾಗಿ ಅನುಷ್ಟಾನಗೊಳ್ಳುತ್ತಿರುವ ಹಿಂದಿನ ಸರಕಾರದ ಕಾಮಗಾರಿಯನ್ನು ತಮ್ಮ ಸಾಧನೆಯೆಂದು ಬಿಂಬಿಸಿ ಸ್ಥಳೀಯ ಕಾಂಗ್ರೆಸಿಗರು ಅವರ ಮುಖಂಡರ ಭಾವಚಿತ್ರವನ್ನು ಹಾಕಿ ಪುಕ್ಕಟೆ ಪ್ರಚಾರಗಿಟ್ಟಿಸುತ್ತಿರುವುದು ಖಂಡನೀಯ ಎಂದು ಬಿಜೆಪಿ ಲಾಯಿಲ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಪ್ರಕಾಶ್ ಎಳನೀರು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.

Related posts

ಅರಸಿನಮಕ್ಕಿ ಗ್ರಾ.ಪಂ. ಹಿಂದಿನ ಉಪಾಧ್ಯಕ್ಷೆ ಶಕುಂತಲಾ ಆಚಾರ್ ರಿಗೆ ಬೀಳ್ಕೊಡುಗೆ

Suddi Udaya

ಡಿ.25: ಶಿವದರ್ಶನ್ ಆಗ್ರೋ ಇಂಡಸ್ಟ್ರೀಸ್ ಹಂಸಗಿರಿ ವಠಾರದಲ್ಲಿ ‘ನಂದಿ ನಂದಿನಿ’ ಯಕ್ಷಗಾನ ಪ್ರದರ್ಶನ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಮತದಾನದ ಜಾಗೃತಿ

Suddi Udaya

ಚಾರ್ಮಾಡಿ: ಕಂದಕಕ್ಕೆ ಉರುಳಿ ಬಿದ್ದ ಕಾರು: ಓರ್ವ ಮಹಿಳೆ ಸಾವು, ಮಕ್ಕಳು ಸಹಿತ ನಾಲ್ವರಿಗೆ ಗಂಭೀರ ಗಾಯ

Suddi Udaya

ಬೆಳಾಲು ಎನ್ ಎಸ್ ಎಸ್ ಶಿಬಿರಾರ್ಥಿ ಮತ್ತು ಪಂಚಾಯತ್ ವತಿಯಿಂದ ಸ್ವಚ್ಛತಾ ಅಭಿಯಾನ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಔಟ್ ಸೈಡ್ ವೀಲ್ ಚೇರ್ ವಿತರಣೆ

Suddi Udaya
error: Content is protected !!