ಮೇಲಂತಬೆಟ್ಟು ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಮಹಿಳಾ ಗ್ರಾಮ ಸಭೆಯನ್ನು ಮಾ.28 ರಂದು ನಡೆಸಲಾಯಿತು.
ಗ್ರಾಮ ಪಂಚಾಯತಿ ಹಾಗೂ ತ್ರಿವೇಣಿ ಸಂಜೀವಿನಿ ಮಹಿಳಾ ಒಕ್ಕೂಟ ಮತ್ತು ಗ್ರಾಮ ಪಂಚಾಯತ್ ಡಿಜಿಟಲ್ ಲೈಬ್ರರಿ ಮತ್ತು ಮಾಹಿತಿ ಕೇಂದ್ರ ಇವರ ಸಂಯುಕ್ತ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳೆಯರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಸಭಾಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಸವಿತಾ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಆರ್ಥಿಕ ಇಲಾಖೆಯ ಮಾಹಿತಿದಾರರಾದ ಶ್ರೀಮತಿ ಉಷಾ ಮಾತನಾಡಿ ಮಹಿಳೆಯರು ಆರ್ಥಿಕವಾಗಿ ಸಾಮಾಜಿಕವಾಗಿ ಸಬಲೀಕರಣ ಹೊಂದಬೇಕು ಎಂದು ತಿಳಿಸಿದರು. ವೇದಿಕೆಯಲ್ಲಿ ಅಂಗನವಾಡಿ ಮೇಲ್ವಿಚಾರಕಿ ಶ್ರೀಮತಿ ಗುಲಾಬಿ, ಸಮದಾಯ ಆರೋಗ್ಯ ಕೇಂದ್ರದ ಸಹಾಯಕಿ ಅಖಿಲಾ ರಾಜನ್, ತ್ರಿವೇಣಿ ಸಂಜಿವಿನಿ ಒಕ್ಕೂಟದ ಅಧ್ಯಕ್ಷ ಶ್ರೀಮತಿ ಸೀತಾ, ಗ್ರಾಮ ಪಂಚಾಯತ್ ಉಪಾಧ್ಯಕ್ಷ ಲೋಕನಾಥ ಶೆಟ್ಟಿ, ಗ್ರಾಮ ಪಂಚಾಯತ್ ಸದಸ್ಯರುಗಳಾದ ವೇಣು ಗೋಪಾಲ ಶೆಟ್ಟಿ, ಶ್ರೀಮತಿ ಸುಮಲತಾ , ಶ್ರೀಮತಿ ದೀಪಿಕಾ, ಸಂತೋಷ, ಚಂದ್ರರಾಜ್ ಎಂ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಿರ್ಮಲ್ ಕುಮಾರ್ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಗ್ರಾಪಂ ಸದಸ್ಯರಾದ ಶ್ರೀಮತಿ ದೀಪಿಕಾರವರು ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಓದಿದರು. ಪಂ ಅಭಿವೃದ್ಧಿ ಅಧಿಕಾರಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಪಂ ಸಿಬ್ಬಂದಿ ಶ್ರೀಮತಿ ಪ್ರಮೀಳಾ ಧನ್ಯವಾದವಿತ್ತರು. ಗ್ರಂಥಪಾಲಕಿ ಶ್ರೀಮತಿ ಚಂದ್ರಾವತಿ ಎಮ್.ಬಿಕೆ ಶ್ರೀಮತಿ ಮಲ್ಲಿಕಾ ಕಾರ್ಯಕ್ರಮಕ್ಕೆ ಸಹಕರಿಸಿದರು.