ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನಲ್ಲಿ ಶಿಕ್ಷಣ, ಸಂಶೋಧನೆ, ಮತ್ತು ಉದ್ಯಮಶೀಲತೆ ಎಂಬ ವಿಷಯ ಕುರಿತು ಇತ್ತೀಚೆಗೆ ಅಂತರ್ ಕಾಲೇಜು ಕಾರ್ಯಗಾರ ನಡೆಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಪ್ರೊ. ರವಿ, ನಿರ್ದೇಶಕರು ಎನ್‌ಐಟಿಕೆ ಸುರತ್ಕಲ್, ರವರು ಮಾತನಾಡುತ್ತಾ ‘ಶಿಕ್ಷಕರು ಅದ್ಯಾಪನದೊಂದಿಗೆ ಸಂಶೋಧನಾ ಕ್ಷೇತ್ರದಲ್ಲಿ ತೊಡಗಿಸಿಕೊಂಡಾಗ ಬೋಧನಾ ಸಾಮರ್ಥ್ಯ ಹೆಚ್ಚಾಗುವುದು ಎಂದರು ಹಾಗೂ ಉತ್ತಮ ಸಂಶೋಧನಾ ಪ್ರಸ್ತಾವನೆಗಳನ್ನು ವಿವಿಧ ಅನುದಾನ ನೀಡುವ ಸಂಸ್ಥೆಗಳಿಗೆ ಸಲ್ಲಿಸುವ ಬಗ್ಗೆ ಮಾಹಿತಿ ನೀಡಿದರು.
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ವಿಶ್ವನಾಥ್ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಚಾರ್ಯರಾದ ಡಾ. ಅಶೋಕ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು, ಕಾರ್ಯಕ್ರಮ ಸಂಯೋಜಕರಾದ ಡಾ. ಸುಬ್ರಹ್ಮಣ್ಯ ತೋಳ್ಪಾಡಿತ್ತಾಯ ಸ್ವಾಗತಿಸಿ, ವಂದಿಸಿದರು. ಎಸ್‌ಡಿಯಂ ಶಿಕ್ಷಣ ಸಂಸ್ಥೆಗಳ ಪ್ರಾಧ್ಯಾಪಕರು ಭಾಗವಹಿಸಿದರು.