ಪುದುವೆಟ್ಟು : ಓಂಶಕ್ತಿ ಸಂಜೀವಿನಿ ಮಹಿಳಾ ಒಕ್ಕೂಟ ಪುದುವೆಟ್ಟು ಇದರ ವಾರ್ಷಿಕ ಮಹಾಸಭೆಯು ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಉಷಾ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.
ಪಂಚಾಯತ್ ಅಧ್ಯಕ್ಷ ಪೂರ್ಣಕ್ಷ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಲಯ ಮೇಲ್ವಿಚಾರಕಿ ಶ್ರೀಮತಿ ವೀಣಾ ಶ್ರೀ ಹಾಗೂ ಪದಾಧಿಕಾರಿಗಳು ಶ್ರೀಮತಿ ಶೋಭಾ, ಶ್ರೀಮತಿ ಗ್ರೇಸಿ, ಶ್ರೀಮತಿ ವೀಣಾ, ಶ್ರೀಮತಿ ಶ್ವೇತಾ , ಶ್ರೀಮತಿ ಪುಷ್ಪಾ, ಶ್ರೀಮತಿ ರೋಹಿಣಿ, ಶ್ರೀಮತಿ ಸೌಮ್ಯ, ಶ್ರೀಮತಿ ಪದ್ಮಾವತಿ ಇವರುಗಳು ಉಪಸ್ಥಿತರಿದ್ದರು.

ವಲಯ ಮೇಲ್ವಿಚಾರಕರು ಮಹಾಸಭೆಯ ಬಗ್ಗೆ ಮತ್ತು ಸಂಜೀವಿನಿಯ ಧ್ಯೇಯ ಉದ್ದೇಶಗಳ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಪಂಚಾಯತ್ ಅಧ್ಯಕ್ಷರು ಹಾಗೂ ಎಲ್ಲಾ ಗಣ್ಯರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು .
ಪಶು ಸಖಿಯವರು 2023 -24ರ ವಾರ್ಷಿಕ ವರದಿಯನ್ನು ಮಂಡನೆ ಮಾಡಿದರು. ಸಂಘದ ಸದಸ್ಯರಿಂದ ಅನುಮೋದನೆ ಪಡೆಯಲಾಯಿತು. ದೀಪಾ ಸಂಜೀವಿನಿ ಸ್ವಸಹಾಯ ಸಂಘದ ಸದಸ್ಯೆ ಶ್ರೀಮತಿ ಪುಷ್ಪ ಇವರ ಕ್ಯಾಂಡಲ್ ಉತ್ಪನ್ನಗಳನ್ನು ಬಿಡುಗಡೆ ಮಾಡಲಾಯಿತು. ಶ್ರೀಮತಾ ಸಂಜೀವಿನಿ ಸಂಘದ ಶೋಭಾ ಇವರ ರೊಟ್ಟಿ ಉತ್ಪನ್ನ ಬಿಡುಗಡೆ ಮಾಡಲಾಯಿತು. ಅತ್ಯುತ್ತಮ ಸಂಘವನ್ನು ಗುರುತಿಸಿ ಸ್ಮರಣಿಕೆ ನೀಡಲಾಯಿತು. ಮಹಾಸಭೆಗೆ ಅತೀಹೆಚ್ಚು ಸದಸ್ಯರು ಭಾಗವಹಿಸಿದ 2 ಸಂಜೀವಿನಿ ಸ್ವಸಹಾಯ ಸಂಘಕ್ಕೆ ಸ್ಮರಣಿಕ್ಕೆ ನೀಡಲಾಯಿತು. ಹಳೆ ಪದಾಧಿಕಾರಿಗಳಿಂದ ಹೊಸ ಪದಾಧಿಕಾರಿಗಳಿಗೆ ದಾಖಲಾತಿ ಹಸ್ತಾಂತರ ಮಾಡಿ ಪದಗ್ರಹಣ ಮಾಡಲಾಯಿತು. ಬೀಳ್ಕೊಟ್ಟ ಪದಾಧಿಕಾರಿಗಳಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಶ್ರೀಮತಿ ಭವ್ಯ ಸ್ವಾಗತಿಸಿದರು. ಶ್ರೀಮತಿ ಹರಿಣಾಕ್ಷಿ ಎಲ್.ಸಿ.ಆರ್ ಪಿ ಜಮಾಖರ್ಚು ಮಂಡಿಸಿದರು. ಶ್ರೀಮತಿ ಸಂಧ್ಯಾ ಎಮ್.ಬಿ.ಕೆ ನಿರೂಪಿಸಿದರು. ಶ್ರೀಮತಿ ಪುಷ್ಪ ವಂದಿಸಿದರು.