April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಶಾಂತಿಶ್ರೀ ಜೈನ ಮಹಿಳಾ ಸಮಾಜದಿಂದ ವಿಶ್ವ ಮಹಿಳಾ ದಿನಾಚರಣೆ

ಇಂದಿನ ಆಧುನಿಕ ಸಮಾಜದಲ್ಲಿ ಮಹಿಳೆಯೊಬ್ಬಳು ತನ್ನನ್ನು ತಾನು ತೊಡಗಿಸಿಕೊಂಡರೆ ಯಾವುದೇ ಕಾರ್ಯವನ್ನು ಮಾಡಲು ಸಾಧ್ಯ. ಅಂತಹ ಕಾರ್ಯವನ್ನು ಮಾಡುತ್ತಿರುವ ನಮ್ಮ ಬೆಳ್ತಂಗಡಿಯ ಶಾಂತಿಶ್ರೀ ಜೈನ ಮಹಿಳಾ ಸಮಾಜವು ಇಂದು ತಾಲೂಕಿನಲ್ಲಿ ಗುರುತಿಸುವಂತಾಗಿದೆ. ನಾವೆಲ್ಲರೂ ಆದರ್ಶ ಸಾಧಕ ಮಹಿಳೆರಾದಾಗ ಮಾತ್ರ ಸಮಾಜ ನಮ್ಮನ್ನು ಗುರುತಿಸಿ ಗೌರವಿಸುತ್ತದೆ. ಅಂತಹ ಗುರುತರವಾದ ಕಾರ್ಯಕ್ಕೆ ನಾವೆಲ್ಲ ಜೊತೆಯಾಗಿ ಕಾರ್ಯವನ್ನು ಮಾಡಬೇಕು ಎಂದು ವಿಶ್ವ ಮಹಿಳಾ ದಿನಾಚರಣೆಯನ್ನು ದೀಪ ಪ್ರಜ್ವಲನದೊಂದಿಗೆ ಉದ್ಘಾಟಿಸಿದ ಬೆಳ್ತಂಗಡಿ ತಾಲೂಕಿನ ಪ್ರಸಿದ್ಧ ಅಭಿಯಂತರರಾಗಿದ್ದ ಚಂದ್ರರಾಜ್ ಜೈನ್ ಇವರ ಪತ್ನಿ ಶ್ರೀಮತಿ ಸುಜಯ ಸಿ ಜೈನ್ ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಬೆಳ್ತಂಗಡಿ ತಾಲೂಕಿನ ಪ್ರಸಿದ್ಧ ನ್ಯಾಯವಾದಿ ಶ್ರೀಮತಿ ಸ್ವರ್ಣಲತಾ ಜೈನ್ ರವರು “ಇಂದಿನ ಸಮಾಜದಲ್ಲಿ ಮಹಿಳೆಯರ ಮುಂದಿರುವ ಸವಾಲುಗಳು, ಅದನ್ನು ನಿಭಾಯಿಸಬೇಕಾದ ತಂತ್ರಗಾರಿಕೆ, ಮಹಿಳೆಯರಿಗೆ ಪರವಾಗಿರುವ ಕಾನೂನುಗಳು, ಪೋಕ್ಸೋ ಕಾಯ್ದೆಯ ಮಹತ್ವ ಇತ್ಯಾದಿ ವಿಚಾರಗಳನ್ನು ಎಳೆ ಎಳೆಯಾಗಿ ಪ್ರತಿಯೊಬ್ಬರು ತಿಳಿದುಕೊಳ್ಳಲೇಬೇಕು. ಆಗ ಮಾತ್ರ ಸುಸ್ತಿರ ಸಮಾಜವನ್ನು ಕಟ್ಟಲು ಸಾಧ್ಯ ಎಂದರು.
ಕಾರ್ಯಕ್ರಮದಲ್ಲಿ ಪೂರ್ವ ಪರಂಪರೆಯಲ್ಲಿ ಸಾಧನೆಗೈದ ಹಲವಾರು ಜೈನ ಮಹಿಳಾ ಸಾಧಕೀಯರಲ್ಲಿ ಕೆಲವರ ಸಾಧನೆಯ ತುಣುಕನ್ನು ಸಭೆಯಲ್ಲಿ ಪರಿಚಯಿಸಲಾಯಿತು. ಕಾಳು ಮೆಣಸಿನ ರಾಣಿ ಚೆನ್ನಬೈರಾ ದೇವಿ ಇವರನ್ನು ಶ್ರೀಮತಿ ಉಷಾ ಹಾಗೂ ಜೈನ ಸಾಹಿತ್ಯ ಲೋಕಕ್ಕೆ ಅಪಾರ ಕೊಡುಗೆ ನೀಡಿರುವ ಜೈನ ಮಹಿಳೆ ಬಿರುದಾಂಕಿತ ಶ್ರೀಮತಿ ರಾಧಮ್ಮ ಇವರ ಬಗ್ಗೆ ಶ್ರೀಮತಿ ಸುರಕ್ಷಿತ ರವರು ಸಭೆಗೆ ಪರಿಚಯಿಸಿದರು.

ಶಾಂತಿಶ್ರೀ ತಂಡದಿಂದ ವಲಯ ಮಟ್ಟದ ಜಿನಭಜನ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ನಾಲ್ಕು ತಂಡಗಳನ್ನು ವಿಶೇಷ ರೀತಿಯಲ್ಲಿ ಗೌರವಿಸಲಾಯಿತು.


ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಬೆಳ್ತಂಗಡಿ ಶಾಂತಿಶ್ರೀ ಜೈನ ಮಹಿಳಾ ಸಮಾಜದ ಅಧ್ಯಕ್ಷರಾಗಿರುವ ಪ್ರೊ| ತ್ರಿಶಾಲ ಜೈನ್ ಕೆ ಎಸ್ ಇವರು “ಹತ್ತನೇ ಶತಮಾನದಿಂದ 21ನೇ ಶತಮಾನದವರೆಗೆ ದೇಶದ ನಾನಾ ಭಾಗಗಳಲ್ಲಿ ಆಳ್ವಿಕೆ ಮಾಡಿರುವ ಜೈನ ರಾಣಿಯರ ಧೈರ್ಯ, ಸಾಹಸ, ಚಾಣಕ್ಯತನ, ಆಡಳಿತ ಶೈಲಿ ಮುಂತಾದ ವಿಚಾರಗಳನ್ನು ನೆನಪಿಸಿಕೊಂಡರು. ಇಂದು ವಿಶ್ವದಲ್ಲಿ ಮಹಿಳೆಯರ ಸ್ಥಾನಮಾನ ಹಾಗೂ ಹಲವಾರು ಕ್ಷೇತ್ರಗಳಲ್ಲಿ ಮಹಿಳೆಯರು ಸಾಧಿಸುತ್ತಿರುವ ಸಾಧನೆಗಳು ನಮಗೆಲ್ಲರಿಗೂ ಹೆಮ್ಮೆಯ ವಿಚಾರವಾಗಿದೆ. ಮಾತ್ರವಲ್ಲದೆ ಇತ್ತೀಚೆಗೆ ಬಾಹ್ಯಾಕಾಶ ಯಾನವನ್ನು ಮಾಡಿ ಯಶಸ್ವಿಯಾಗಿ ಧರೆಗೆ ಬಂದಿಳಿದ ಸುನಿತಾ ವಿಲಿಯಮ್ಸ್ ಇವರ ಅದ್ಭುತ ಪೂರ್ವ ಸಾಧನೆಗೆ ಸಂಸ್ಥೆಯ ವತಿಯಿಂದ ವಿಶೇಷ ಅಭಿನಂದನೆಯನ್ನು ಸಲ್ಲಿಸಲಾಯಿತು.


ಕಾರ್ಯಕ್ರಮವು ಶ್ರೀಮತಿ ಸ್ವಪ್ನ ಬಳಗದವರು ಪ್ರಾರ್ಥಿಸಿ, ಸಂಸ್ಥೆ ನಡೆದು ಬಂದ ದಾರಿಯ ಕುರಿತು ಸಂಸ್ಥೆಯ ಕಾರ್ಯದರ್ಶಿ, ಶ್ರೀಮತಿ ರಾಜಶ್ರೀ ಪ್ರಸ್ತಾಪಿಸಿದರೆ, ಶ್ರೀಮತಿ ಗುಣಮ್ಮ ಪಿ ಜೈನ್ ಸ್ವಾಗತಿಸಿ, ಶ್ರೀಮತಿ ತ್ರಿಶಾಲ ಅತಿಕಾರಿ ವಂದಿಸಿ, ಶ್ರೀಮತಿ ಅನುಪ ಕುಮಾರಿ ಮಾರಿ ಸಂಘಟಿಸಿ, ಶ್ರೀಮತಿ ದವಳ ಕಾರ್ಯಕ್ರಮ ನಿರ್ವಹಿಸಿದರು.

Related posts

ಯಕ್ಷಧ್ರುವ ಪಟ್ಲ ಘಟಕ ಬೆಳ್ತಂಗಡಿ ವತಿಯಿಂದ ಉಜಿರೆಯಲ್ಲಿ ಯಕ್ಷ ಸಂಭ್ರಮ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದಿಂದ ಅಪಘಾತದಲ್ಲಿ ನಿಧನರಾದ ದಿ. ಶೇಖರ ಬಂಗೇರರಿಗೆ ನುಡಿನಮನ

Suddi Udaya

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಚೇತರಿಸಿಕೊಳ್ಳುತ್ತಿರುವ ಹೂವಿನ ವ್ಯಾಪಾರಿ ಶಿವರಾಮ್: ಕೆಇಬಿ ಭಾಸ್ಕರ್ ಗುರುಸ್ವಾಮಿ ಇವರ ನೇತೃತ್ವದಲ್ಲಿ ಸಂಗ್ರಹಿಸಿದ ರೂ. 53,011 ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದಲ್ಲಿ ಸಂಕ್ರಾಂತಿ ಪೂಜೆ: 3 ಸಾವಿರ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆಯ ಅರ್ಜಿ ಫಾರಂ ವಿತರಣೆ

Suddi Udaya

ಧರ್ಮಸ್ಥಳ: ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟದ ಬೆಳ್ಳಿಹಬ್ಬ ಸಂಭ್ರಮ: ರಜತ ಸಂಚಿಕೆ ಲೋಕಾರ್ಪಣೆ – ಸಾಧಕರಿಗೆ ಸನ್ಮಾನ

Suddi Udaya

ಕುತ್ಲೂರು: ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!