25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ ಕಾಜೂರು ಹಯಾತುಲ್ ಔಲಿಯಾ ದರ್ಗಾ ಶರೀಫ್ ನಲ್ಲಿ ಸಂಭ್ರಮದ ಈದುಲ್ ಫಿತ್ರ್ ಆಚರಣೆ

ಬೆಳ್ತಂಗಡಿ: ಇತಿಹಾಸ ಪ್ರಸಿದ್ಧ ಧಾರ್ಮಿಕ ಶ್ರದ್ದಾ ಕೇಂದ್ರ ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ ಹಯಾತುಲ್ ಔಲಿಯಾ ದರ್ಗಾ ಶರೀಫ್ ಕಾಜೂರು ನಲ್ಲಿ ಮುಸ್ಲಿಮರ ಪ್ರಮುಖ ಹಬ್ಬ ಈದುಲ್ ಫಿತ್ರ್ ಹಬ್ಬವನ್ನು ಭಕ್ತಿ ಸಂಭ್ರಮದಿಂದ ಆಚರಿಸಲಾಯಿತು.

ಈದುಲ್ ಫಿತ್ರ್ ಪ್ರಾರ್ಥನೆಯ ಬಳಿಕ ಪರಸ್ಪರ ಸ್ನೇಹದ ಸಂಕೇತವಾಗಿ ಆಲಿಂಗಿಸಿಕೊಂಡು ಶುಭಾಶಯ ವಿನಿಮಯ ಮಾಡಿಕೊಂಡರು.
ಮಹಿಳೆಯರೂ ಕೂಡ ಹೊಸ ವಸ್ತ್ರ ಗಳನ್ನು ಧರಿಸಿ ವಿಶೇಷ ತಿಂಡಿ ತಿನಿಸು, ಖಾದ್ಯಗಳನ್ನು ತಯಾರಿಸಿ ಕುಟುಂಬ ಸದಸ್ಯರ ಜೊತೆ ಸಹಭೋಜನ ಮಾಡುವ ಮೂಲಕ ಮನೆಯಲ್ಲೇ ಹಬ್ಬದ ಸಂಭ್ರಮಕ್ಕೆ ಇನ್ನಷ್ಟು ಮೆರುಗು ನೀಡಿದರು.

ಕಾಜೂರಿನಲ್ಲಿ ವಿಶೇಷ ಪ್ರಾರ್ಥನೆ;
ನಾಡಿನ ಸರ್ವಧರ್ಮೀಯರ ಸೌಹಾರ್ದ ಕೇಂದ್ರವಾದ ಇತಿಹಾಸ ಪ್ರಸಿದ್ಧ ಧಾರ್ಮಿಕ ಶ್ರದ್ದಾ‌ ಕೇಂದ್ರ ಕಾಜೂರು ಮಸ್ಜಿದ್ ನಲ್ಲಿ ಈದುಲ್ ಫಿತ್ರ್ ಹಬ್ಬದ ಪ್ರಾರ್ಥನೆಗೆ ಕಾಜೂರು ತಂಙಳ್ ನೇತೃತ್ವ ನೀಡಿದರು. ಹಬ್ಬದ ಪ್ರಾರ್ಥನೆ ಬಳಿಕ ಇಲ್ಲಿ ಅಂತ್ಯ‌ವಿಶ್ರಾಂತಿ ಹೊಂದುತ್ತಿರುವ ಔಲಿಯಾಗಳ ಸನ್ನಿದಾನದಲ್ಲಿ ವಿಶ್ವ ಶಾಂತಿಗಾಗಿ ದುಆ ನೆರವೇರಿಸಲಾಯಿತು.
ಈದ್ ಸಂಭ್ರಮದಲ್ಲಿ ಬೆಳ್ತಂಗಡಿ ಇನ್ಸ್ ಪೆಕ್ಟರ್ ಸುಬ್ಬಾಪೂರ್ ಮಠ್ ಸಹಿತ ಸಿಬ್ಬಂದಿಗಳು ಭಾಗವಹಿಸಿದ್ದರು.

Related posts

ಬೆಳ್ತಂಗಡಿ ತಾಲೂಕು ಅಮೇಚೂರ್ ಕಬಡ್ಡಿ ಅಸೋಸಿಯೇಷನ್ ಗೌರವಾಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ ಆಯ್ಕೆ

Suddi Udaya

ಉದ್ಯಮಿ ಸುರೇಶ್ ದೇವಾಡಿಗರವರು ತೋಟತ್ತಾಡಿ ಶ್ರೀ ಉಳ್ಳಾಲ್ತಿ ಭಜನಾ ಮಂದಿರದ ಭಜನಾ ತಂಡದವರಿಗೆ ನೀಡಿದ ಸಮವಸ್ತ್ರದ ಬಿಡುಗಡೆ

Suddi Udaya

ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನಲ್ಲಿ ಆಟಿದ ಆಯನ ವಿಶೇಷ ಕಾರ್ಯಕ್ರಮ

Suddi Udaya

ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಪಡೆದ ಎಂಎಸ್ ದೇವಿಗೆ ಅಭಿನಂದನೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಅಂತರ್ ಕಾಲೇಜು ಭಾಷಣ ಮತ್ತು ಚರ್ಚಾ ಸ್ಪರ್ಧೆಯ ಬಹುಮಾನ ವಿತರಣೆ

Suddi Udaya

ವಿಕಸಿತ ಭಾರತಕ್ಕೆ ವಿಶ್ವಾಸ ಮೂಡಿಸಿದ ಬಜೆಟ್: ಶಾಸಕ ಹರೀಶ್ ಪೂಂಜ

Suddi Udaya
error: Content is protected !!