ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ: ಎಕ್ಸೆಲ್ ಕಾಲೇಜಿನ ಆಡಳಿತಕ್ಕೆ ವೇಣೂರಿನ ವಿದ್ಯೋದಯ ವಿದ್ಯಾ ಸಂಸ್ಥೆಗಳು

ಗುರುವಾಯನಕೆರೆ: ಗುಣಮಟ್ಟದ ಶಿಕ್ಷಣ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅತ್ಯುನ್ನತ ಮಟ್ಟದ ಸಾಧನೆ ಮಾಡಿ, ದೇಶದ ಶೈಕ್ಷಣಿಕ ಭೂಪಟದಲ್ಲಿ ಅನನ್ಯ ಸ್ಥಾನಗಳಿಸಿಕೊಂಡಿರುವ ಗುರುವಾಯನಕೆರೆ ಎಕ್ಸೆಲ್ ವಿದ್ಯಾ ಸಂಸ್ಥೆಗಳು, ವೇಣೂರಿನ 150 ವರ್ಷಗಳಿಗೂ ಮಿಕ್ಕಿ ಇತಿಹಾಸವಿರುವ ವಿದ್ಯೋದಯ ವಿದ್ಯಾ ಸಂಸ್ಥೆಗಳ ಆಡಳಿತವನ್ನು ವಹಿಸಿಕೊಂಡಿದೆ.

ಸಾವಿರಾರು ಪ್ರತಿಭಾವಂತರನ್ನು ಸಮಾಜಕ್ಕೆ ಸಮರ್ಪಿಸಿದ ವೇಣೂರಿನ ವಿದ್ಯೋದಯ ವಿದ್ಯಾಸಂಸ್ಥೆಗಳಲ್ಲಿ ಎಲ್ ಕೆ ಜಿ, ಯು ಕೆ ಜಿ, ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ನಡೆಯುತ್ತಿವೆ. ಬಾಲಕ – ಬಾಲಕಿಯರಿಗೆ ಪ್ರತ್ಯೇಕ ವಸತಿ ನಿಲಯಗಳಿವೆ. 24×7 ಬಿಸಿ ನೀರಿನ ವ್ಯವಸ್ಥೆಯಿದೆ. ಸ್ಥಳೀಯ ವಿದ್ಯಾರ್ಥಿಗಳಿಗೆ ಸ್ಕೂಲ್ ಬಸ್ ಸೌಲಭ್ಯವಿದೆ.

ಒಂದು ಕಾಲದಲ್ಲಿ ಇಲ್ಲಿನ ಕನ್ನಡ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ನಾಡಿನಲ್ಲೇ ಹೆಸರಾಗಿದ್ದವು. ತನ್ನ ತಂದೆಯವರಾದ ಬೊಳ್ಳೂರು ಗುತ್ತು ಸತೀಶ್ ಕುಮಾರ್ ಆರಿಗ ಅವರು ವೇಣೂರಿನ ವಿದ್ಯೋದಯ ವಿದ್ಯಾ ಸಂಸ್ಥೆಗಳಲ್ಲಿ ಓದಿರುವುದನ್ನು ಸ್ಮರಿಸಿ ಕೊಂಡ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರು ಮಾತನಾಡಿ, ವೇಣೂರಿನ ವಿದ್ಯೋದಯ ವಿದ್ಯಾ ಸಂಸ್ಥೆಗಳು ಶ್ರೇಷ್ಠ ವಿದ್ಯಾ ಕೇಂದ್ರಗಳಾಗಿದ್ದವು. ಸ್ವತಃ ನನ್ನ ತಂದೆ, ದೊಡ್ಡಪ್ಪ, ಚಿಕ್ಕಪ್ಪ ಎಲ್ಲರೂ ವಿದ್ಯೋದಯ ವಿದ್ಯಾ ಸಂಸ್ಥೆಗಳಲ್ಲಿ ಓದಿದ್ದರು. ಎಕ್ಸೆಲ್ ವೇಣೂರಿನಲ್ಲಿ ಎಲ್ ಕೆ ಜಿ, ಯು ಕೆ ಜಿ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳನ್ನು ಮುನ್ನಡೆಸುವುದರ ಜೊತೆಗೆ ಗತ ವೈಭವದ ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆಯನ್ನು ಪುನರಾರಂಭಿಸಿ, ರಾಜ್ಯದ ಉನ್ನತ ಶಾಲೆಯನ್ನಾಗಿ ರೂಪಿಸಲಾಗುವುದು.

ನಾಡು – ನುಡಿ, ನೆಲ – ಜಲದ ಬಗೆಗೆ ಸದಾ ಜಾಗೃತವಾಗಿರುವ ಎಕ್ಸೆಲ್ ವಿದ್ಯಾ ಸಂಸ್ಥೆಗಳು ವಿಶ್ವ ವಿಖ್ಯಾತ ಹಸನ್ಮುಖಿ ಗೊಮ್ಮಟೇಶ್ವರ ನೆಲೆನಿಂತ ವೇಣೂರಿನಲ್ಲಿ ರಾಜ್ಯದ ಶ್ರೇಷ್ಠ ಕನ್ನಡ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢ ಶಾಲೆಯನ್ನು ಸ್ಥಾಪಿಸಿ, ಪ್ರತಿಭಾವಂತರಿಗೆ ಉಚಿತ ಶಿಕ್ಷಣ ಕೊಡುವ ಇರಾದೆ ಹೊಂದಿದೆ ಎಂದರು.

Related posts

ಹೊಕ್ಕಾಡಿಗೋಳಿ ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಕನ್ಯಾಡಿ ಶ್ರೀ ಸದಾಶಿವೇಶ್ವರ ಭಜನಾ ಮಂಡಳಿಯ ವಾರ್ಷಿಕೋತ್ಸವ

Suddi Udaya

ಕೊಕ್ಕಡದ ಗೇರು ನಿಗಮದ ತೋಟದಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಅಂತರ್ ಕಾಲೇಜು ಗಣಿತ ಸ್ಪರ್ಧೆ: ಎಸ್. ಡಿ. ಎಂ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಏಳನೇ ಸ್ಥಾನ ಮತ್ತು ತಾಲೂಕಿಗೆ ದ್ವಿತೀಯ ಸ್ಥಾನ ಪಡೆದ ಪ್ರತೀಕ್ ವಿ ಎಸ್ ರಿಗೆ ಸನ್ಮಾನ

Suddi Udaya

ದ.ಕ ಜಿಲ್ಲಾ ವೈನ್ ಮರ್ಚೆಂಟ್ ಅಸೋಸಿಯೇಷನ್ ಉಪಾಧ್ಯಕ್ಷರಾಗಿ ಬೆಳ್ತಂಗಡಿಯ ಯುವ ಉದ್ಯಮಿ ಅಭಿನಂದನ್ ಹರೀಶ್ ಕುಮಾರ್ ಆಯ್ಕೆ

Suddi Udaya
error: Content is protected !!