24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ: ಎಕ್ಸೆಲ್ ಕಾಲೇಜಿನ ಆಡಳಿತಕ್ಕೆ ವೇಣೂರಿನ ವಿದ್ಯೋದಯ ವಿದ್ಯಾ ಸಂಸ್ಥೆಗಳು

ಗುರುವಾಯನಕೆರೆ: ಗುಣಮಟ್ಟದ ಶಿಕ್ಷಣ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅತ್ಯುನ್ನತ ಮಟ್ಟದ ಸಾಧನೆ ಮಾಡಿ, ದೇಶದ ಶೈಕ್ಷಣಿಕ ಭೂಪಟದಲ್ಲಿ ಅನನ್ಯ ಸ್ಥಾನಗಳಿಸಿಕೊಂಡಿರುವ ಗುರುವಾಯನಕೆರೆ ಎಕ್ಸೆಲ್ ವಿದ್ಯಾ ಸಂಸ್ಥೆಗಳು, ವೇಣೂರಿನ 150 ವರ್ಷಗಳಿಗೂ ಮಿಕ್ಕಿ ಇತಿಹಾಸವಿರುವ ವಿದ್ಯೋದಯ ವಿದ್ಯಾ ಸಂಸ್ಥೆಗಳ ಆಡಳಿತವನ್ನು ವಹಿಸಿಕೊಂಡಿದೆ.

ಸಾವಿರಾರು ಪ್ರತಿಭಾವಂತರನ್ನು ಸಮಾಜಕ್ಕೆ ಸಮರ್ಪಿಸಿದ ವೇಣೂರಿನ ವಿದ್ಯೋದಯ ವಿದ್ಯಾಸಂಸ್ಥೆಗಳಲ್ಲಿ ಎಲ್ ಕೆ ಜಿ, ಯು ಕೆ ಜಿ, ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ನಡೆಯುತ್ತಿವೆ. ಬಾಲಕ – ಬಾಲಕಿಯರಿಗೆ ಪ್ರತ್ಯೇಕ ವಸತಿ ನಿಲಯಗಳಿವೆ. 24×7 ಬಿಸಿ ನೀರಿನ ವ್ಯವಸ್ಥೆಯಿದೆ. ಸ್ಥಳೀಯ ವಿದ್ಯಾರ್ಥಿಗಳಿಗೆ ಸ್ಕೂಲ್ ಬಸ್ ಸೌಲಭ್ಯವಿದೆ.

ಒಂದು ಕಾಲದಲ್ಲಿ ಇಲ್ಲಿನ ಕನ್ನಡ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ನಾಡಿನಲ್ಲೇ ಹೆಸರಾಗಿದ್ದವು. ತನ್ನ ತಂದೆಯವರಾದ ಬೊಳ್ಳೂರು ಗುತ್ತು ಸತೀಶ್ ಕುಮಾರ್ ಆರಿಗ ಅವರು ವೇಣೂರಿನ ವಿದ್ಯೋದಯ ವಿದ್ಯಾ ಸಂಸ್ಥೆಗಳಲ್ಲಿ ಓದಿರುವುದನ್ನು ಸ್ಮರಿಸಿ ಕೊಂಡ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರು ಮಾತನಾಡಿ, ವೇಣೂರಿನ ವಿದ್ಯೋದಯ ವಿದ್ಯಾ ಸಂಸ್ಥೆಗಳು ಶ್ರೇಷ್ಠ ವಿದ್ಯಾ ಕೇಂದ್ರಗಳಾಗಿದ್ದವು. ಸ್ವತಃ ನನ್ನ ತಂದೆ, ದೊಡ್ಡಪ್ಪ, ಚಿಕ್ಕಪ್ಪ ಎಲ್ಲರೂ ವಿದ್ಯೋದಯ ವಿದ್ಯಾ ಸಂಸ್ಥೆಗಳಲ್ಲಿ ಓದಿದ್ದರು. ಎಕ್ಸೆಲ್ ವೇಣೂರಿನಲ್ಲಿ ಎಲ್ ಕೆ ಜಿ, ಯು ಕೆ ಜಿ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳನ್ನು ಮುನ್ನಡೆಸುವುದರ ಜೊತೆಗೆ ಗತ ವೈಭವದ ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆಯನ್ನು ಪುನರಾರಂಭಿಸಿ, ರಾಜ್ಯದ ಉನ್ನತ ಶಾಲೆಯನ್ನಾಗಿ ರೂಪಿಸಲಾಗುವುದು.

ನಾಡು – ನುಡಿ, ನೆಲ – ಜಲದ ಬಗೆಗೆ ಸದಾ ಜಾಗೃತವಾಗಿರುವ ಎಕ್ಸೆಲ್ ವಿದ್ಯಾ ಸಂಸ್ಥೆಗಳು ವಿಶ್ವ ವಿಖ್ಯಾತ ಹಸನ್ಮುಖಿ ಗೊಮ್ಮಟೇಶ್ವರ ನೆಲೆನಿಂತ ವೇಣೂರಿನಲ್ಲಿ ರಾಜ್ಯದ ಶ್ರೇಷ್ಠ ಕನ್ನಡ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢ ಶಾಲೆಯನ್ನು ಸ್ಥಾಪಿಸಿ, ಪ್ರತಿಭಾವಂತರಿಗೆ ಉಚಿತ ಶಿಕ್ಷಣ ಕೊಡುವ ಇರಾದೆ ಹೊಂದಿದೆ ಎಂದರು.

Related posts

ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ನೂತನ ಅಧ್ಯಕ್ಷರಾಗಿ ಸೆಬಾಸ್ಟಿಯನ್ ಪಿ.ಟಿ. ಕಳೆಂಜ ನೇಮಕ

Suddi Udaya

ಮುಖ್ಯಮಂತ್ರಿ ಸಿದ್ದರಾಮಯ್ಯ ರವರನ್ನು ಭೇಟಿ ಮಾಡಿದ ದ.ಕ.ಜಿಲ್ಲೆಯ ಕಾಂಗ್ರೆಸ್ ಮುಸ್ಲಿಮ್ ಮುಖಂಡರ ನಿಯೋಗ

Suddi Udaya

ಉಡುಪಿಯ ಮಧ್ವ ನವರಾತ್ರೋತ್ಸವದಲ್ಲಿ ವಿದ್ವಾನ್ ರಾಘವೇಂದ್ರ ಭಟ್ ಲಕ್ಷ್ಮೀ ನರಸಿಂಹ ಮಠ ಮದ್ದಡ್ಕ ರವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ವರ್ತಕರ ಸಂಘದ ವತಿಯಿಂದ ಹೂವಿನ ವ್ಯಾಪಾರಿ ಶಿವರಾಮ್ ರವರಿಗೆ ಆರ್ಥಿಕ ಸಹಾಯ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಬೆಳ್ತಂಗಡಿ ತಾಲೂಕು, 27ನೇ ವರ್ಷದ ಸಾಮೂಹಿಕ ಗೌರಿ ಪೂಜೆ ಮತ್ತು ಶ್ರೀ ಗಣೇಶೋತ್ಸವ: ಧಾರ್ಮಿಕ ಸಭೆ

Suddi Udaya

ಧರ್ಮಸ್ಥಳದಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya
error: Content is protected !!