27.5 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉಜಿರೆಯ ಕೂಸಪ್ಪರವರಿಗೆ ವಾತ್ಸಲ್ಯ ಮನೆ ಹಸ್ತಾಂತರ

ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ತಾಲೂಕು ಮಾತೃಶ್ರೀ ಅಮ್ಮನವರ ಕನಸಿನ ಕಾರ್ಯಕ್ರಮವಾದ ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಪ್ರತಿ ತಿಂಗಳು ಮಾಶಾಸನ ಪಡೆಯುತ್ತಿರುವ ಉಜಿರೆ ವಲಯದ ಮಾಚಾರು ಬಟ್ಟಾಜೆ ವಾತ್ಸಲ್ಯ ಸದಸ್ಯರಾದ ಕೂಸಪ್ಪರವರಿಗೆ ವಾತ್ಸಲ್ಯ ಮನೆ ನಿರ್ಮಾಣ ಮಾಡಲಾಗಿದ್ದು, ಮನೆಯನ್ನು ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಶರತ್ ಕೃಷ್ಣ ಪಡ್ವೆಟ್ನಾಯರವರು ಹಸ್ತಾಂತರ ಮಾಡಿದರು.

ವಾತ್ಸಲ್ಯ ಯೋಜನೆಯಂತಹ ಸಮಾಜವನ್ನು ಕಟ್ಟುವ ಕಾರ್ಯಕ್ರಮದಲ್ಲಿ ಭಾಗಿಯಾಗುವುದು ಪುಣ್ಯದ ಕೆಲಸ. ಶ್ರೀ ಕ್ಷೇತ್ರದಿಂದ ಅದೆಷ್ಟೋ ಅಸಹಾಯಕರಿಗೆ ನೆರವನ್ನು ನೀಡುವ ಯೋಜನೆಗಳಿದ್ದು ನಾವು ಇಂತಹ ಕಾರ್ಯಕ್ರಮಗಳಿಗೆ ಕೈ ಜೋಡಿಸಬೇಕು. ಕೈಲಾದವರು ಬಡವರಿಗೆ ಸಹಾಯ ಮಾಡುವುದು ಅಗತ್ಯ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕೇಂದ್ರ ಒಕ್ಕೂಟ ಅಧ್ಯಕ್ಷರು ಸೀತಾರಾಮ್. ಆರ್, ನಿವೃತ್ತ ಪ್ರಾದೇಶಿಕ ನಿರ್ದೇಶಕರು ಸೀತಾರಾಮ್ ಶೆಟ್ಟಿ, ಜನಜಾಗೃತಿ ವೇದಿಕೆ ವಲಯಾಧ್ಯಕ್ಷರು ಪುಷ್ಪಾವತಿ ಆರ್ ಶೆಟ್ಟಿ, ಉಜಿರೆ ಗಣ್ಯರಾದ ರಾಮಚಂದ್ರ ಶೆಟ್ಟಿ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರು ರಾಮಯ್ಯ ಗೌಡ, ಉಜಿರೆ ಸತ್ಯನಾರಾಯಣ ಪೂಜಾ ಸಮಿತಿ ಅಧ್ಯಕ್ಷರು ಪ್ರಶಾಂತ್ ಜೈನ್, ಮಹಾಬಲ ಕುಲಾಲ್ ಜಿಲ್ಲಾ ನಿರ್ದೇಶಕರು ದ.ಕ ,ತಾಲೂಕು ಯೋಜನಾಧಿಕಾರಿಯವರು ಸುರೇಂದ್ರ ‍ಕೆ, ಉಮರಬ್ಬ ವಲಯಾಧ್ಯಕ್ಷರು ಉಜಿರೆ ವಲಯ, ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರು, ಉಜಿರೆ ವಲಯದ ಸೇವಾ ಪ್ರತಿನಿಧಿಗಳು, ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿರಿದ್ದರು.

ಜ್ಞಾನ ವಿಕಾಸ ಸಮನ್ವಯಧಿಕಾರಿ ಮಧುರಾವಸಂತ್ ಸ್ವಾಗತಿಸಿ, ವಲಯ ಮೇಲ್ವಿಚಾರಕರಾದ ಶ್ರೀಮತಿ ವನಿತಾ ಧನ್ಯವಾದ ನೀಡಿದರು.

Related posts

ಬೆಳ್ತಂಗಡಿ ಎಸ್‌ಡಿಪಿಐ ವತಿಯಿಂದ ಗ್ರಾ.ಪಂ. ಉಪಚುನಾವಣೆ ಪೂರ್ವತಯಾರಿ ಸಭೆ

Suddi Udaya

ಧರ್ಮಸ್ಥಳ: ಅಶೋಕನಗರ ನಿವಾಸಿ ನಾಟಿ ವೈದ್ಯೆ, ಶತಾಯುಷಿ ಶ್ರೀಮತಿ ನೊಕ್ಕೆ ನಿಧನ

Suddi Udaya

ದಂತ ವೈದ್ಯಕೀಯದಲ್ಲಿ ಅತ್ಯುತ್ತಮ ಸಾಧನೆ ತೋರಿದ ಬೆಳ್ತಂಗಡಿಯ ಹಮ್ನಾ ಜಝೀಲಾ

Suddi Udaya

ಧರ್ಮಸ್ಥಳ ಗ್ರಾ.ಪಂ. ಅಧ್ಯಕ್ಷರಾಗಿ ವಿಮಲ, ಉಪಾಧ್ಯಕ್ಷರಾಗಿ ಶ್ರೀನಿವಾಸ್ ರಾವ್ ಆಯ್ಕೆ

Suddi Udaya

ಕರಾಯ: ಸೈಕಲ್ ರಿಪೇರಿ ಮಾಡಿಸಿಕೊಟ್ಟಿಲ್ಲ ಎಂದು ನೇಣಿಗೆ ಶರಣಾದ ಹೈಸ್ಕೂಲ್ ವಿದ್ಯಾರ್ಥಿ

Suddi Udaya

ಮಡಂತ್ಯಾರು: ರಬ್ಬರ್ ಮರ ಸಾಗಾಟ ಮಾಡುತ್ತಿದ್ದ ಲಾರಿ ಪಲ್ಟಿ‌

Suddi Udaya
error: Content is protected !!