
ಬೆಳ್ತಂಗಡಿ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ 4 ದಿನದ ಬೇಸಿಗೆ ಶಿಬಿರ ಹಾಗೂ ಕ್ರೀಡಾ ಶಿಬಿರದ ಉದ್ಘಾಟನೆಯು ಎ.1ರಂದು ನಡೆಯಿತು.
ಸಂಪನ್ಮೂಲ ವ್ಯಕ್ತಿಗಳಾದ ಶ್ರೀಮತಿ ರೇಶ್ಮಾ ರಜತ್ ಶೆಟ್ಟಿ ಶಿಬಿರವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಧ್ಯಾನ ಹಾಗೂ ಯೋಗದ ಮಹತ್ವವನ್ನು ತಿಳಿಸಿ, ಒತ್ತಡ ನಿಯಂತ್ರಣದ ಬಗ್ಗೆ ತರಬೇತಿ ನೀಡಿದರು.

ಶಾಲೆಯ ಮುಖ್ಯೋಪಾಧ್ಯಾಯಿನಿ ಹೇಮಲತಾ ಎಂ ಆರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಈ ಶಿಬಿರದಲ್ಲಿ ವಿದ್ಯಾರ್ಥಿಗಳಿಗೆ ಯೋಗ, ಕ್ರೀಡೆ ಹಾಗೂ ಕರಕುಶಲ ವಸ್ತುಗಳ ತಯಾರಿಕೆ ಮುಂತಾದ ವಿಷಯಗಳ ಬಗ್ಗೆ ತರಬೇತಿ ನೀಡಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದು ಸಹಕರಿಸಿದರು. ಹತ್ತು ದಿನಗಳ ಕಾಲ ನಡೆಯಲಿರುವ ಕ್ರೀಡಾ ಶಿಬಿರದಲ್ಲಿ ದೈಹಿಕ ಶಿಕ್ಷಕ ಪ್ರವೀಣ್ ಗರ್ಡಾಡಿ ತರಬೇತಿ ನೀಡಲಿದ್ದಾರೆ.