ಬೆಳ್ತಂಗಡಿ: ಇತ್ತೀಚೆಗೆ ನಿಧನರಾದ ಬೆಳ್ತಂಗಡಿ ಸಮತ ಹೊಟೇಲ್ ಮಾಲಕ ಬಿಜೆಪಿಯ ಹಿರಿಯ ಕಾರ್ಯಕರ್ತ ಬಿ. ವಿಠಲ್ ಭಟ್ ರವರಿಗೆ ನುಡಿನಮನ ಹಾಗೂ ಮಿತ್ರ ಭೋಜನ ಕಾರ್ಯಕ್ರಮವು ಎ.1 ರಂದು ಬೆಳ್ತಂಗಡಿ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ನಡೆಯಿತು.

ಈ ವೇಳೆ ವಿಧಾನ ಪರಿಷತ್ ಶಾಸಕ ಪ್ರತಾಪ ಸಿಂಹ ನಾಯಕ್, ಶಾಸಕ ಹರೀಶ್ ಪೂಂಜ, ವೆಂಕಟ್ರಾಯ ಅಡೂರು, ವಿಠಲ್ ಶೆಟ್ಟಿ ನುಡಿ ನಮನದ ಮಾತುಗಳ್ನಾಡಿದರು. ವಿಠಲ ಭಟ್ರ ಹಿರಿಯ ಪುತ್ರಿ ಮನೆಯವರ ಪರವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಮಾಜಿ ಶಾಸಕರಾದ ಪ್ರಭಾಕರ ಬಂಗೇರ, ಡಿ ಸಿ ಸಿ ನಿರ್ದೇಶಕರು ಕುಶಾಲಪ್ಪ ಗೌಡ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಜಿಲ್ಲಾ ಕಾರ್ಯದರ್ಶಿ ಸೀತಾರಾಮ್, ನಗರ ಪಂಚಾಯತಿನ ಅಧ್ಯಕ್ಷ ಜಯಾನಂದ ಗೌಡ, ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ , ಪಟ್ಟಣ ಪಂಚಾಯಿತಿ ಸ್ಥಾಯಿ ಸಮಿತಿಯ ಅಧ್ಯಕ್ಷ ಶರತ್ ಶೆಟ್ಟಿ , ಜಿಲ್ಲಾ ರೈತ ಮೋರ್ಚಾದ ಅಧ್ಯಕ್ಷರು ಗಣೇಶ್ ನಾವೂರು, ಪಕ್ಷದ ಪ್ರಮುಖರು ಪುಷ್ಪಾರ್ಚನೆ ಮಾಡಿ ಶ್ರದ್ಧಾಂಜಲಿ ಅರ್ಪಿಸಿದರು.

ಸದಾನಂದ ಪೂಜಾರಿ ಉಂಗಿಲಬೈಲು ಸ್ವಾಗತಿಸಿ, ಶ್ರೀನಿವಾಸ್ ರಾವ್ ಧರ್ಮಸ್ಥಳ ಕಾರ್ಯಕ್ರಮ ಸಂಯೋಜನೆ ಮಾಡಿದರು.

ಪುತ್ತೂರು ಜಿಲ್ಲಾ ಸಂಘ ಚಾಲಕ್ ವಿನಯ ಚಂದ್ರ ಉಜಿರೆ ಅವರ ಕುಟುಂಬದವರು ಮನೆಯವರು ಬಂಧು ಬಳಗದವರು ಉಪಸ್ಥಿತರಿದ್ದರು.