ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ಮಕ್ಕಳ ಬೇಸಿಗೆ ಶಿಬಿರ ಸಮ್ಮರ್ ಪ್ಯಾರಡೈಸ್ ಅನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ಕ್ಷೇಮ ಪಾಲನಾ ಅಧಿಕಾರಿ ಧನ್ಯ ಕುಮಾರ್ ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು ಬೇಸಿಗೆ ಶಿಬಿರದ ಮಹತ್ವ ಹಾಗೂ ಅದರ ಉದ್ದೇಶಗಳ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಿದರು. ವಿದ್ಯಾರ್ಥಿಗಳಿಗೆ ವೃತ್ತಿ ಮತ್ತು ಪ್ರವೃತ್ತಿಯ ವ್ಯತ್ಯಾಸ ಹಾಗೂ ಅದರ ಮಹತ್ವವನ್ನು ತಿಳಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಕೊಕ್ಕಡ ಸರಕಾರಿ ಪ್ರಾಥಮಿಕ ಶಾಲೆಯ ನಿವೃತ್ತ ಶಿಕ್ಷಕಿ ಶ್ರೀಮತಿ ಮನೋರಮ ಮಾತನಾಡಿ ಬೇಸಿಗೆ ಶಿಬಿರ ಮಕ್ಕಳಿಗೆ ಹೇಗೆ ಸಂಸ್ಕೃತಿ ಸಂಸ್ಕಾರಗಳನ್ನು ತಿಳಿಸಿಕೊಡುತ್ತದೆ ಹಾಗೂ ಇಲ್ಲಿ ಕಲಿತಂತಹ ವಿಚಾರಗಳನ್ನು ಹೇಗೆ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂಬುದನ್ನು ತಿಳಿಸಿದರು.
ಕಾರ್ಯಕ್ರಮವನ್ನು ಶಾಲಾ ವಿದ್ಯಾರ್ಥಿನಿ ಕುಮಾರಿ ಪೂರ್ವಿಭಟ್ ನಿರೂಪಿಸಿ, ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ.ವಿ ಸ್ವಾಗತಿಸಿ, ಶಾಲಾ ವಿದ್ಯಾರ್ಥಿನಿ ಕುಮಾರಿ ತನ್ವಿ ನಡೆಸಿಕೊಟ್ಟು ವಂದನಾರ್ಪಣೆಯನ್ನು ಕುಮಾರಿ ನಿವೇದ್ಯ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಅಧ್ಯಾಪಕ ವೃಂದ ಶಿಕ್ಷಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.