25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪುದುವೆಟ್ಟು ಶ್ರೀ ಧ.ಮಂ.ಅ. ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

ಪುದುವೆಟ್ಟು: ಇಲ್ಲಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರದ ಉದ್ಘಾಟನೆ ಸಮಾರಂಭವು ಎ.1ರಂದು ನಡೆಯಿತು.


ಬೇಸಿಗೆ ಶಿಬಿರದ ಉದ್ಘಾಟನೆಯನ್ನು ಅರಸಿನಮಕ್ಕಿ ಕಾಲೇಜಿನ ಉಪನ್ಯಾಸಕಿ ಶ್ರೀಮತಿ ಸೌಮ್ಯಶ್ರೀ ದೀಪ ಪ್ರಜ್ವಲನೆ ಮಾಡುವುದರ ಮೂಲಕ ಬೇಸಿಗೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ ಇಂತಹ ಬೇಸಿಗೆ ಶಿಬಿರಗಳನ್ನು ವಿದ್ಯಾರ್ಥಿಗಳು ಉತ್ತಮ ರೀತಿಯಲ್ಲಿ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು, ಮುಂಬರುವ ದಿನಗಳಲ್ಲಿ ಬೇಸಿಗೆ ಶಿಬಿರದಿಂದ ಆಗುವ ಉಪಯೋಗಗಳನ್ನು ವಿದ್ಯಾರ್ಥಿ ಜೀವನದಲ್ಲಿ ಮೈಗೂಡಿಸಿಕೊಂಡೋಗಬೇಕು, ವಿದ್ಯಾರ್ಥಿಗಳು ಸಾಮಾಜಿಕ ಮೌಲ್ಯಗಳನ್ನು ಬೆಳೆಸಿಕೊಂಡು ಉತ್ತಮ ಪ್ರಜೆಗಳಾಗಬೇಕು ಎಂದು ಎಂದು ತಿಳಿಸಿದರು.


ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾದ ಅಭಿನಯ ಗೀತೆಯಲ್ಲಿ ರಾಜ್ಯ ಪ್ರಶಸ್ತಿ ಪಡೆದಂತಹ ಶ್ರೀಮತಿ ರಂಜಿನಿ ಮುಂಡಾಜೆ ಉಪಸ್ಥಿತರಿದ್ದರು.


ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪ ಗೌಡರವರು ವಹಿಸಿ ಮಾತನಾಡಿ ಉತ್ತಮ ನುರಿತ ಸಂಪನ್ಮೂಲ ವ್ಯಕ್ತಿಗಳು ಬೇಸಿಗೆ ಶಿಬಿರದಲ್ಲಿ ನಿಮಗೆ ತಿಳಿಸಿಕೊಟ್ಟಂತಹ ವಿಚಾರಗಳನ್ನು ತಿಳಿದುಕೊಳ್ಳಬೇಕು ಎಂದರು..
ಸಭಾ ಕಾರ್ಯಕ್ರಮದ ನಂತರ ಶ್ರೀಮತಿ ರಂಜಿನಿ ಅವರು ವಿದ್ಯಾರ್ಥಿಗಳಿಗೆ ಅಭಿನಯ ಗೀತೆ, ನಾಟಕ ಅಭಿನಯ, ಏಕಪಾತ್ರ ಅಭಿನಯ, ಜಾನಪದ ಗೀತೆಗಳನ್ನು ತಿಳಿಸಿಕೊಟ್ಟರು. ವಿದ್ಯಾರ್ಥಿಗಳು ಉತ್ತಮ ರೀತಿಯಲ್ಲಿ ಬೇಸಿಗೆ ಶಿಬಿರದ ಪ್ರಯೋಜನವನ್ನು ಪಡೆದುಕೊಂಡರು.
ವಿದ್ಯಾರ್ಥಿಗಳ ಪ್ರಾರ್ಥನಾ ಗೀತೆಯೊಂದಿಗೆ ಪ್ರಾರಂಭಗೊಂಡ ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕಿ ಶ್ರೀಮತಿ ಶೀಲಾ ಎನ್ ಸ್ವಾಗತಿಸಿ, ಶ್ರೀಮತಿ ವೇದಾವತಿ ಧನ್ಯವಾದವಿತ್ತರು. ಕಾರ್ಯಕ್ರಮವನ್ನು ಶಾಲಾ ಶಿಕ್ಷಕಿ ಪುಷ್ಪಲತಾ ನಿರೂಪಿಸಿದರು. ಶಾಲೆ ಎಲ್ಲ ಶಿಕ್ಷಕರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಸಹಕರಿಸಿದ್ದರು.

Related posts

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಇಲೆಕ್ಟ್ರಿಕಲ್ ಮೋಟಾರು ರಿವೈಂಡಿಂಗ್ ಮತ್ತು ಪಂಪ್ ಸೆಟ್ ರಿಪೇರಿ ತರಬೇತಿಯ ಸಮಾರೋಪ

Suddi Udaya

ಉಜಿರೆ: ಬರೆಮೇಲು ನಿವಾಸಿ ರಾಮಪ್ಪ ಪೂಜಾರಿ ನಿಧನ

Suddi Udaya

ಶಿಶಿಲ ಶೌರ್ಯ ವಿಪತ್ತು ತಂಡದ ಕೆಲಸ ಕಾರ್ಯಗಳನ್ನು ಮೆಚ್ಚಿ ಜೀವರಕ್ಷಕ ಪರಿಕರಗಳನ್ನು ಕೊಡುಗೆಯಾಗಿ ನೀಡಿದ ಎಸ್ ಎಂ ಶಿವಪ್ರಕಾಶ್

Suddi Udaya

ಗುಂಡೂರಿ: ವರಮಹಾಲಕ್ಷ್ಮಿ ಪೂಜಾ ಅಂಗವಾಗಿ ಗ್ರಾಮಸ್ಥರಿಗೆ ವಿವಿಧ ಆಟೋಟ ಸ್ಪರ್ಧೆ ಮತ್ತು ಆಟಿದ ಕೂಟ

Suddi Udaya

ಕಾಪಿನಡ್ಕ: ಶಿವಗಿರಿ ಕೃಪಾದಲ್ಲಿ ಅಂಧರ ಗೀತಾ ಗಾಯನ ಕಾರ್ಯಕ್ರಮ

Suddi Udaya

ಉಜಿರೆ ಟೌನ್ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಈದ್ ಆಚರಣೆ

Suddi Udaya
error: Content is protected !!