ಬೆಳ್ತಂಗಡಿ: ಪುಂಜಾಲಕಟ್ಟೆ-ಪುರಿಯ-ಕುಕ್ಕೆಡಿ ಹಾಗು ವೇಣೂರು ರಸ್ತೆಯನ್ನು ಸಂಪರ್ಕಿಸುವ ಮಾಲಾಡಿ ಹಾಗು ಕುಕ್ಕಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಾದು ಹೋಗುವ ಈ ರಸ್ತೆಯ ಅಭಿವೃದ್ಧಿ ಕಾಮಗಾರಿ ಸಲುವಾಗಿ ಅಲ್ಲಲ್ಲಿ ರಸ್ತೆಯನ್ನು ಅಗೆದು ಹಾಕಿದ ಪರಿಣಾಮ ಸಂಚರಿಸಲು ಅಸಾಧ್ಯವಾದ ರೀತಿಯಲ್ಲಿದೆ.


ಪ್ರತಿನಿತ್ಯ ಸಂಚಾರಿಸುವರು ಎದ್ದು ಬಿದ್ದು ಚಲಿಸುವ ಸ್ಥಿತಿಗೆ ಬಂದು ತಲುಪಿದೆ. ಸಂಬAಧಪಟ್ಟ ಅಧಿಕಾರಿಗಳಿಗೆ, ಗುತ್ತಿಗೆದಾರರಿಗೆ, ಜನಪ್ರತಿನಿಧಿಗಳಿಗೆ ಜನರು ಹಿಡಿಶಾಪ ಹಾಕುತ್ತಿದ್ದಾರೆ. ಕೂಡಲೇ ರಸ್ತೆಯನ್ನು ಸರಿ ಪಡಿಸುವಂತೆ ನಾಗರಿಕರು ಆಗ್ರಹಿಸಿದ್ದಾರೆ.