ಬೆಳ್ತಂಗಡಿ: ಇಲ್ಲಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ತ್ರೋಬಾಲ್ ಕ್ರೀಡಾಕೂಟವನ್ನು ಮಂಗಳೂರು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ನಿರ್ದೇಶಕರ ಸಂಘದ ಅಧ್ಯಕ್ಷ ಡಾ. ಶೇಷಪ್ಪ ಉದ್ಘಾಟಿಸಿ, ವಿದ್ಯಾರ್ಥಿಗಳಲ್ಲಿ ಕ್ರೀಡೆಯ ಬಗ್ಗೆ ಉತ್ಸಾಹ ಹೆಚ್ಚಾದಾಗ ಅವರು ಮಾನಸಿಕವಾಗಿ ಹಾಗೂ ದೈಹಿಕವಾಗಿ ಆರೋಗ್ಯವಾಗಿರುತ್ತಾರೆ. ಬೆಳ್ತಂಗಡಿ ಕಾಲೇಜು ಕ್ರೀಡೆಯಲ್ಲಿ ಹೆಚ್ಚು ಸಾಧನೆಯನ್ನು ಮಾಡುವಂತಾಗಲಿ ಎಂದು ಹಾರೈಸಿದರು.

ಮುಖ್ಯ ಅತಿಥಿಗಳಾದ ಉಜಿರೆಯ ಲಕ್ಷ್ಮೀ ಗ್ರೂಪ್ಸ್ ಮಾಲೀಕರಾದ ಮೋಹನ್ ಕುಮಾರ್ ಕ್ರೀಡಾಂಗಣವನ್ನು ಉದ್ಘಾಟಿಸಿ, ಕಾಲೇಜಿನ ಕ್ರೀಡಾಪಟುಗಳಿಗೆ ಎಲ್ಲಾ ರೀತಿಯ ಸಹಕಾರವನ್ನು ನೀಡುವುದಾಗಿ ಕ್ರೀಡಾಪಟುಗಳಿಗೆ ಸ್ಪೂರ್ತಿ ತುಂಬಿ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು. ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜಗದೀಶ್ ಕಾಲೇಜಿನ ವಿದ್ಯಾರ್ಥಿಗಳಲ್ಲಿ ಕ್ರೀಡಾ ಹಾಗೂ ಸಾಂಸ್ಕೃತಿಕ ಪ್ರತಿಭೆಗಳನ್ನು ಬೆಳೆಸಲು ಹಿರಿಯ ವಿದ್ಯಾರ್ಥಿ ಸಂಘ ಕಾಲೇಜಿನೊಂದಿಗೆ ಸಕ್ರೀಯವಾಗಿರುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ. ಸುರೇಶ್ ವಿ., ಕಾಲೇಜಿನಲ್ಲಿ ಕ್ರೀಡಾಪಟುಗಳು ರಾಷ್ಟಿçÃಯ ಮಟ್ಟಕ್ಕೆ ಆಯ್ಕೆಯಾಗಲು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ರಾಧಾಕೃಷ್ಣ ಹೆಚ್. ಬಿ., ಪರಿಶ್ರಮ ಹಾಕುತ್ತಿದ್ದಾರೆ ಮಕ್ಕಳು ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು. 2022ರಲ್ಲಿ ಬರುವಾಗ ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜಾ ಇವರು ಕಾಲೇಜಿಗೆ ಹೊಸ ಕಟ್ಟಡವನ್ನು ನಿರ್ಮಾಣ ಮಾಡುವುದರ ಮೂಲಕ ಕಾಲೇಜಿನ ಅಭಿವೃದ್ಧಿಗೆ ಪೂರಕವಾಗಿ ಸ್ಪಂದಿಸುತ್ತಿದ್ದಾರೆ ಹಾಗೂ ನಮ್ಮ ಎಲ್ಲಾ ಚಟುವಟಿಕೆಗಳಿಗೆ ಸಹಕರಿಸುತ್ತಿದ್ದಾರೆ ಎಂದು ತಿಳಿಸಿದರು.

ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರಾಧಾಕೃಷ್ಣ ಹೆಚ್.ಬಿ. ಕ್ರೀಡಾಕೂಟದ ಬಗ್ಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ಶಿಕ್ಷಕರಕ್ಷಕ ಸಂಘದ ಅಧ್ಯಕ್ಷೆ ಶ್ರೀಮತಿ ವೈಲೆಟ್ ಮೊರಾಸ್, ಉಪಾಧ್ಯಕ್ಷ ಉಸ್ಮಾನ್, ಸ್ನಾತ್ತಕೋತ್ತರ ವಿಭಾಗದ ಸಂಚಾಲಕರಾದ ಡಾ. ರವಿ ಎಂ.ಎನ್., ಕ್ರೀಡಾ ಕಾರ್ಯದರ್ಶಿಗಳಾದ ರೂಪೇಶ್ ಹಾಗೂ ಗುರುಪ್ರಸಾದ್ ಉಪಸ್ಥಿತರಿದ್ದರು.
ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಪ್ರೊ| ಪದ್ಮನಾಭ ಕೆ ಸ್ವಾಗತಿಸಿ, ಐಕ್ಯೂಎಸಿ ಸಂಚಾಲಕ ಡಾ| ಕುಶಾಲಪ್ಪ ಎಸ್ ವಂದಿಸಿದರು.