ವೇಣೂರು: ಅಂಡಿಂಜೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟ ಅಂಡಿಂಜೆ ನಿವಾಸಿ ಮಂಗಳಾದೇವಿ ಮೇಳದ ಯಕ್ಷಗಾನ ಭಾಗವತರಾದ ದಿ| ಸತೀಶ್ ಆಚಾರ್ಯ ರವರ ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ನೀಡಿದರು.

ಸತೀಶ್ ಆಚಾರ್ಯ ತಾಯಿಗೆ ಹಾಗೂ ಕುಟುಂಬದವರಿಗೆ ಸಾಂತ್ವನ ಹೇಳಿದರು,. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಸುರೇಶ್ ಪೂಜಾರಿ ,ಪರಮೇಶ್ವರ್ , ಪ್ರಮುಖರಾದ ತೋಮಸ್ ನೊರೊನ್ಹಾ, ರಾಜೇಶ್ ಅಂಡಿಂಜೆ ಉಪಸ್ಥಿತರಿದ್ದರು.