
ಬೆಳ್ತಂಗಡಿ: ವಿಧಾನಸಭೆಯಿಂದ 18 ಬಿಜೆಪಿ ಶಾಸಕರ ಅಮಾನತು ವಾಪಸ್ ಪಡೆಯುವಂತೆ ಆಗ್ರಹಿಸಿ ಬಿಜೆಪಿಯ ಶಾಸಕರುಗಳು ಏ.2 ರಂದು ಧರಣಿ ನಡೆಸಿದರು. ವಿಧಾನಸೌಧದ ಪಶ್ಚಿಮದ್ವಾರದಲ್ಲಿರುವ ಕೆಂಗಲ್ ಹನುಮಂತಯ್ಯ ಪ್ರತಿಮೆ ಬಳಿ ಪ್ರತಿಪಕ್ಷ ನಾಯಕರುಗಳಾದ ಆರ್. ಅಶೋಕ್, ಛಲವಾದಿ ನಾರಾಯಣಸ್ವಾಮಿ, ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿಯ ವಿಧಾನಸಭೆ ಮತ್ತು ವಿಧಾನ ಪರಿಷತ್ ಸದಸ್ಯರುಗಳು ಧರಣಿ ನಡೆಸಿ 18 ಶಾಸಕರ ಅಮಾನತನ್ನು ಕೂಡಲೇ ವಾಪಸ್ ಪಡೆಯುವಂತೆ ಒತ್ತಾಯಿಸಿದರು.