ಬೆಳ್ತಂಗಡಿ: ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯತಿಗಳ ತೆರಿಗೆ ದರ ಮತ್ತು ಫೀಸುಗಳು) ನಿಯಮಗಳು 2021 ರಂತೆ ಆರ್ಥಿಕ ವರ್ಷದ ಪ್ರಾರಂಭದ ಮೂರು ತಿಂಗಳ ಒಳಗಾಗಿ ಪ್ರಸಕ್ತ ಸಾಲಿನ ಸಂಪೂರ್ಣ ತೆರಿಗೆಯನ್ನು ಪಾವತಿಸುವವರಿಗೆ ಶೇ.5ರಷ್ಟು ವಿನಾಯಿತಿಯನ್ನು ನೀಡಲಾಗಿರುತ್ತದೆ. ಅದರಂತೆ, 2025-26ನೇ ಸಾಲಿನ ತೆರಿಗೆಗಳನ್ನು 2025ರ ಜೂನ್ ತಿಂಗಳ 30ರೊಳಗೆ ಸಂಪೂರ್ಣವಾಗಿ ಪಾವತಿಸುವವರಿಗೆ ಶೇ.5ರಷ್ಟು ವಿನಾಯಿತಿ ದೊರಕಲಿದ್ದು, ತಾಲೂಕಿನ ಎಲ್ಲಾ ತೆರಿಗೆದಾರರು ನಿಗದಿತ ಅವಧಿಯೊಳಗೆ ಸಂಬAಧಪಟ್ಟ ಗ್ರಾಮ ಪಂಚಾಯತಿನಲ್ಲಿ ಪಾವತಿಸಿ ತೆರಿಗೆ ವಿನಾಯಿತಿಯ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಬೆಳ್ತಂಗಡಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಭವಾನಿಶಂಕರ್ ಎನ್. ಪ್ರಕಟನೆಯಲ್ಲಿ ತಿಳಿಸಿದ್ದಾರೆ.

previous post