April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಿದ್ಯುತ್ ತಂತಿ ಮೇಲೆ ಬಿದ್ದ ಮರದ ಗೆಲ್ಲು: ಶಾಕ್ ತಗಲಿ ಕಾರ್ಮಿಕ ಚನನ ಗೌಡ ಮೃತ್ಯು

ಬೆಳ್ತಂಗಡಿ: ಇಲ್ಲಿಯ ಹುಣ್ಸೆಕಟ್ಟೆ ಸಮೀಪದ ಪುಂಡಿಕ್ಕು ಎಂಬಲ್ಲಿ ಮರದ ಗೆಲ್ಲು ಕಡಿಯುತ್ತಿರುವಾಗ ಆಕಸ್ಮಿಕವಾಗಿ ವಿದ್ಯುತ್ ತಂತಿ ಮೇಲೆ ಬಿದ್ದು ವಿದ್ಯುತ್ ಶಾಕ್ ತಗಲಿ ಗೆಲ್ಲು ಕಡಿಯುತ್ತಿದ್ದ ಕಾರ್ಮಿಕ ಮೃತಪಟ್ಟ ದಾರುಣ ಘಟನೆ ಇಂದು ಬೆಳಿಗ್ಗೆ ಪುಂಡಿಕ್ಕು ಎಂಬಲ್ಲಿ ನಡೆದಿದೆ.


ಬೆಳ್ತಂಗಡಿ ತಾಲೂಕಿನ ಕಸಬಾ ಗ್ರಾಮದ ಪುಂಡಿಕ್ಕು ಎಂಬಲ್ಲಿ ಚನನ ಗೌಡ (೬೯ವ) ಎಂಬವರು ಇಂದು ಬೆಳಿಗ್ಗೆ ಮೆಸ್ಕಾಂ ಇಲಾಖೆಯ ಅನುಮತಿ ಪಡೆಯದೇ, ಖಾಸಗಿ ಜಮೀನಿನಲ್ಲಿ ಇರುವ ಮರದ ಗೆಲ್ಲು ಕಡಿಯುವಾಗ, ಗೆಲ್ಲು ಆಕಸ್ಮಿಕವಾಗಿ, ಅಲ್ಲಿಯೇ ರಸ್ತೆಯಲ್ಲಿ ಹಾದು ಹೋಗಿರುವ ೧೧ಕೆವಿ ಕುವೆಟ್ಟು ಫೀಡರ್‌ನ ಹೆಚ್.ಟಿ ಲೈನ್‌ಗೆ ಬಿದ್ದು ಈ ಘಟನೆ ನಡೆದಿದೆ. ಗೆಲ್ಲು ತಂತಿ ಮೇಲೆ ಬಿದ್ದುದರಿಂದ ವಿದ್ಯುತ್ ಶಾಕ್ ತಗಲಿ, ಮರದಿಂದ ಕೆಳಗೆ ಬಿದ್ದಿದ್ದು, ಕೂಡಲೇ ಅವರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ಯಲಾಯಿತು. ಅಲ್ಲಿಯ ವೈದ್ಯರು ತಪಾಸಣೆ ನಡೆಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದು ಕೊಂಡು ಹೋಗಲು ತಿಳಿಸಿದ್ದು, ಅದರಂತೆ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ದಾರಿ ಮಧ್ಯೆ ಅವರು ಮೃತ ಪಟ್ಟಿರುವುದಾಗಿ ತಿಳಿದು ಬಂದಿದೆ.


ಈ ಬಗ್ಗೆ ಬೆಳ್ತಂಗಡಿ ಶಾಖಾಧಿಕಾರಿಯವರು ಬೆಳ್ತಂಗಡಿ ಪೋಲಿಸ್ ಠಾಣೆಯಲ್ಲಿ ದೂರನ್ನು ನೀಡಿದ್ದಾರೆ. ಮಾಹಿತಿಯನ್ನು ಇಲೆಕ್ಟ್ರಿಕಲ್ ಇನ್‌ಸ್ಪೆಕ್ಟರೇಟ್‌ಗೂ ನೀಡಲಾಗಿದೆ.

Related posts

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿ ನೂತನ ಜಮಾತ್ ಕಮಿಟಿ ರಚನೆ: ನವಾಝ್ ಶರೀಫ್ ಕಟ್ಟೆ 3 ನೇ ಬಾರಿಗೆ ಅಧ್ಯಕ್ಷರಾಗಿ ಪುನರಾಯ್ಕೆ

Suddi Udaya

ಜಾವೆಲಿನ್ ಎಸೆತ: ಮಚ್ಚಿನ ಸ.ಪ್ರೌ. ಶಾಲಾ ವಿದ್ಯಾರ್ಥಿ ಮಹಮದ್ ಯಾಸ್ಮಿರ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಅಭಿನಂದನಾ ಸಭೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಇಂದಬೆಟ್ಟು: ಪಿಲಿಕಜೆ ನಿವಾಸಿ ಓಬಯ್ಯ ಗೌಡ ನಿಧನ

Suddi Udaya

ಅಕ್ಟೋಬರ್ 2ರಂದು ಬೆಳ್ತಂಗಡಿಯಲ್ಲಿ ತಾಲೂಕು ಮಟ್ಟದ ಗಾಂಧಿ ಜಯಂತಿ ಆಚರಣೆಗೆ ನಿರ್ಧಾರ: ತಾ. ಜನಜಾಗೃತಿ ವೇದಿಕೆ ಸಭೆ

Suddi Udaya
error: Content is protected !!