24.5 C
ಪುತ್ತೂರು, ಬೆಳ್ತಂಗಡಿ
April 5, 2025
Uncategorized

ಪದ್ಮುಂಜ ಶಾಲೆಯಲ್ಲಿ ಪರೀಕ್ಷೆಗೆ ಅವಕಾಶ ನೀಡಿಲ್ಲ ಎಂಬ ಆರೋಪ: ಪರೀಕ್ಷೆಗೆ ಹಾಜರಾದ ಇಬ್ಬರೂ ವಿದ್ಯಾರ್ಥಿಗಳು

ಪದ್ಮುಂಜ: ಪದ್ಮುಂಜ ಸರಕಾರಿ ಪ್ರೌಢಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಿಂದ ಇಬ್ಬರು ವಿದ್ಯಾರ್ಥಿನಿಯರಿಗೆ ಕಲಿಕೆಯಲ್ಲಿ ಹಿಂದುಳಿದಿದ್ದಾರೆಂಬ ಕಾರಣಕ್ಕೆ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಲಾಗಿದ್ದ ಪ್ರಸಂಗ ಬಗೆಹರಿದಿದ್ದು, ಇಬ್ಬರೂ ಎ.2 ರಂದು ಪರೀಕ್ಷೆ ಬರೆದಿದ್ದಾರೆ.

ಶೇ. ನೂರು ಫಲಿತಂಶದ ಕಾರಣಕ್ಕೆ ಕಲಿಕೆಯಲ್ಲಿ ಹಿಂದುಳಿದಿರುವ ತಮಗೆ ಅವಕಾಶ ನಿರಾಕರಿಸಲಾಗಿದೆ ಎಂದು ದೂರು ನೀಡಿರುವ ಪ್ರಕರಣದಲ್ಲಿ ಮಧ್ಯಪ್ರವೇಶಿಸಿದ ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ, ಇಬ್ಬರಿಗೂ ಪ್ರವೇಶ ಪತ್ರ ನೀಡಿದ್ದರು. ಆ ಬಳಿಕವೂ ವಿದ್ಯಾರ್ಥಿನಿಯರು ಪರೀಕ್ಷೆ ಬರೆಯಲು ಹಿಂದೇಟು ಹಾಕಿದ್ದರು. ಅವರ ಮನವೊಲಿಸಿದ ಪರಿಣಾಮ ಕರಾಯ ಪ್ರೌಢ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ವಿಜ್ಞಾನ ಪರೀಕ್ಷೆಯನ್ನು ಬರೆದರು. ಉಳಿದ ಒಂದು ಪರೀಕ್ಷೆಯನ್ನು ಬರೆದರೆ, ಉಳಿದ ನಾಲ್ಕು ಪರೀಕ್ಷೆಗಳನ್ನು ಮುಂದಿನ 2 ಹಂತಗಳಲ್ಲಿ ಬರೆಯಬಹುದಾಗಿದೆ.

ಪ್ರಕರಣದ ಬಗ್ಗೆ ಬಂದ ದೂರನ್ನು ಆಧರಿಸಿ ತನಿಖೆ ನಡೆಸಲಾಗುತ್ತಿದೆ. ಇನ್ನೆರಡು ಹಂತಗಳಲ್ಲೂ ತೃಪ್ತಿಕರ ಅಂಕ ಬಾರದಿದ್ದರೆ ಮೂರನೇ ಹಂತದ ಪರೀಕ್ಷೆಯನ್ನು ಬರೆಯಲು ಅವಕಾಶವಿದೆ ಎಂದು ತಾರಕೇಶರಿ ತಿಳಿಸಿದ್ದಾರೆ.

Related posts

ಕೇಂದ್ರ ಸರ್ಕಾರದ ಪಿಎಂ ಜನ್ ಮನ್ ಕಾರ್ಯಕ್ರಮದಡಿ ನಿರ್ಮಾಣಗೊಳ್ಳಲಿರುವ ವಸತಿ ಶಾಲೆಯ ಆವರಣ: ಶಾಸಕ ಹರೀಶ್ ಪೂಂಜರಿಂದ ಸ್ಥಳ ಪರಿಶೀಲನೆ

Suddi Udaya

ಪಟ್ರಮೆ: ಪಾದೆ ನಿವಾಸಿ ಶ್ರೀಮತಿ ಪುಷ್ಪವತಿ ನಿಧನ

Suddi Udaya

ಉಜಿರೆ : ಹಳೆಪೇಟೆ ಬಳಿ ಸಂಚರಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ: ಬೈಕ್ ಸವಾರ ಪ್ರಾಣಾಪಾಯದಿಂದ ಪಾರು

Suddi Udaya

ಉಜಿರೆ ಗ್ರಾ.ಪಂ. ಗೆ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಭೇಟಿ

Suddi Udaya

ಅರಸಿನಮಕ್ಕಿ -ಶಿಶಿಲ ಘಟಕದ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸ್ವಯಂಸೇವಕರಿಂದ ಕೊಕ್ಕಡ ಸರಕಾರಿ ಆಸ್ಪತ್ರೆಯ ಬಾವಿಯ ಸ್ವಚ್ಛತಾ ಕಾರ್ಯ

Suddi Udaya

ಮುಂಡಾಜೆ ಕಾರ್ಗಿಲ್ ವನದಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya
error: Content is protected !!