25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಇಲೆಕ್ಟ್ರಿಕಲ್ ಮೋಟಾರು ರಿವೈಂಡಿಂಗ್ ಮತ್ತು ಪಂಪ್ ಸೆಟ್ ರಿಪೇರಿ ತರಬೇತಿಯ ಸಮಾರೋಪ

ಉಜಿರೆ : ಇಂದು ಹೆಚ್ಚುತ್ತಿರುವ ಜನಸಂಖ್ಯೆಯ ಪರಿಣಾಮ ನಮ್ಮ ದೇಶದಲ್ಲಿ ಪ್ರತಿಯೊಂದು ಕ್ಷೇತ್ರದಲ್ಲಿ ಸ್ಪರ್ಧೆ ಇರುವುದರಿಂದ ಜೀವನದಲ್ಲಿ ಪ್ರಸ್ತುತ ವಿದ್ಯಾಮಾನಕ್ಕೆ ಬೇಕಾದ ಕೌಶಲ್ಯವನ್ನು ಕಲಿಯುವುದರ ಮೂಲಕ ನಮ್ಮ ಯಶಸ್ಸು ಇರುತ್ತದೆ. ಹೊಸ ಹೊಸ ಕ್ಷೇತ್ರದಲ್ಲಿ ಉದ್ಯಮಗಳನ್ನು ಆರಂಭಿಸುವ ಪ್ರಾಮಾಣಿಕ ಪ್ರಯತ್ನವನ್ನು ಮಾಡಬೇಕು. ಕೆಲವೂಂದು ಸಾಮಾಜಿಕ ಜಾಲತಾಣಗಳಲ್ಲಿ ಬರುವ ಸುಲಭವಾಗಿ ಹಣ ಮಾಡುವ ಯೋಜನೆ, ಯೋಚನೆಗಳಿಗೆ ಮಾರು ಹೋಗದೇ, ಸ್ವಯಂ ಶಿಸ್ತು ಅಳವಡಿಸಿಕೊಂಡು ವೃತ್ತಿ ಜೀವನದಲ್ಲಿ ಯಶಸ್ಸು ಗಳಿಸಬಹುದು. ಇದಕ್ಕೆ ಪೂರಕವಾಗಿ ನಿಮಗೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ನಡೆಯುವ ರುಡ್ ಸೆಟ್ ಸಂಸ್ಥೆಯಲ್ಲಿ ಅತ್ಯತ್ತುಮವಾದ ತರಬೇತಿಯನ್ನು ಪಡೆದುಕೊಂಡಿದ್ದೀರಿ ಅದನ್ನು ಜೀವನದಲ್ಲಿ ಮತ್ತು ಸ್ವ ಉದ್ಯೋಗದಲ್ಲಿ ಉಪಯೋಗಿಸಿಕೊಂಡು ಯಶಸ್ವಿಗಳಿಸಿ ಎಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಕ್ ಕಾಲೇಜಿನ ಪ್ರಾಶುಂಪಾಲರಾದ ಸಂತೋಷ ಅಭಿಪ್ರಾಯಪಟ್ಟರು.

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ 30 ದಿನಗಳ ಕಾಲ ನಡೆದ ಇಲೆಕ್ಟ್ರಿಕಲ್ ಮೋಟಾರು ರಿವೈಂಡಿಂಗ್ ಮತ್ತು ಪಂಪ್ ಸೆಟ್ ರಿಪೇರಿ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಪ್ರಮಾಣ ಪತ್ರ ವಿತ್ತರಿಸಿ ಮಾತನಾಡಿದರು. ಮೌಲ್ಯ ಮತ್ತು ಕೌಶಲ್ಯವನ್ನು ಸದ್ಬಳಕೆ ಮಾಡಿಕೊಳ್ಳಿ ಎಂದು ಶುಭ ಹಾರೈಸಿದರು.

ಅತಿಥಿಗಳನ್ನು ರುಡ್ ಸೆಟ್ ಸಂಸ್ಥೆಯ ನಿರ್ದೇಶಕ ಅಜೇಯ ಸ್ವಾಗತಿಸಿದರು. ಸಂಸ್ಥೆಯ ಹಿರಿಯ ಉಪನ್ಯಾಸಕರಾದ ಕೆ.ಕರುಣಾಕರ ಜೈನ್ ಕಾರ್ಯಕ್ರಮ ನಿರೂಪಿಸಿದರು. ಅಬ್ರಹಾಂ ಜೇಮ್ಸ್ ವಂದಿಸಿದರು. ಸುಮಾರು 33 ಜನ ಶಿಬಿರಾರ್ಥಿಗಳ ಭಾಗವಹಿಸಿದ್ದರು,

Related posts

ನಾಲ್ಕೂರು: ರಾಮನಗರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಮಾಸಾಚರಣೆ ಕಾರ್ಯಕ್ರಮ

Suddi Udaya

ಉಜಿರೆ ಎಸ್‌ಡಿಎಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ಸಂಭ್ರಮ ಶನಿವಾರ’ ಆಚರಣೆ

Suddi Udaya

ಬೆದ್ರಬೆಟ್ಟು ಶ್ರೀ ಕ್ಷೇತ್ರ ಮಹಮ್ಮಾಯಿ ಮಾರಿಗುಡಿ ಜೀರ್ಣೋದ್ಧಾರದ “ವಿಜ್ಞಾಪನಾ ಪತ್ರ” ಬಿಡುಗಡೆ

Suddi Udaya

ಧರ್ಮಸ್ಥಳ: ನೇರ್ತನೆ ನಿವಾಸಿ ಸ್ಟ್ಯಾನಿ ಜೋಸೆಫ್ ನಿಧನ

Suddi Udaya

ನಾರಾವಿ ಮಾಂಡೋವಿ ಮೋಟಾರ್ಸ್ ನಲ್ಲಿ ಎಸ್‌ಯುವಿ ವಿಭಾಗದ ವಿಕ್ಟೋರಿಸ್ ಕಾರು ಬಿಡುಗಡೆ

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿಯ ಅಧ್ಯಕ್ಷರಾಗಿ ಪ್ರೊ.ಗಣಪತಿ ಭಟ್ ಪುನರಾಯ್ಕೆ

Suddi Udaya
error: Content is protected !!