26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಸಮಾಲೋಚನೆ ಸಭೆ

ಬೆಳ್ತಂಗಡಿ: ಬೆಲೆ ಏರಿಕೆಯ ಬರೆಯಿಂದ ತತ್ತರಿಸುತ್ತಿರುವ ರಾಜ್ಯದ ಜನತೆಗೆ ನ್ಯಾಯ ದೊರಕಿಸುವವರೆಗೂ ನಾವು ಶ್ರಮಿಸುವುದಿಲ್ಲ.ಎ. 9 ರಂದು ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಹೋರಾಟ ನಡೆಯಲಿದ್ದು, ಅತಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಂಡು ಕಾಂಗ್ರೆಸ್ ಸರಕಾರದ ದುರಾಡಳಿತ ನೀತಿಯನ್ನು ಖಂಡಿಸೋಣ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹೇಳಿದರು.

ಅವರು ಎ. 4 ರಂದು ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿಯ ಕಚೇರಿಯಲ್ಲಿ ನಡೆದ ಬಿಜೆಪಿ ಸಭೆಯಲ್ಲಿ ಮಾತನಾಡಿದರು.

ಎಪ್ರಿಲ್ 6 ರಂದು ನಡೆಯುವ ಸಂಸ್ಥಾಪನ ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗಹಿಸಬೇಕು ಹಾಗೂ ಎಪ್ರಿಲ್ 9 ರಂದು ನಡೆಯುವ ಜನಾಕ್ರೋಶ ಯಾತ್ರೆಯಲ್ಲಿಯೂ ಭಾಗವಹಿಸಬೇಕೆಂದರು.

ಈ ಸಂದರ್ಭದಲ್ಲಿ ವಿಧಾನ‌ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಭಾಜಪಾ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ,ಕೋಶಾಧಿಕಾರಿ ಸಂಜಯ್ ಪ್ರಭು,ಬಿಜೆಪಿ ಯುವ ಮೋರ್ಚಾ ಜಿಲ್ಲಾ ಅಧ್ಯಕ್ಷ ನಂದನ್ ಮಲ್ಯ, ಜಿಲ್ಲಾ ಓಬಿಸಿ ಮೋರ್ಚಾ ಅಧ್ಯಕ್ಷ ಮಹೇಶ್ ಜೋಗಿ, ಬೆಳ್ತಂಗಡಿ ಮಂಡಲ ಪ್ರ‌ಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಜಯಾನಂದ ಗೌಡ ಪ್ರಜ್ವಲ್, ಮಾಧ್ಯಮ ಪ್ರಮುಖ್ ವಸಂತ ಪೂಜಾರಿ, ಜಿಲ್ಲಾ ಕಾರ್ಯದರ್ಶಿ ಸೀತಾರಾಮ್ ಬಿ.ಎಸ್, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಗಣೇಶ್ ಗೌಡ ನಾವೂರು, ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ : ಪಾದಯಾತ್ರಿಗಳಿಗೆ ಸನ್ಮಾನ

Suddi Udaya

ಕನ್ಯಾಡಿ 2: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ನೆರಿಯ ಪೆಟ್ರೋನೆಟ್ ಎಂ ಎಚ್ ಬಿ ಕಂಪನಿ ವತಿಯಿಂದ ಡಿಜಿಟಲ್ ಪ್ರೊಜೆಕ್ಟರ್ ಕೊಡುಗೆ

Suddi Udaya

ಧರ್ಮಸ್ಥದಲ್ಲಿ 53ನೇ ವರ್ಷದ ಸಾಮೂಹಿಕ ವಿವಾಹ75 ಜೋಡಿ ಸತಿ-ಪತಿಗಳಾಗಿ ಗೃಹಸ್ಥಾಶ್ರಮಕ್ಕೆ

Suddi Udaya

ಬೆಳ್ತಂಗಡಿ ಬಸದಿಯಲ್ಲಿ ಮಹಾವೀರ ಜಯಂತಿ ಆಚರಣೆ

Suddi Udaya

ಮೇಲಂತಬೆಟ್ಟು ಗ್ರಾಮ ಪಂಚಾಯತ್ ಗೆ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ರಥ

Suddi Udaya

ತೋಟತ್ತಾಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದಿಂದ ಮಾಜಿ ಶಾಸಕ ದಿ| ವಸಂತ ಬಂಗೇರರಿಗೆ ನುಡಿನಮನ

Suddi Udaya
error: Content is protected !!