ಇಳಂತಿಲ : ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಶ್ರೀ ಮಹಾಭಾರತ ಸರಣಿಯಲ್ಲಿ 70ನೇ ಕಾರ್ಯಕ್ರಮವಾಗಿ ಇಳಂತಿಲ ಗ್ರಾಮದ ಇಚ್ಚೂರು ಶ್ರೀ ಬಾಲಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆಯ ಸಂದರ್ಭದಲ್ಲಿ ಕರ್ಣ ದಿಗ್ವಿಜಯ ತಾಳಮದ್ದಳೆ ನಡೆಯಿತು.
ಈ ಸಂದರ್ಭದಲ್ಲಿ ಕಲಾಪೋಷಕರಾದ ದೇವಳದ ಪ್ರಧಾನ ಅರ್ಚಕ ಸುರೇಶ ಪುತ್ತೂರಾಯ ಇವರನ್ನು ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ ವತಿಯಿಂದ ಗೌರವಿಸಲಾಯಿತು.
ಕಾಳಿಕಾಂಬ ಯಕ್ಷಗಾನ ಸೇವಾ ಸಂಘದ ಅಧ್ಯಕ್ಷ ದಿವಾಕರ್ ಆಚಾರ್ಯ ಗೇರುಕಟ್ಟೆ ಅಭಿನಂದನ ನುಡಿಗಳನ್ನಾಡಿದರು. ಹಿರಿಯ ಯಕ್ಷಗಾನ ಹಿಮ್ಮೇಳವಾದಕರಾದ ಲಕ್ಷ್ಮೀಶ ಅಮ್ಮಣ್ಣಾಯ, ನೆಲ್ಯಾಡಿ ವಿನಾಯಕ ಯಕ್ಷಗಾನ ಸಂಘದ ಅಧ್ಯಕ್ಷ ಜಯರಾಮ ಬಲ್ಯ, ಧಾರ್ಮಿಕ ದತ್ತಿ ಇಲಾಖೆಯ ಪರಿವೀಕ್ಷಕರಾದ ಶ್ರೀಧರ ಎಸ್ ಪಿ ಸುರತ್ಕಲ್ ಇವರು ಪುತ್ತುರಾಯರನ್ನು ಗೌರವಿಸಿದರು.
ಸಂಘದ ಕಾರ್ಯದರ್ಶಿ ಶ್ರೀಪತಿ ಭಟ್ ಉಪ್ಪಿನಂಗಡಿ, ಪಾತಾಳ ಅಂಬಾ ಪ್ರಸಾದ್ ಮತ್ತು ಸಂಘದ ಸದಸ್ಯರು ಉಪಸ್ಥಿತರಿದ್ದರು.
ಸುಂದರ ಶೆಟ್ಟಿ ಇಳಂತಿಲ ಸ್ವಾಗತಿಸಿ ಪೂರ್ಣಿಮಾ ರಾವ್ ಬೆಳ್ತಂಗಡಿ ಕಾರ್ಯಕ್ರಮ ನಿರೂಪಿಸಿದರು.