26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಎ.6-11: ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಲ್ಲಿ ಜಾತ್ರೋತ್ಸವ

ನಡ: ನಾಡಿನ ಮಣ್ಣಿನ ಹರಕೆಯ ಪ್ರಖ್ಯಾತ ಕ್ಷೇತ್ರ ಶ್ರೀ ಸದಾಶಿವ ರುದ್ರ ದೇವಸ್ಥಾನ ಸುರ್ಯದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ವರ್ಷಾವಧಿ ಜಾತ್ರಾ ಮಹೋತ್ಸವ ಎ.6ರಿಂದ ಎ.11ರವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಗಳೊಂದಿಗೆ ವಿಜೃಂಭಣೆಯಿಂದ ಜರುಗಲಿದೆ ಎಂದು ಅನುವಂಶಿಕ ಆಡಳಿತ ಮೊಕ್ತೇಸರ ಡಾ. ಸತೀಶ್ಚಂದ್ರ ಸುರ್ಯಗುತ್ತು ತಿಳಿಸಿದ್ದಾರೆ.

ಎ.6 ರಂದು ದೇವರ ಸನ್ನಿಧಿಯಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವದ ಅಂಗವಾಗಿ ಗಣಪತಿ ಹೋಮ, ಕಲಶ ಪೂಜೆ, ಕಲಶಾಭಿಷೇಕ ಮಹಾಪೂಜೆ ರಾತ್ರಿ ರಂಗಪೂಜೆ ದೇವರ ಉತ್ಸವ ನಡೆಯಲಿದೆ. ಎ.7 ರಂದು ಗಣಪತಿ ಹೋಮ, ನವಕ ಪ್ರಧಾನ ಕಲಶಾಭಿಷೇಕ, ಧ್ವಜಾರೋಹಣ, ನಿತ್ಯಬಲಿ ಮೊದಲಾದ ಕಾರ್ಯಕ್ರಮಗಳು ಜರುಗಲಿದೆ. ಎ.8ರಂದು ಮಹಾಪೂಜೆ, ನಿತ್ಯಬಲಿ, ಸಂಜೆ ಸುರ್ಯಗುತ್ತು ಮನೆಯಿಂದ ದೈವಗಳ ಭಂಡಾರ ತರುವುದು, ನಂತರ ಉತ್ಸವ ಹೊರಟು ವಸಂತಕಟ್ಟೆ ಪೂಜೆ ನಡೆಯಲಿದೆ. ಎ.9 ರಂದು ಸೊಡರಬಲಿ ಉತ್ಸವ ಬಳಿಕ ಮಹಾಪೂಜೆ ರಾತ್ರಿ ಉತ್ಸವ ಕಟ್ಟೆಪೂಜೆ ಜರುಗಲಿದೆ. ಎ.10 8.45 ರಿಂದ ದರ್ಶನ ಬಲಿ ಉತ್ಸವ, ಮಹಾಪೂಜೆ ರಾತ್ರಿ ಉತ್ಸವ ಹೊರಟು ಪುಷ್ಪರಥೋತ್ಸವ, ನಿತ್ಯ ಬಲಿ ಉತ್ಸವ, ಕೆರೆಕಟ್ಟೆ ಪೂಜೆ, ವiಹಾಪೂಜೆ, ಶಯನೋತ್ಸವ ಕಾರ್ಯಕ್ರಮ ನಡೆಯಲಿದೆ. ಎ.11 ರಂದು ಬೆಳಗ್ಗೆ ಕವಟೋದ್ಘಾಟನೆ, ಕಲಶಾಭಿಷೇಕ, ಮಹಾಪೂಜೆ, ಸಂಜೆ ಯಾತ್ರ ಹೋಮ, ಅವಭೃತ ಸ್ನಾನ, ರಾತ್ರಿ ಧ್ವಜಾರೋಹಣ ಬಳಿಕ ದೈವಗಳ ನೇಮ ನಡೆಯಲಿದೆ.

ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಎ.8ರಂದು ರಾತ್ರಿ ರಾಜ್ಯ ಪ್ರಶಸ್ತಿ ಪುರಸ್ಕೃತ ದೇವದಾಸ್ ಕಾಪಿಕಾಡ್ ನಟನೆಯ ಎರ್ಲಾ ಗ್ಯಾರಂಟಿ ಅತ್ತ್', ಎ.9 ರಂದು ರಾತ್ರಿ ಕಲರ್ಸ್ ಕನ್ನಡ ಖ್ಯಾತಿಯ, ಜಿಲ್ಲಾ ರಾಜೋತ್ಸವ ಪ್ರಶಸ್ತಿ ಪುರಸ್ಕೃತ ಪುತ್ತೂರು ಜಗದೀಶ್ ಆಚಾರ್ಯ ಮತ್ತು ಬಳಗದವರಿಂದ ಸಂಗೀತ ಗಾನ ಸಂಭ್ರಮ’, ಎ.10 ಸ್ಥಳೀಯ ಅಂಗನವಾಡಿ ಮತ್ತು ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ರಾತ್ರಿ ಸಂಗಮ ಕಲಾವಿದರು ಉಜಿರೆ ಇವರಿಂದ `ಕಾಸ್ದ ಕಸರತ್’ ಹಾಸ್ಯಮಯ ನಾಟಕ ಪ್ರದರ್ಶನಗೊಳ್ಳಲಿದೆ.

Related posts

ವಸಂತ ಬಂಗೇರರ ಉತ್ತರಕ್ರಿಯೆ ಅಂಗವಾಗಿ ಅಭಿಮಾನಿಗಳ ಸಮಾಲೋಚನಾ ಸಭೆ

Suddi Udaya

ಬೆಳ್ತಂಗಡಿ: ಹಿರಿಯ ವಕೀಲ ಶ್ರೀಧರ ಗೌಡ ನಿಧನ

Suddi Udaya

ಓಡಿಲ್ನಾಳ ಸುಮಂತ್ ಕೊಲೆ ಪ್ರಕರಣ: ಗೃಹ ಸಚಿವರನ್ನು ಭೇಟಿ ಮಾಡಿದ ಪೋಷಕರು

Suddi Udaya

ಸೌಜನ್ಯಳ ಅತ್ಯಾಚಾರ, ಕೊಲೆ ಪ್ರಕರಣದ ನೈಜ ಆರೋಪಿಗಳ ಪತ್ತೆಗೆ ಆಗ್ರಹ: ಆ.28 ರಂದು ಬೆಳ್ತಂಗಡಿ ತಾಲೂಕು ಕಚೇರಿ ಎದುರು ಮಹಾಧರಣಿ: ನಮ್ಮ ಹೋರಾಟ ಯಾರ ವಿರುದ್ಧವೂ ಅಲ್ಲ. ನ್ಯಾಯಕ್ಕಾಗಿ ನಮ್ಮ ಹೋರಾಟ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ವಸಂತ ಬಂಗೇರ ಹೇಳಿಕೆ

Suddi Udaya

ಗೆಜ್ಜೆಗಿರಿ ಯಕ್ಷಗಾನ ಮೇಳದ ಪ್ರಧಾನ ಸಂಚಾಲಕರಾಗಿ ಪ್ರಮಲ್ ಕುಮಾರ್ ಕಾರ್ಕಳ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಕಸದಿಂದ ರಸ ಸ್ಪರ್ಧೆ

Suddi Udaya
error: Content is protected !!