October 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು: ಕುಂಭಶ್ರೀ ಶಾಲೆಯ ಬಳಿ ಕಾರು ಹಾಗೂ ರಿಕ್ಷಾ ನಡುವೆ ಅಪಘಾತ: ರಿಕ್ಷಾ ಚಾಲಕನಿಗೆ ಗಾಯ

ವೇಣೂರು : ಇಲ್ಲಿಯ ಕುಂಭಶ್ರೀ ಶಾಲೆಯ ಬಳಿ ಕಾರು ಹಾಗೂ ರಿಕ್ಷಾ ನಡುವೆ ಅಪಘಾತವಾಗಿ ರಿಕ್ಷಾ ಚಾಲಕನಿಗೆ ಗಾಯವಾದ ಘಟನೆ ಎ.3 ರಂದು ನಡೆದಿದೆ.

ಘಟನೆ ವಿವರ:ಗುರುವಾಯನಕೆರೆ – ವೇಣೂರು- ಮೂಡಬಿದ್ರೆ ರಾಜ್ಯ ಹೆದ್ದಾರಿ ರಸ್ತೆಯಲ್ಲಿ ವೇಣೂರು ಕಡೆಯಿಂದ ಕಾರು ಅದರ ಚಾಲಕ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಲಾರಿಯೊಂದನ್ನು ಓವರ್ ಟೇಕ್‌ ಮಾಡಿಕೊಂಡು ಒಮ್ಮೆಲೆ ರಸ್ತೆಯ ರಾಂಗ್ ಸೈಡಿಗೆ ಚಲಾಯಿಸಿ ಎದುರಿನಿಂದ ಅಂದರೆ ಗುರುವಾಯನಕೆರೆ ಕಡೆಯಿಂದ ಪ್ರಯಾಣಿಸುತ್ತಿದ್ದ ಆಟೋರಿಕ್ಷಾಕ್ಕೆ ರಭಸದಿಂದ ಡಿಕ್ಕಿ ಹೊಡೆದು ಬಳಿಕ ಕಾರು ಚಾಲಕನ ಹತೋಟಿ ತಪ್ಪಿ ರಸ್ತೆ ಬದಿ ಮಗುಚಿ ಬಿದ್ದು, ವಾಹನಗಳೆರಡೂ ಜಖಂಗೊಂಡಿದ್ದು, ಆಟೋರಿಕ್ಷಾದಲ್ಲಿದ್ದ ಚಾಲಕ ನೌಶಾದ್‌ ರವರ ಹಣೆಗೆ, ಕೈಗಳಿಗೆ ರಕ್ತಗಾಯ ಹಾಗೂ ಸೊಂಟಕ್ಕೆ ಗುದ್ದಿದ ನೋವು ಗಾಯಗಳಾಗಿ ಮೂಡಬಿದ್ರೆ ಆಳ್ವಾಸ್‌ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆ ಬಗ್ಗೆ ಮಂಗಳೂರು ಹೈಲ್ಯಾಂಡ್‌ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿರುತ್ತಾರೆ. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ಸೆ.5: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಬಂಟ್ವಾಳ : ಯುವತಿಯ ಹತ್ಯೆ ಪ್ರಕರಣದಲ್ಲಿ ಭಜರಂಗದಳದ ವಿರುದ್ಧ ಸುಳ್ಳು ಸುದ್ದಿ: ಭಜರಂಗದಳ ಬೆಳ್ತಂಗಡಿ ಪ್ರಖಂಡದಿಂದ ದೂರು ದಾಖಲು

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿ ನಿವಾಸ ಸಮುದಾಯ ಭವನದ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

Suddi Udaya

ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಲ್ಲಿ ಓದುವ ಎಸ್‌ಸಿ ಹಾಗೂ ಎಸ್‌ಟಿ ವಿದ್ಯಾರ್ಥಿಗಳ ಪ್ರೋತ್ಸಾಹ ಧನ ಹೆಚ್ಚಳ

Suddi Udaya

ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ಆರೋಗ್ಯ ಮತ್ತು ನೈರ್ಮಲ್ಯ ಜಾಗೃತಿ ಕಾರ್ಯಕ್ರಮ

Suddi Udaya

ಕಳಿಯ ಗ್ರಾಮ ಪಂಚಾಯತ್ ನಲ್ಲಿ ಸಾಮಾಜಿಕ ಲೆಕ್ಕ ಪರಿಶೋಧನೆ

Suddi Udaya
error: Content is protected !!