March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕರಾಟೆ ತರಬೇತಿ

ಉಜಿರೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಪಠ್ಯೇತರ ಚಟುವಟಿಕೆಯಲ್ಲಿ ಒಂದಾದ ಕರಾಟೆ ತರಬೇತಿಯ ವಿದ್ಯಾರ್ಥಿಗಳಿಗೆ ಬೆಲ್ಟ್ ಪ್ರಮೋಷನ್ ಪರೀಕ್ಷೆಯು ಶಾಲಾ ಆವರಣದಲ್ಲಿ ನಡೆಸಲಾಗಿದ್ದು, ತೇರ್ಗಡೆ ಆದ ವಿದ್ಯಾರ್ಥಿಗಳಿಗೆ ಕಲರ್ ಬೆಲ್ಟ್ ಮತ್ತು ಪ್ರಮಾಣ ಪತ್ರ ವಿತರಣೆ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾ ಪಠ್ಯೇತರ ಚಟುವಟಿಕೆಗಳ ಸಂಯೋಜಕ ಶಿಕ್ಷಕಿ ಶ್ರೀಮತಿ ಮಾಲಿನಿ ಜೈನ್ “ವಿದ್ಯಾರ್ಥಿಗಳಿಗೆ ಪಠ್ಯೇತರ ಚಟುವಟಿಕೆಯಿಂದ ಮಾನಸಿಕ ಹಾಗೂ ಬೌಧಿಕ ಬೆಳವಣಿಗೆ ಉತ್ತಮಗೊಳ್ಳುವುದು” ಎಂದು ಹಿತನುಡಿದು, ಸ್ಪರ್ಧೆಗಳಿಗೆ ತಯಾರಾಗುವ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಿ ಸೀನಿಯರ್ ಬೆಲ್ಟ್ ಪಡೆದ ಎಲ್ಲಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ಕರಾಟೆ ಮುಖ್ಯ ತರಬೇತಿಗಾರ ಸೆನ್ಸಾಯಿ ವಸಂತ.ಕೆ ಬಂಗೇರ ಕರಾಟೆಯಿಂದ ವ್ಯಕ್ತಿಯ ಬದಲಾವಣೆ ಆರೋಗ್ಯ ರಕ್ಷಣೆ ದೇಹ ರಕ್ಷಣೆ ಲಾಭಗಳನ್ನು ಸವಿವರವಾಗಿ ತಿಳಿಸಿದರು. ಕಾರ್ಯಕ್ರಮದಲ್ಲಿ ಕರಾಟೆ ವಿದ್ಯಾರ್ಥಿಗಳ ಪೋಷಕರು ಪಾಲ್ಗೊಂಡಿದ್ದರು. ಶಿಕ್ಷಕಿ ರಾಜಮ್ಮ ಕಾರ್ಯಕ್ರಮ ನಿರೂಪಿಸಿದರು.

Related posts

ಮೇ 25: ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ಸ್ ಶೋರೂಮ್ ನ ನೂತನ ನವೀಕೃತ ವಿಸ್ತೃತ ಆಭರಣ ಮಳಿಗೆಯ ಅನಾವರಣ ಪ್ರಯುಕ್ತ ಗ್ರಾಮ ಸೀಮಿತ ಆಟಗಾರರ ಹಗ್ಗಜಗ್ಗಾಟ ಸ್ಪರ್ಧೆ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಬೆಳ್ತಂಗಡಿ ತಾಲೂಕು ಜನಜಾಗೃತಿ ವೇದಿಕೆ ಸಭೆ: ವಲಯವಾರು ಸಾಧನಾ ವರದಿ ಪ್ರಸ್ತುತಿ: ವಲಯವಾರು ನವಜೀವನೋತ್ಸವಕ್ಕೆ ಸಂಕಲ್ಪ

Suddi Udaya

ಸರ್ಕಲ್ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ.ಗೆ ಮುಖ್ಯಮಂತ್ರಿಗಳ ಸೇವಾ ಪ್ರಶಸ್ತಿ – ಎಸ್ರ ಫೌಂಡೇಶನ್ ವತಿಯಿಂದ ಸನ್ಮಾನ

Suddi Udaya

ನೆಲ್ಯಾಡಿ ಲಾವತಡ್ಕದಲ್ಲಿ ಕಾರು ಪಲ್ಟಿ : 6 ಮಂದಿಗೆ ಗಂಭೀರ ಗಾಯ

Suddi Udaya

ಬೆಳ್ತಂಗಡಿ:ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಸದಸ್ಯರಾಗಿ ಹರಿದಾಸ್ ಡೋಗ್ರಾರವರು ಮಂಗಳೂರು ವಿಭಾಗದಿಂದ ಆಯ್ಕೆ

Suddi Udaya
error: Content is protected !!