25.4 C
ಪುತ್ತೂರು, ಬೆಳ್ತಂಗಡಿ
April 9, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುತ್ತೂರು ವಿವೇಕಾನಂದ ಪ.ಪೂ. ಕಾಲೇಜಿನಲ್ಲಿ “ಯುರೇಕಾ 2025”- ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗಾಗಿ ಏ.7 ರಿಂದ 12 ರ ವರೆಗೆ ರಾಜ್ಯಮಟ್ಟದ ವ್ಯಕ್ತಿತ್ವ ವಿಕಸನ ಶಿಬಿರ

ಪುತ್ತೂರಿನ ನೆಹರು ನಗರದಲ್ಲಿರುವ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಏಪ್ರಿಲ್ 7 ರಿಂದ 12 ರ ವರೆಗೆ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ವ್ಯಕ್ತಿತ್ವ ವಿಕಸನ ಶಿಬಿರ “ಯುರೇಕಾ-2025” ನಡೆಯಲಿದೆ. ಆರು ದಿನಗಳ ಕಾಲ ನಡೆಯುವ ಈ ಶಿಬಿರದಲ್ಲಿ ರಾಜ್ಯ ಹಾಗೂ ರಾಷ್ಟ್ರಮಟ್ಟದ ಸಂಪನ್ಮೂಲ ವ್ಯಕ್ತಿಗಳು ಅವಧಿಗಳನ್ನು ನಡೆಸಿಕೊಡಲಿದ್ದಾರೆ.

ಉದ್ಘಾಟನಾ ಕಾರ್ಯಕ್ರಮ –
ಏಪ್ರಿಲ್7 ರಂದು ಪುತ್ತೂರಿನ ಖ್ಯಾತ ವೈದ್ಯ ಡಾ. ಸುರೇಶ ಪುತ್ತೂರಾಯ ಶಿಬಿರವನ್ನು ಉದ್ಘಾಟಿಸಲಿದ್ದಾರೆ. CSIR ನ ನಿವೃತ್ತ ಹಿರಿಯ ವಿಜ್ಞಾನಿ ಡಾ. ಅನು ಅಪ್ಪಯ್ಯ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ರವೀಂದ್ರ ಪಿ. ವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯ ನಿರ್ದೇಶಕರಾದ ಡಾ. ಕೆ. ಎನ್. ಸುಬ್ರಹ್ಮಣ್ಯ ಉಪಸ್ಥಿತರಿರಲಿದ್ದಾರೆ.

ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಸಂಪನ್ಮೂಲ ವ್ಯಕ್ತಿಗಳು ಭಾಗಿ –
ಈ ಶಿಬಿರದಲ್ಲಿ ಕಿರುತೆರೆಯ ಖ್ಯಾತ ರಿಯಾಲಿಟಿ ಶೋ ಬಿಗ್ ಬಾಸ್ ಹಾಗೂ ಮೆಟ್ರೋಗಳಿಗೆ ಹಿನ್ನೆಲೆ ಧ್ವನಿ ನೀಡಿರುವ, ಖ್ಯಾತ ಹಿನ್ನೆಲೆ ಧ್ವನಿ ಕಲಾವಿದ ಹಾಗೂ ವಿವೇಕಾನಂದ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿ ಬಡೆಕ್ಕಿಲ ಪ್ರದೀಪ್, CSIR ನ ನಿವೃತ್ತ ಹಿರಿಯ ವಿಜ್ಞಾನಿ ಡಾ. ಅನು ಅಪ್ಪಯ್ಯ, ಬೆಂಗಳೂರಿನ ಶೈಕ್ಷಣಿಕ ಸಲಹೆಗಾರರು ಹಾಗೂ ಸೃಜನಶೀಲ ಪ್ರಯೋಗಗಳ ಮೂಲಕ ಹೆಸರುವಾಸಿಯಾದ ರಾಜೇಶ್ ಭಟ್, ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಹಾಗೂ ಪರಿಸರ ತಜ್ಞ ದಿನೇಶ್ ಹೊಳ್ಳ, ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನ ಭೌತಶಾಸ್ತ್ರವಿಭಾಗದ ಪ್ರಾಧ್ಯಾಪಕ ಅತುಲ್ ಭಟ್ ಸೇರಿದಂತೆ ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಲಿದ್ದಾರೆ ಹಾಗೂ ವಿದ್ಯಾರ್ಥಿಗಳಿಗೆ ವಿಶೇಷ ಅವಧಿಗಳನ್ನು ನಡೆಸಿಕೊಡಲಿದ್ದಾರೆ.

ಆರು ದಿನಗಳ ಕಾಲ ಶಿಬಿರ –
ಆರು ದಿನಗಳ ಕಾಲ ನಡೆಯುವ ಶಿಬಿರದಲ್ಲಿ ಏಪ್ರಿಲ್ ೭ ರಿಂದ ಆರಂಭಗೊಂಡು ಪ್ರತಿದಿನ ಬೆಳಗ್ಗೆ 9 ರಿಂದ ಸಂಜೆ 3.30 ರ ವರೆಗೆ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ, ಜೀವನ ಕೌಶಲ್ಯ, ತಂತ್ರಜ್ಞಾನ, ಕಲೆ, ವಾಣಿಜ್ಯ, ವಿಜ್ಞಾನ ಹೀಗೆ ಹತ್ತು ಹಲವು ವಿಷಯಗಳ ಬಗ್ಗೆ ವಿವಿಧ ಅವಧಿಗಳು ಹಾಗೂ ಚಟುವಟಿಕೆಗಳು ನಡೆಯಲಿವೆ. ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳನ್ನೊಳಗೊಂಡAತೆ ರಾಜ್ಯದ ವಿವಿಧ ಭಾಗಗಳಿಂದ ವಿದ್ಯಾರ್ಥಿಗಳು ಆಗಮಿಸುವ ನಿರೀಕ್ಷೆಯಿದ್ದು, ದೂರದೂರುಗಳಿಂದ ಆಗಮಿಸುವ ಶಿಬಿರಾರ್ಥಿಗಳಿಗೆ ಕಾಲೇಜಿನ ವತಿಯಿಂದ ವಸತಿ ವ್ಯವಸ್ಥೆಯನ್ನು ಆಯೋಜಿಸಲಾಗಿದೆ. ಪೆರ್ಲ ಹಾಗೂ ಉಪ್ಪಿನಂಗಡಿಯಿಂದ ಕಾಲೇಜು ಬಸ್ ವ್ಯವಸ್ಥೆ ಇರಲಿದೆ.

ಶಿಬಿರದಲ್ಲಿ ಭಾಗವಹಿಸಲು ಆಸಕ್ತ ವಿದ್ಯಾರ್ಥಿಗಳು www.vivekanandapuc.com/eureka  ಲಿಂಕ್ ಮೂಲಕ ತಮ್ಮ ಹೆಸರನ್ನು ತಕ್ಷಣ ನೋಂದಾಯಿಸಿಕೊಳ್ಳಬಹುದು. ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ 9844665385, 8904791909, 8971634042 ಸಂಪರ್ಕ ಸಂಖ್ಯೆಗಳನ್ನು ಸಂಪರ್ಕಿಸಬಹುದು.

Related posts

ಉಜಿರೆ ಶಾರದಾ ಮಂಟಪದಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಬೆಳ್ತಂಗಡಿ: ಚಿತ್ಪಾವನ ಬ್ರಾಹ್ಮಣರ ಬಳಗದ ಮಹಾಸಭೆ

Suddi Udaya

ಡಾ. ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ಶುಭಾಶಯ

Suddi Udaya

ಗೇರುಕಟ್ಟೆ: ಶ್ರೀ ಪಾರ್ಶ್ವನಾಥ ಫ್ಯೂಯಲ್ ಶುಭಾರಂಭ

Suddi Udaya

ಬಳಂಜ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯಿಂದ ಹಾವೇರಿ ರಾಣಿ ಬೆನ್ನೂರಿನಲ್ಲಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ “ರಂಗಶಿವ”ಬಳಗದಿಂದ ಮಕ್ಕಳ ರಂಗ ಶಿಬಿರ “ನಲಿಯೋಣ ಬಾ- 2023”

Suddi Udaya
error: Content is protected !!