27.8 C
ಪುತ್ತೂರು, ಬೆಳ್ತಂಗಡಿ
May 22, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸ್ಥಳೀಯ ಸಂಸ್ಥೆಯಿಂದ ಕಬ್- ಬುಲ್ ಬುಲ್ಸ್ ಉತ್ಸವ, ಸ್ಕೌಟ್ಸ್- ಗೈಡ್ಸ್ ಮೇಳ, ರೋವರ್ಸ್‌ – ರೇಂಜರ್ಸ್‌ ಸಮಾಗಮ

ಬೆಳ್ತಂಗಡಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಬೆಳ್ತಂಗಡಿ ಸ್ಥಳೀಯ ಸಂಸ್ಥೆ ವತಿಯಿಂದ ಕಬ್- ಬುಲ್ ಬುಲ್ಸ್ ಉತ್ಸವ ಸ್ಕೌಟ್ಸ್- ಗೈಡ್ಸ್ ಮೇಳ ರೋವರ್ಸ್‌ – ರೇಂಜರ್ಸ್‌ ಸಮಾಗಮವು ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆ೦ಗ್ಲ ಮಾಧ್ಯಮ ಶಾಲೆಯಲ್ಲಿ ಎ.5 ರಂದು ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತರು ಪಿ. ಜಿ. ಆರ್. ಸಿಂಧ್ಯ ನೆರವೇರಿಸಿದರು.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.

ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ತು ಸದಸ್ಯ ಕೆ. ಪ್ರತಾಪಸಿಂಹ ನಾಯಕ್, ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕರು ಶ್ರೀಮತಿ ಹೇಮಲತಾ ಎಂ. ಆರ್., ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸ್ಕೌಟ್ ಆಯುಕ್ತ ಬಿ.ಎಂ ತುಂಬೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಗೈಡ್ ಆಯುಕ್ತರು ಶ್ರೀಮತಿ ವಿಮಲಾ ರಂಗಯ್ಯ , ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಕಾರ್ಯದರ್ಶಿ ಪ್ರತೀಮ್ ಕುಮಾ‌ರ್ , ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಹಾಯಕ ಸಂಘಟನಾ ಆಯುಕ್ತ ಭರತ್‌ರಾಜ್ ಕೆ. , ರೋವರ್ಸ್‌ ಲೀಡರ್ ಡಾ| ರವಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕಾರ್ಯದರ್ಶಿ ಪ್ರಮೀಳಾ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕೋಶಾಧಿಕಾರಿ ಬೆಳ್ಳಿಯಪ್ಪ ಕೆ., ಹಾಗೂ ಬೆಳ್ತಂಗಡಿ ಭಾರತ್ ಸೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಸದಸ್ಯರು ಉಪಸ್ಥಿತರಿದ್ದರು.

ಬೆಳ್ತಂಗಡಿ ಭಾರತ್ ಸೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಅಧ್ಯಕ್ಷ ಎಚ್. ಪದ್ಮಕುಮಾ‌ರ್ ಪ್ರಸ್ತಾವಿಕ ಮಾತನಾಡಿ ಸ್ವಾಗತಿಸಿದರು. ರೋವರ್ಸ್‌ ಗೈಡ್ ಲೀಡರ್ ಲಕ್ಷ್ಮೀಶ ಕಾರ್ಯಕ್ರಮ ನಿರೂಪಿಸಿದರು.

Related posts

ಭಾರೀ ಮಳೆ : ತೆಕ್ಕಾರುವಿನ ಅಜಿಲ ಮುಗೇರು ಮಸೀದಿಯ ಎದುರು ರಸ್ತೆ ಸಂಪೂರ್ಣ ಜಲಾವೃತ

Suddi Udaya

ಬಾರ್ಯ: ಶ್ರೀ ಮಹಾವಿಷ್ಣುಯಾಗದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮುಂಡಾಜೆ: ಮೂಲಾರು ದರ್ಖಾಸು ನಿವಾಸಿ ಕಮಲಾ ನಾಯ್ಕ ನಿಧನ

Suddi Udaya

ಕೊಯ್ಯೂರು ಸ.ಪ್ರೌ. ಶಾಲೆಯಲ್ಲಿ ಸ್ವಾತಂತ್ರ್ಯ ಪೂರ್ವ ಮತ್ತು ನಂತರದ ದಿನಗಳ ಛಾಯಾಚಿತ್ರ ಹಾಗೂ ಸಾಕ್ಷ್ಯಚಿತ್ರಗಳ ಪ್ರದರ್ಶನ

Suddi Udaya

ಭಾರತೀಯ ಲೆಕ್ಕ ಪರಿಶೋಧಕರ ಸಂಘದಿಂದ ಸಿಎ ಸಾಧಕಿ ನಿರೀಕ್ಷಾ ಎನ್.ನಾವರರಿಗೆ ಗೌರವಾರ್ಪಣೆ

Suddi Udaya

ನಾಪತ್ತೆಯಾಗಿದ್ದ ವಿದ್ಯಾರ್ಥಿ ದಿಗಂತ್ ಉಡುಪಿಯಲ್ಲಿ ಪತ್ತೆ

Suddi Udaya
error: Content is protected !!