ಬಂದಾರು: ಬಂದಾರು ಗ್ರಾಮದ ಕುರಾಯ ಶ್ರೀ ಸದಾಶಿವ ದೇವಸ್ಥಾನ ಪ್ರತಿಷ್ಠಾ ಮಹೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವ ಕಾರ್ಯಕ್ರಮಕ್ಕೆ ಉದ್ಯಮಿಗಳಾದ ನವಶಕ್ತಿ ಶಶಿಧರ ಶೆಟ್ಟಿ ಬರೋಡ ಭೇಟಿ ನೀಡಿ ಶ್ರೀ ದೇವರ ಪ್ರಸಾದ ಸ್ವೀಕರಿಸಿದರು,

ದೇವಸ್ಥಾನದ ವಿವಿಧ ಅಭಿವೃದ್ಧಿ ಕಾಮಗಾರಿ ವೀಕ್ಷಣೆ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಕುರಾಯ ಶ್ರೀ ಸದಾಶಿವ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಾಬು ಗೌಡ ಮಡ್ಯಲಕಂಡ, ಸಮಿತಿ ಸದಸ್ಯರಾದ ನಿರಂಜನ ಗೌಡ ನಡುಮಜಲು, ಬಂದಾರು ಗ್ರಾ.ಪಂ. ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಪದ್ಮುಂಜ ಸಿ ಎ ಬ್ಯಾಂಕ್ ಅಧ್ಯಕ್ಷ ರಕ್ಷಿತ್ ಪಣೆಕ್ಕರ, ಉಪಾಧ್ಯಕ್ಷರಾದ ಅಶೋಕ ಗೌಡ ಪಾಂಜಾಳ, ನಿರ್ದೇಶಕರಾದ ಪ್ರಸಾದ್ ಗೌಡ ಅಂಡಿಲ, ಪ್ರಗತಿಪರ ಕೃಷಿಕರಾದ ಧರ್ಣಪ್ಪ ಗೌಡ ಅಂಡಿಲ, ಯಕ್ಷಗಾನ ಸಮಿತಿ ಅಧ್ಯಕ್ಷರಾದ ಹರೀಶ್ ಹೊಳ್ಳ ಕಲ್ರೋಡಿ, ಪ್ರಮುಖರಾದ ಗೋಪಾಲಕೃಷ್ಣ ಹೊಳ್ಳ ಕಲ್ರೋಡಿ, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಕೃಷ್ಣಯ್ಯ ಆಚಾರ್ಯ, ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾದ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಕುವೆಟ್ಟು ಪಂಚಾಯತ್ ಸದಸ್ಯರಾದ ಪ್ರದೀಪ್ ಶೆಟ್ಟಿ ಗುರುವಾಯನಕೆರೆ, ಜಾತ್ರೋತ್ಸವ ಸಮಿತಿ ಕಾರ್ಯದರ್ಶಿ ಭರತ್ ಗೌಡ ಅರ್ಚಕರಾದ ಭೀಮ್ ಭಟ್,ಸಮಿತಿ ಪದಾಧಿಕಾರಿಗಳು, ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.