ಬೆಳ್ತಂಗಡಿ: ತಾಲೂಕು ಆಡಳಿತ, ತಾಲೂಕು ಪಂಚಾಯತು, ಸಮಾಜ ಕಲ್ಯಾಣ ಇಲಾಖೆ ಹಾಗೂ ಪಟ್ಟಣ ಪಂಚಾಯತು , ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನರಾಮ್ ರವರ 118 ನೇ ಜನ್ಮ ದಿನಾಚರಣೆಯನ್ನು ತಾಲೂಕು ಆಡಳಿತ ಸೌಧ ಸಭಾಂಗಣದಲ್ಲಿ ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ತಂಗಡಿ ತಹಶೀಲ್ದಾರರು ಪೃಥ್ವಿ ಸಾನಿಕಮ್ ವಹಿಸಿದ್ದರು. ತಾ.ಪಂ ಕಾರ್ಯ ನಿರ್ವಾಹಕ ಅಧಿಕಾರಿಗಳು ಭವಾನಿ ಶಂಕರ್ ಎನ್. ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ತಾರಕೇಸರಿ ಪ್ರಧಾನ ಭಾಷಣವನ್ನು ನೆರವೇರಿಸಿದರು.
ವೇದಿಕೆಯಲ್ಲಿ ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಧನಂಜಯ್ ಎಂ ಎಸ್ , ಬೆಳ್ತಂಗಡಿ ಪಟ್ಟಣ ಪಂಚಾಯತ ಮುಖ್ಯಾಧಿಕಾರಿಗಳು ರಾಜೇಶ್ ಕೆ, ಸರಕಾರಿ ನೌಕರರ ಸಂಘದ ಅಧ್ಯಕ್ಷ ಜಯರಾಜ್ ಜೈನ್ ಉಪಸ್ಥಿತರಿದ್ದರು.
ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂಧಿಗಳು , ಪ.ಜಾತಿ, ಪ.ಪಂಗಡದ ಮುಖಂಡರು ಹಾಗೂ ಪದಾಧಿಕಾರಿಗಳು, ವಿವಿಧ ವಸತಿ ಶಾಲೆಗಳ ಪ್ರಾಂಶುಪಾಲರು ಹಾಗೂ ಶಿಕ್ಷಕರು ಎಲ್ಲಾ ನಿಲಯ ಮೇಲ್ವಿಚಾರಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು. ಶ್ರೀಮತಿ ಹೇಮಲತಾ ಎಂ, ವಾರ್ಡನ್ ಇವರು ಕಾರ್ಯಕ್ರಮ ನಿರ್ವಹಿಸಿದರು. ಮುಂಡಾಜೆ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲರು ಮುರಳಿಧರ ಸ್ವಾಗತಿಸಿ , ಜಯಾನಂದ ತಾಲೂಕು ಪಂಚಾಯತ್ ವಂದಿಸಿದರು.