September 6, 2026
ಜಿಲ್ಲಾ ಸುದ್ದಿತಾಲೂಕು ಸುದ್ದಿ

ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಎರಡು ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್ ಕೊಡುಗೆ

ಮಂಗಳೂರು: ಬೆಳ್ತಂಗಡಿ ತಾಲ್ಲೂಕಿನ ಕೊತ್ಲೂರು ಸರಕಾರಿ ಶಾಲೆಯ ಮಕ್ಕಳು ಶಾಲೆಯ ಆವರಣದಲ್ಲಿ ತಮ್ಮ ಕಲಿಕೆಯ ಭಾಗವಾಗಿ ತಾವೇ ಬೆಳೆಸಿದ ತರಕಾರಿ ಬೆಳೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾವೇರಿ ನಿವಾಸದಲ್ಲಿ ನೀಡಿ ಸಂಭ್ರಮಿಸಿದರು. ಮುಖ್ಯಮಂತ್ರಿಗಳು ಮಕ್ಕಳನ್ನು ಶ್ಲಾಘಿಸಿ ಶಾಲೆಗೆ ಎರಡು ಕಂಪ್ಯೂಟರ್ ಗಳನ್ಮು ಹಾಗೂ ಪ್ರೊಜೆಕ್ಟರ್ ಉಡುಗೊರೆಯಾಗಿ ನೀಡಿದರು.

ಶಾಲೆಯ ಶಿಕ್ಷಕ ವೃಂದ ಮಕ್ಕಳ ಜೊತೆಗೆ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಾಮಚಂದ್ರ ಭಟ್, ಕಾಂಗ್ರೆಸ್ ಮುಖಂಡ ರಕ್ಷಿತ್ ಶಿವರಾಮ್, ಎಸ್ ಡಿ ಎಂ ಸಿ ಉಪಾಧ್ಯಕ್ಷೆ ಶ್ರೀಮತಿ ಶ್ವೇತ, ನಾರಾವಿ ಪಂಚಾಯತ್ ಸದಸ್ಯೆ ಶ್ರೀಮತಿ ಯಶೋಧ, ಬೆಳ್ತಂಗಡಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ವಿನಯ್ ಕುಮಾರ್ ಹಾಗೂ ಪೋಷಕರು, ಹಳೆ ವಿದ್ಯಾರ್ಥಿಗಳು, ವಿದ್ಯಾಭಿಮಾನಿ ,ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಸಹಭಾಗಿತ್ವದಲ್ಲಿ ಡಿಸೆಂಬರ್ 23 2018:ರಂದು ಕುತ್ಲುರು ಸರಕಾರಿ ಶಾಲೆಯಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಹಮ್ಮಿಕೊಂಡಿತ್ತು.

ಕಳೆದ ವಾರ ಕುತ್ಲುರು ಸರಕಾರಿ ಶಾಲೆಗೆ ಭೇಟಿ ನೀಡಿದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ ವಿ ಪ್ರಭಾಕರ್ ಶಾಲೆಗೆ ಎರಡು ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್ ನೀಡುವುದಾಗಿ ಭರವಸೆ ನೀಡಿದ್ದರು. ಕೂಡಲೇ ಸ್ಪಂದಿಸಿ ಸರಕಾರಿ ಶಾಲೆಯ ಮಕ್ಕಳ ಬಹು ದಿನದ ಬೇಡಿಕೆ ಈಡೇರಿಸಿದ್ದಾರೆ.

Related posts

ಧಾರಕಾರವಾಗಿ ಸುರಿಯುತ್ತಿರುವ ಮಳೆಯಿಂದ ಸೇತುವೆಯಿಲ್ಲದೆ ಶಿಶಿಲ- ಒಟ್ಲ ಭಾಗದ ಜನರಿಗೆ ಸಂಕಷ್ಟ: ಸೇತುವೆ ನಿರ್ಮಾಣಕ್ಕೆ ಒಟ್ಲ ಭಾಗದ ಜನರ ಒತ್ತಾಯ

Suddi Udaya

ಅರಸಿನಮಕ್ಕಿ: 20ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣಜನ್ಮಾಷ್ಟಮಿ ಆಚರಣೆ

Suddi Udaya

ನಾವೂರು: ಮೋರ್ತಾಜೆಯ ಅಂತಪ್ಪ ಪೂಜಾರಿ ನಿಧನ

Suddi Udaya

ಶಾಸಕ ಹರೀಶ್ ಪೂಂಜರಿಗೆ ಅಂಗರಕ್ಷಕ ನಿಯೋಜನೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಕೋಚಿಂಗ್ ಅಕಾಡೆಮಿಯಲ್ಲಿ ವಾರಾಂತ್ಯದ ತರಗತಿ

Suddi Udaya

ಬೆಳ್ತಂಗಡಿ: ರೈತರು ಫ್ರುಟ್ಸ್ ಐ.ಡಿ. ಮಾಡಿಸಿಕೊಳ್ಳುವಂತೆ ತಹಶೀಲ್ದಾರ್ ಪೃಥ್ವಿ ಸಾನಿಕಂ ಮನವಿ

Suddi Udaya
error: Content is protected !!