31.4 C
ಪುತ್ತೂರು, ಬೆಳ್ತಂಗಡಿ
April 17, 2025
Uncategorized

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕುತ್ಲೂರು ಸರ್ಕಾರಿ ಶಾಲೆಯ ಮಕ್ಕಳನ್ನು ಭೇಟಿ ಮಾಡಿಸಿದ ರಕ್ಷಿತ್ ಶಿವರಾಂ

ನಾರಾವಿ: ಕುತ್ಲೂರು ಸರಕಾರಿ ಶಾಲೆಯ ಮಕ್ಕಳು ಶಾಲೆಯ ಆವರಣದಲ್ಲಿ ತಮ್ಮ ಕಲಿಕೆಯ ಭಾಗವಾಗಿ ಬೆಳೆಸಿದ ಹಣ್ಣು ತರಕಾರಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡಿದರು. ಶಾಲೆಯ ವಿದ್ಯಾರ್ಥಿಗಳನ್ನು ಬೆಂಗಳೂರಿನ ಮುಖ್ಯಮಂತ್ರಿಗಳ ಸರ್ಕಾರಿ ನಿವಾಸ ಕಾವೇರಿಯಲ್ಲಿ ಇಂದು ಯುವ ನಾಯಕ ರಕ್ಷಿತ್ ಶಿವರಾಂ ಅವರು ಭೇಟಿ ಮಾಡಿಸಿದರು.

ಮಕ್ಕಳು ಕಲಿಕೆಯ ಜೊತೆ ಕೃಷಿಯ ಬಗ್ಗೆ ಸ್ವಲ್ಪಮಟ್ಟಿಗೆ ಜ್ಞಾನ, ಆಸಕ್ತಿ ಬೆಳೆಸಿಕೊಂಡಿರುವುದು ಭಾರತದಂಥ ಕೃಷಿ ಪ್ರಧಾನ ರಾಷ್ಟ್ರದಲ್ಲಿ ಉತ್ತಮ‌ ಅಭ್ಯಾಸ ಎಂದು ಮುಖ್ಯಮಂತ್ರಿಗಳು ಮೆಚ್ಚುಗೆ ವ್ಯಕ್ತಪಡಿಸಿದರು. ಮಕ್ಕಳೊಂದಿಗೆ ತನ್ನ ಬಾಲ್ಯವನ್ನೂ ಕೂಡ ಮೆಲುಕು ಹಾಕಿದ ಸಿದ್ದರಾಮಯ್ಯನವರು, ನಾನೂ ಬಾಲ್ಯದಲ್ಲಿ ಕೃಷಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರಿಂದಲೇ ರಾಜ್ಯದ ರೈತರ ಕಷ್ಟ ಸುಖಗಳನ್ನು ಅರಿಯಲು ಸಾಧ್ಯವಾಗಿದೆ ಎಂದರು. ಮಕ್ಕಳ ಶ್ರಮವನ್ನು ಶ್ಲಾಘಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ,ಮಕ್ಕಳ ಕೃಷಿಕಾರ್ಯಕ್ಕೆ ಬೆಂಬಲವಾಗಿ ನಿಂತ ಶಾಲೆಗೆ ಎರಡು ಕಂಪ್ಯೂಟರ್‌ಗಳನ್ನು ಉಡುಗೊರೆಯಾಗಿ ಕೂಡ ನೀಡಿದರು.

ಮುಖ್ಯಮಂತ್ರಿಗಳ ಭೇಟಿಯ ವೇಳೆ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ಯುವ ನಾಯಕ ರಕ್ಷಿತ್ ಶಿವರಾಮ್, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರು ಪದಾಧಿಕಾರಿಗಳು,ಶಾಲಾ ಸಿಬ್ಬಂದಿ ವರ್ಗದವರು, ಹಾಗೂ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ರಾಮಚಂದ್ರ ಭಟ್, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸತೀಶ್ ಕೆ ಕಾಶಿಪಟ್ಟಣ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶೇಖರ್ ಕುಕ್ಕೆಡಿ, ಉದ್ಯಮಿ ಪ್ರವೀಣ್ ಹಳ್ಳಿ ಮನೆ, ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Related posts

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಅಂಗವಾಗಿ ಕಸದಿಂದ ರಸ ಶೈಕ್ಷಣಿಕ ಕಾರ್ಯಕ್ರಮ

Suddi Udaya

ರೆಖ್ಯ ಅಂಗನವಾಡಿಯಲ್ಲಿ ಹಾಳಾದ ಮೊಟ್ಟೆ ವಿತರಣೆ: ಗ್ರಾಮಸ್ಥರ ಅಕ್ರೋಶ

Suddi Udaya

ನಡ ಪ್ರೌಢಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂಘ ಉದ್ಘಾಟನೆ

Suddi Udaya

ಕಣಿಯೂರು ದೀಪಾ ಸಂಜೀವಿನಿ ಗ್ರಾಮ ಪಂಚಾಯಿತ್ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಭಾರೀ ಗಾಳಿ-ಮಳೆ: ನಾವೂರು ನಾಗಜೆ ಯಮನಾ ರವರ ಮನೆಗೆ ಬಿದ್ದ ಬೃಹತ್ ಗಾತ್ರದ ಮರ: ಅಪಾರ ಹಾನಿ

Suddi Udaya

ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆ ಯಲ್ಲಿ ನ.4 ರಿಂದ 9 ಕೆಪಿಎಸ್ ಶೈಕ್ಷಣಿಕ ಹಬ್ಬ-2024 : 5,500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿ : ಶಾಸಕ ಹರೀಶ್

Suddi Udaya
error: Content is protected !!