April 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ


ಉಜಿರೆ: ಯಾವುದೇ ವಿದ್ಯಾಸಂಸ್ಥೆಯ ಏಳಿಗೆಯಲ್ಲಿ ವಿದ್ಯಾರ್ಥಿ ಸಂಘದ ಪಾತ್ರ ಹಿರಿದಾಗಿದೆ. ವಿದ್ಯಾರ್ಥಿ ಸಂಘವು ವಿದ್ಯಾರ್ಥಿಗಳ ಹಾಗೂ ವಿದ್ಯಾಸಂಸ್ಥೆಯ ಸರ್ವತೋಮುಖ ಬೆಳವಣಿಗೆಗೆ ಕಾರಣವಾಗುತ್ತದೆ ಎಂದು ನಡ ಸರಕಾರಿ ಪದವಿ ಪೂರ್ವ ಕಾಲೇಜು ಉಪನ್ಯಾಸಕರು ಶ್ರೀಮತಿ ಲಿಲ್ಲಿ ಪಿ ವಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯದ 2024-25 ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಇವರು ಪದಾಧಿಕಾರಿಗಳಿಗೆ ಪ್ರತಿಜ್ಞೆಯನ್ನು ಬೋಧಿಸಿ ನಾಯಕ ಹಾಗೂ ನಾಯಕತ್ವದ ಗುಣಗಳನ್ನು ತಿಳಿಸಿಕೊಟ್ಟರು. ಭಾವೀ ಶಿಕ್ಷಕರಾಗುವ ಪ್ರಶಿಕ್ಷಣಾರ್ಥಿಗಳ ಕುರಿತು ಮಾತನಾಡಿ ಸದೃಢ ದೇಶದ ರಚನೆಗೆ ಸಮರ್ಥ ಗುರುವಿನ ಬಲ ಬೇಕಾಗಿದೆ. ಕಳಂಕರಹಿತ ಅತ್ಯುತ್ತಮ ವೃತ್ತಿ ಇದಾಗಿದೆ. ಆದುದರಿಂದ ಮಣ್ಣಿನ ಮುದ್ದೆಯಂತಿರುವ ವಿದ್ಯಾರ್ಥಿಯೊಳಗಿನ ಪ್ರತಿಭೆಯನ್ನು ಸಮಾಜದಲ್ಲಿ ಕಂಗೊಳಿಸುವಂತೆ ಮಾಡುವುದು ಪ್ರತಿಯೊಬ್ಬ ಶಿಕ್ಷಕರ ಕರ್ತವ್ಯ ಎಂದರು.
ಕಾರ್ಯಕ್ರಮದ ಅಧ್ಯಕ್ಷ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯದ ಉಪನ್ಯಾಸಕಿಯಾದ ಶ್ರೀಮತಿ ಅನುಷ ಡಿ ಜೆ ಕಾರ್ಯಕ್ರಮದ ಕುರಿತು ಮಾತನಾಡಿ ಸಮಾಜದ ಕಲ್ಯಾಣಕ್ಕೆ ನಾಯಕರ ಅಗತ್ಯತೆ ಇದೆ. ನಾಯಕತ್ವ ಭಾವವನ್ನು ಎಲ್ಲಾ ಪ್ರಶಿಕ್ಷಣಾರ್ಥಿಗಳು ಮೈಗೂಡಿಸಿಕೊಳ್ಳಬೇಕು. ಹಾಗಿದ್ದರೆ ಮಾತ್ರ ಉತ್ತಮ ಶಿಕ್ಷಕರಾಗಿ ಹೊರಹೊಮ್ಮಲು ಸಾಧ್ಯ ಎಂದರು.

ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ನುಡಿಗಳನ್ನಾಡಿದ ವಿದ್ಯಾರ್ಥಿ ಸಂಘದ ಸಂಯೋಜಕ ತಿರುಮಲೇಶ್ ರಾವ್ ಎನ್ ಕೆ ಇವರು ನಾಯಕತ್ವವು ಒಂದು ಅದ್ಭುತ ಗುಣವಾಗಿದೆ. ಹಲವು ಅನುಭವಗಳನ್ನು ನಾಯಕತ್ವವು ನೀಡುತ್ತದೆ. ವಿದ್ಯಾರ್ಥಿ ಸಂಘದ ನಾಯಕರು ಹಲವು ಕಾರ್ಯಕ್ರಮ ಸಂಯೋಜನೆಯಲ್ಲಿ ಮಧ್ಯವರ್ತಿಗಳೆಂದರೆ ತಪ್ಪಾಗದು ಹಾಗೂ 2024-25 ನೇ ಸಾಲಿನ ಕಾರ್ಯಯೋಜನೆಗಳ ಜವಾಬ್ದಾರಿ ವಿದ್ಯಾರ್ಥಿ ಪದಾಧಿಕಾರಿಗಳ ಮೇಲಿದೆ ಎಂದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಸಂಘದ ನಾಯಕಿ ವೀಕ್ಷದೀಪ ಆರ್ ಎಸ್ ಹಾಗೂ ಕಾರ್ಯದರ್ಶಿ ದೀಕ್ಷಿತ್ ಎಂ , ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ ಸಲ್ಡಾನ, ಉಪನ್ಯಾಸಕರಾದ ಶ್ರೀಮತಿ ವಿದ್ಯಾಶ್ರೀ ಪಿ, ಮಂಜು ಆರ್, ಶ್ರೀಮತಿ ಪ್ರಿಯದರ್ಶಿನಿ ಜಿ ಭಟ್, ಕು. ಆದ್ಯಾ ಹಾಗೂ ಪ್ರಥಮ ಮತ್ತು ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.


ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳಾದ ಸಂತೋಷ್ ಟಿ ಯು ಸ್ವಾಗತಿಸಿ, ವಿಶ್ಮಿತಾ ಅತಿಥಿಗಳನ್ನು ಪರಿಚಯಿಸಿ, ವಿಶಾಲ ವಂದಿಸಿ, ಫಾತಿಮಾತ್ ರಾಫಿಯಾ ಕಾರ್ಯಕ್ರಮವನ್ನು ನಿರ್ವಹಿಸಿದರು.

Related posts

ಅತಿಕ್ರಮಣ ತೆರವುಗೊಳಿಸಿ ಗ್ರಾಮ ಪಂಚಾಯತ್ ಕಟ್ಟಡ ವಶಕ್ಕೆ ಪಡೆದ ತೆಕ್ಕಾರು ಗ್ರಾ.ಪಂ

Suddi Udaya

ಫೆ.23: ಕುತ್ಲೂರು ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನ ಸಂಯುಕ್ತ ಆಶ್ರಯದಲ್ಲಿ 12ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಮ್ಯಾಟ್‌ ಕಬಡ್ಡಿ ಪಂದ್ಯಾಟ ಹಾಗೂ ಬೃಹತ್ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

Suddi Udaya

ಅಳದಂಗಡಿ: ಇತ್ತೀಚೆಗೆ ಭಾರಿ ಗಾಳಿ , ಮಳೆಗೆ ಕುಸಿತಗೊಂಡ ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ: ತಾತ್ಕಾಲಿಕ ಮನೆ ದುರಸ್ತಿಗೆ ನೆರವು

Suddi Udaya

ಎ.25-26: ಸಂತಾನ ಪ್ರದಾ ನಾಗಕ್ಷೇತ್ರ ಕಟ್ಟದಬೈಲು ಪ್ರತಿಷ್ಠಾಪನೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಬಳಂಜ ಶಾಲೆಯ ನಿವೃತ್ತ ಶಿಕ್ಷಕಿ ಶ್ರೀಮತಿ ರೆನಿಲ್ಡಾ ಜೋಯ್ಸ್ ಮಥಾಯಸ್ ರವರಿಗೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಗೌರವಾರ್ಪಣೆ

Suddi Udaya
error: Content is protected !!