September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಾಟ, ಮಂತ್ರ ನಿವಾರಣೆ ಚಿಕಿತ್ಸಾ ನೆಪದಲ್ಲಿ ಮಹಿಳೆಗೆ ವಂಚನೆ ಆರೋಪ: ಗುರುವಾಯನಕೆರೆ ನಿವಾಸಿ ಕೂಳೂರಿನ ಉಸ್ತಾದ್ ಅಬ್ದುಲ್ ಕರೀಮ್ ಬಂಧನ

ಮಂಗಳೂರು: ಯಾರೋ ಮಾಟ, ಮಂತ್ರ ಮಾಡಿಸಿದ್ದಾರೆಂದು ಮಹಿಳೆಯೊಬ್ಬರನ್ನು ನಂಬಿಸಿ, ಚಿಕಿತ್ಸೆಯ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿ ಒಂದು ಲಕ್ಷ ರೂ.ಗಳನ್ನು ಪಡೆದು ವಂಚಿಸಿದ ಎಂದು ಮಹಿಳೆ ನೀಡಿದ ದೂರಿನ ಆರೋಪದಲ್ಲಿ ಗುರುವಾಯನಕೆರೆ ನಿವಾಸಿ, ಕೂಳೂರಿನಲ್ಲಿ ಉಸ್ತಾದ್ ಆಗಿರುವ ಜಿ. ಅಬ್ದುಲ್ ಕರೀಮ್ ಎಂಬಾತನನ್ನು ಮಂಗಳೂರು ಮಹಿಳಾ ಠಾಣಾ ಪೊಲೀಸರು ಎ.6 ರಂದು ಬಂಧಿಸಿದ್ದಾರೆ.

2022ರಲ್ಲಿ ಈ ಘಟನೆ ನಡೆದಿದ್ದು, ಸಂತ್ರಸ್ತೆ ಮಹಿಳೆ ಖಿನ್ನತೆಯ ಸಮಸ್ಯೆಯಿಂದ ಬಳಲಿ, ಆಕೆ ತನ್ನ ಸಂಬಂಧಿಯ ಸಲಹೆಯಂತೆ ಆಗ ಹೆಜಮಾಡಿಯಲ್ಲಿದ್ದ ಉಸ್ತಾದ್ ಅಬ್ದುಲ್ ಕರೀಮ್ ಮನೆಗೆ ಹೋಗಿದ್ದರು. ಅಲ್ಲಿ ಅಬ್ದುಲ್ ಕರೀಮ್ ನಿಮಗೆ ಯಾರೋ ಮಾಟ ಮಂತ್ರ ಮಾಡಿಸಿದ್ದಾರೆ. ಅದನ್ನು ತೆಗೆಸಬೇಕು ಎಂದು ಹೇಳಿದನೆನ್ನಲಾಗಿದೆ. ಅನಂತರ ಮಾಟ ಮಂತ್ರ ನಿವಾರಿಸುವ ಚಿಕಿತ್ಸೆ ಕೊಡುತ್ತೇನೆ ಎಂದು ನಂಬಿಸಿ ಆ ಮಹಿಳೆಯನ್ನು ಆಗಾಗ ಬರಲು ತಿಳಿಸಿದ್ದ. ಮಹಿಳೆ ತನ್ನ ಅಕ್ಕನ ಜತೆ ಈ ವ್ಯಕ್ತಿ ಬಳಿ ಹಲವು ಬಾರಿ ಹೋಗಿದ್ದಾರೆ. ಅಲ್ಲಿ ಆತ ಕೆಲವು ಬಾರಿ ಮಹಿಳೆಗೆ ಕುರಾನ್ ಓದಿಸಿದ್ದಾಗಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಮಹಿಳೆ ಆರೋಪಿಸಿದ್ದಾರೆ.


2022ರ ಫೆ. 10 ರಂದು ಸಂತ್ರಸ್ತೆಯ ಅಕ್ಕನಿಗೆ ಕೆಲಸ ಇದ್ದ ಕಾರಣ ಸಂತ್ರಸ್ತೆ ಒಬ್ಬಳೇ ಹೆಜಮಾಡಿ ಮನೆಗೆ ಹೋಗಿದ್ದು, ಅಲ್ಲಿ ಉಸ್ತಾದ್ ಆಕೆಯಲ್ಲಿ ಕುರಾನ್ ಓದಿಸಿ ಆಕೆಯ ಮೈಮುಟ್ಟಿ ಕಿರುಕುಳ ನೀಡಿದ್ದ ಎಂದು ಅಪಾದಿಸಲಾಗಿದೆ. ಅಲ್ಲದೆ ಮಹಿಳೆಯಿಂದ 55 ಸಾವಿರ ರೂ. ಪಡೆದಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ. ಒಟ್ಟು ಸುಮಾರು ಒಂದು ಲಕ್ಷ ರೂ. ಪಡೆದು ವಂಚಿಸಿದ್ದಾನೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.

Related posts

ಪುಂಜಾಲಕಟ್ಟೆ-ಪುರಿಯ-ಕುಕ್ಕೇಡಿ ಸಂಪರ್ಕ ರಸ್ತೆ ದುರಸ್ತಿಗೆ ಆಗ್ರಹ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ಬಿಲ್ಲವ ಸಂಘ ಬೇಹರಿನ್ ಅಧ್ಯಕ್ಷ ಹರೀಶ್ ಪೂಜಾರಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ಕುಟುಂಬ ಸಮೇತರಾಗಿ ಭೇಟಿ

Suddi Udaya

ಶಿರ್ಲಾಲು: ಗ್ರಾಮೀಣ ವಿದ್ಯಾರ್ಥಿಗಳ ಸಂಶೋಧನಾ ಮನೋಭಾವ ಬೆಳೆಸಿದ ‘ಕೋಡ್ ಕ್ರಾಫ್ಟ್ ವಿಜ್ಞಾನ ಮೇಳ’

Suddi Udaya

ತೆಕ್ಕಾರು ಕುಟ್ಟಿಕಳ ಸ. ಹಿ ಪ್ರಾ. ಶಾಲೆಗೆ ಬೆಸ್ಟ್ ಫೌಂಡೇಶನ್ ವತಿಯಿಂದ ಪೀಠೋಪಕರಣ ವಿತರಣೆ

Suddi Udaya

ಪಡoಗಡಿ-ಹಚ್ಚಾಡಿ -ಬಳಂಜ ಸಂಪರ್ಕ ಕಿರುಸೇತುವೆಯಲ್ಲಿ ತ್ಯಾಜ್ಯ ಶೇಖರಣೆ

Suddi Udaya
error: Content is protected !!