ಬೆಳ್ತಂಗಡಿ: ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಪಿಯು ಬೋರ್ಡ್ ಮಾಹಿತಿ ನೀಡಿದೆ.

ನಾಳೆ ಮಧ್ಯಾಹ್ನ 12:30ಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿಯಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಲಿದ್ದಾರೆ. ಬಳಿಕ ಮಧ್ಯಾಹ್ನ 1:30ಕ್ಕೆ ವೆಬ್ ಸೈಟ್ ನಲ್ಲಿ ಪಿಯುಸಿ ಫಲಿತಾಂಶ ಲಭ್ಯವಾಗಲಿದೆ.
ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಮಾ.1ರಿಂದ ಮಾ.20ರ ವರೆಗೆ ನಡೆಸಲಾಗಿತ್ತು. ಎಲ್ಲ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿರುವ ಹಿನ್ನೆಲೆಯಲ್ಲಿ ಫಲಿತಾಂಶವನ್ನು ಪ್ರಕಟಿಸಲಾಗುತ್ತಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.