24.9 C
ಪುತ್ತೂರು, ಬೆಳ್ತಂಗಡಿ
April 10, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿನಿಯರಿಗೆ ಬೈಸಿಕಲ್ ವಿತರಣೆ

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ಹತ್ತು ವಿದ್ಯಾರ್ಥಿನಿಯರಿಗೆ ರೋಟರಿ ಕ್ಲಬ್, ಯಲಹಂಕ, ಬೆಂಗಳೂರು ಇವರ ವತಿಯಿಂದ ಬೈಸಿಕಲ್ ವಿತರಣಾ ಕಾರ್ಯಕ್ರಮ ಜರಗಿತು.

ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್, ಯಲಹಂಕ, ಬೆಂಗಳೂರು ಇದರ ಅಧ್ಯಕ್ಷ ಅಭಿಲೇಖ ಪಿ. ಮಂತ್ರಿ, ಕಾರ್ಯದರ್ಶಿ ಹರ್ಷ ವಸಿಷ್ಠ, ರೋಟರಿ ಕ್ಲಬ್ ನ ಚುನಾಯಿತ ಅಧ್ಯಕ್ಷರಾದ ಹಾಗೂ ಬೆಳಾಲು ಶಾಲೆಯ ಹಿರಿಯ ವಿದ್ಯಾರ್ಥಿಯಾದ ಅಶೋಕ್ ಹೆಬ್ಬಾರ್, ಬೈಸಿಕಲ್ ದಾನಿಗಳಾದ ವಿದ್ಯರಾಜ್ ಶೆಟ್ಟಿ ಬೈಸಿಕಲ್ ಗಳನ್ನು ವಿತರಿಸಿ, ಶುಭಹಾರೈಸಿದರು. ಈ ಸಂದರ್ಭದಲ್ಲಿ ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ ಗಣೇಶ್ ಕನಿಕ್ಕಿಲ , ಅಧ್ಯಕ್ಷ ಶಶಿಧರ ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

ಪ್ರಾಸ್ತಾವಿಕ ನುಡಿಗಳೊಂದಿಗೆ ಮುಖ್ಯೋಪಾಧ್ಯಾಯರಾದ ಜಯರಾಮ್ ಮಯ್ಯ ಸ್ವಾಗತಿಸಿದರು. ಶಿಕ್ಷಕ ಸುಮನ್ ಯು.ಎಸ್. ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Related posts

ಲಾಯಿಲ: ಚಾಲಕನ ನಿಯಂತ್ರಣ ತಪ್ಪಿದ ಕಾರು ಕಾಲೇಜಿನ ಕಂಪೌಂಡಿಗೆ ಡಿಕ್ಕಿ

Suddi Udaya

ಬೆಳ್ತಂಗಡಿ: ವಾಹನ ಸಂಚಾರ ಇಂದು ಮಾರ್ಗ ಬದಲಾವಣೆ

Suddi Udaya

ಪುಂಜಾಲಕಟ್ಟೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಘಟಕದ ಮಹಾಸಭೆ

Suddi Udaya

ಕೊಯ್ಯೂರು: ಸರಕಾರಿ ಪ್ರೌಢಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಧರ್ಮಸ್ಥಳ ಮೇಳದ ಹಿರಿಯ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ಹೃದಯಾಘಾತದಿಂದ ನಿಧನ

Suddi Udaya

ಪುಂಜಾಲಕಟ್ಟೆ ಕೆಪಿಎಸ್ ಪ.ಪೂ. ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!