
ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಹಾಗೂ ವಾಣಿ ವಿದ್ಯಾ ಸಂಸ್ಥೆಗಳ ನೂತನ ಕಟ್ಟಡ ಹಾಗೂ ಸಭಾಭವನದ ಲೋಕಾರ್ಪಣಾ ಸಮಾರಂಭವು ಎ.20 ರಂದು ಬೆಳ್ತಂಗಡಿ ಹಳೆಕೋಟೆ ವಾಣಿ ವಿದ್ಯಾ ಸಂಸ್ಥೆಗಳ ಆವರಣದಲ್ಲಿ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಜಿಲ್ಲಾ ಸಂಸದ ಬ್ರಿಜೇಶ್ ಚೌಟ, ವಿಧಾನಪರಿಷತ್ ಶಾಸಕ ಕಿಶೋರ್ ಕುಮಾರ್ ಪುತ್ತೂರು, ಮಾಜಿ ಶಾಸಕ ಸಂಜೀವ ಮಠಂದೂರು ರವರಿಗೆ ನೀಡಿ ಆಹ್ವಾನಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ, ಕೋಶಾಧಿಕಾರಿ ಯುವರಾಜ ಅನಾರು, ಜೊತೆ ಕಾರ್ಯದರ್ಶಿ ಶ್ರೀನಾಥ್ ಕೆಎಂ., ಮಾಜಿ ಕಾರ್ಯದರ್ಶಿ ಮೋಹನ್ ಕುಮಾರ್, ಪಟ್ಟಣ ಪಂಚಾಯಿತಿ ಅಧ್ಯಕ್ಷ ಹಾಗೂ ನಿರ್ದೇಶಕ ಜಯಾನಂದ ಗೌಡ ಉಪಸ್ಥಿತರಿದ್ದರು.