ಬೆಳ್ತಂಗಡಿ : ಮಣ್ಣಿನ ಹರಕೆಯ ಖ್ಯಾತಿಯ ನಡ ಗ್ರಾಮದ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ ಏ. 6ರಂದು ಪ್ರತಿಷ್ಠಾ ವಾರ್ಷಿಕೋತ್ಸವ ಜರಗಿತು.
ಪುಣ್ಯಾಹ, ಗಣಪತಿ ಹೋಮ, ಕಲಶಪೂಜೆ, ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ ಮೊದಲಾದ ಧಾರ್ಮಿಕ ವಿಧಿ ವಿಧಾನಗಳು, ಅನ್ನಸಂತರ್ಪಣೆ ನಡೆಯಿತು. ರಾತ್ರಿ ರಂಗ ಪೂಜೆ, ಉತ್ಸವ ಜರಗಿತು.

ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಡಾ.ಸತೀಶ್ಚಂದ್ರ ಸುರ್ಯಗುತ್ತು,ಅಭಿವೃದ್ಧಿ ಮಂಡಳಿ ಅಧ್ಯಕ್ಷ ರಾಜಶೇಖರ್ ಅಜ್ರಿ, ಸದಸ್ಯರು,ಮುನಿರಾಜ ಅಜ್ರಿ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.
ಜಾತ್ರಾ ಮಹೋತ್ಸವ:
ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ ಏ. 7ರಿಂದ11ರವರೆಗೆ ನಡೆಯಲಿದೆ. ಎ.7ರಂದು ಗಣಪತಿ ಹೋಮ, ನವಕ ಪ್ರಧಾನ ಕಲಶಾಭಿಷೇಕ, ಧ್ವಜಾರೋಹಣ, ಮಹಾಪೂಜೆ, ನಿತ್ಯಬಲಿ, ಅನ್ನಸಂತರ್ಪಣೆ ಇತ್ಯಾದಿ ಕಾರ್ಯಕ್ರಮಗಳು ಜರುಗಲಿವೆ.