ಅಳದಂಗಡಿ: ಅತ್ಯಂತ ಕಾರಣಿಕ ಕ್ಷೇತ್ರ ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಪ್ರಸಿದ್ದ ಉದ್ಯಮಿ, ಧಾರ್ಮಿಕ ಮುಂದಾಳು ಶಶಿಧರ ಶೆಟ್ಟಿ ನವಶಕ್ತಿ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.
ದೈವಸ್ಥಾನದ ಆಡಳಿತ ಮೊಕ್ತೇಸರ ಶಿವಪ್ರಸಾದ್ ಅಜಿಲ ಶಶಿಧರ ಶೆಟ್ಟಿಯವರನ್ನು ಆತ್ಮೀಯವಾಗಿ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಉದ್ಯಮಿ ಅಶ್ವಥ್ ಹೆಗ್ಡೆ ಬಳಂಜ, ಪ್ರಮುಖರಾದ ಸದಾನಂದ ಪೂಜಾರಿ ಉಂಗಿಲಬೈಲು, ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿ ಸಂಚಾಲಕ ಹರೀಶ್ ವೈ, ಸುಪ್ರೀತ್ ಜೈನ್ ಹಾಗೂ ಇತರರು ಉಪಸ್ಥಿತರಿದ್ದರು