July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ


ಉಜಿರೆ: ಯಾವುದೇ ವಿದ್ಯಾಸಂಸ್ಥೆಯ ಏಳಿಗೆಯಲ್ಲಿ ವಿದ್ಯಾರ್ಥಿ ಸಂಘದ ಪಾತ್ರ ಹಿರಿದಾಗಿದೆ. ವಿದ್ಯಾರ್ಥಿ ಸಂಘವು ವಿದ್ಯಾರ್ಥಿಗಳ ಹಾಗೂ ವಿದ್ಯಾಸಂಸ್ಥೆಯ ಸರ್ವತೋಮುಖ ಬೆಳವಣಿಗೆಗೆ ಕಾರಣವಾಗುತ್ತದೆ ಎಂದು ನಡ ಸರಕಾರಿ ಪದವಿ ಪೂರ್ವ ಕಾಲೇಜು ಉಪನ್ಯಾಸಕರು ಶ್ರೀಮತಿ ಲಿಲ್ಲಿ ಪಿ ವಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯದ 2024-25 ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಇವರು ಪದಾಧಿಕಾರಿಗಳಿಗೆ ಪ್ರತಿಜ್ಞೆಯನ್ನು ಬೋಧಿಸಿ ನಾಯಕ ಹಾಗೂ ನಾಯಕತ್ವದ ಗುಣಗಳನ್ನು ತಿಳಿಸಿಕೊಟ್ಟರು. ಭಾವೀ ಶಿಕ್ಷಕರಾಗುವ ಪ್ರಶಿಕ್ಷಣಾರ್ಥಿಗಳ ಕುರಿತು ಮಾತನಾಡಿ ಸದೃಢ ದೇಶದ ರಚನೆಗೆ ಸಮರ್ಥ ಗುರುವಿನ ಬಲ ಬೇಕಾಗಿದೆ. ಕಳಂಕರಹಿತ ಅತ್ಯುತ್ತಮ ವೃತ್ತಿ ಇದಾಗಿದೆ. ಆದುದರಿಂದ ಮಣ್ಣಿನ ಮುದ್ದೆಯಂತಿರುವ ವಿದ್ಯಾರ್ಥಿಯೊಳಗಿನ ಪ್ರತಿಭೆಯನ್ನು ಸಮಾಜದಲ್ಲಿ ಕಂಗೊಳಿಸುವಂತೆ ಮಾಡುವುದು ಪ್ರತಿಯೊಬ್ಬ ಶಿಕ್ಷಕರ ಕರ್ತವ್ಯ ಎಂದರು.
ಕಾರ್ಯಕ್ರಮದ ಅಧ್ಯಕ್ಷ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯದ ಉಪನ್ಯಾಸಕಿಯಾದ ಶ್ರೀಮತಿ ಅನುಷ ಡಿ ಜೆ ಕಾರ್ಯಕ್ರಮದ ಕುರಿತು ಮಾತನಾಡಿ ಸಮಾಜದ ಕಲ್ಯಾಣಕ್ಕೆ ನಾಯಕರ ಅಗತ್ಯತೆ ಇದೆ. ನಾಯಕತ್ವ ಭಾವವನ್ನು ಎಲ್ಲಾ ಪ್ರಶಿಕ್ಷಣಾರ್ಥಿಗಳು ಮೈಗೂಡಿಸಿಕೊಳ್ಳಬೇಕು. ಹಾಗಿದ್ದರೆ ಮಾತ್ರ ಉತ್ತಮ ಶಿಕ್ಷಕರಾಗಿ ಹೊರಹೊಮ್ಮಲು ಸಾಧ್ಯ ಎಂದರು.

ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ನುಡಿಗಳನ್ನಾಡಿದ ವಿದ್ಯಾರ್ಥಿ ಸಂಘದ ಸಂಯೋಜಕ ತಿರುಮಲೇಶ್ ರಾವ್ ಎನ್ ಕೆ ಇವರು ನಾಯಕತ್ವವು ಒಂದು ಅದ್ಭುತ ಗುಣವಾಗಿದೆ. ಹಲವು ಅನುಭವಗಳನ್ನು ನಾಯಕತ್ವವು ನೀಡುತ್ತದೆ. ವಿದ್ಯಾರ್ಥಿ ಸಂಘದ ನಾಯಕರು ಹಲವು ಕಾರ್ಯಕ್ರಮ ಸಂಯೋಜನೆಯಲ್ಲಿ ಮಧ್ಯವರ್ತಿಗಳೆಂದರೆ ತಪ್ಪಾಗದು ಹಾಗೂ 2024-25 ನೇ ಸಾಲಿನ ಕಾರ್ಯಯೋಜನೆಗಳ ಜವಾಬ್ದಾರಿ ವಿದ್ಯಾರ್ಥಿ ಪದಾಧಿಕಾರಿಗಳ ಮೇಲಿದೆ ಎಂದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಸಂಘದ ನಾಯಕಿ ವೀಕ್ಷದೀಪ ಆರ್ ಎಸ್ ಹಾಗೂ ಕಾರ್ಯದರ್ಶಿ ದೀಕ್ಷಿತ್ ಎಂ , ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ ಸಲ್ಡಾನ, ಉಪನ್ಯಾಸಕರಾದ ಶ್ರೀಮತಿ ವಿದ್ಯಾಶ್ರೀ ಪಿ, ಮಂಜು ಆರ್, ಶ್ರೀಮತಿ ಪ್ರಿಯದರ್ಶಿನಿ ಜಿ ಭಟ್, ಕು. ಆದ್ಯಾ ಹಾಗೂ ಪ್ರಥಮ ಮತ್ತು ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.


ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳಾದ ಸಂತೋಷ್ ಟಿ ಯು ಸ್ವಾಗತಿಸಿ, ವಿಶ್ಮಿತಾ ಅತಿಥಿಗಳನ್ನು ಪರಿಚಯಿಸಿ, ವಿಶಾಲ ವಂದಿಸಿ, ಫಾತಿಮಾತ್ ರಾಫಿಯಾ ಕಾರ್ಯಕ್ರಮವನ್ನು ನಿರ್ವಹಿಸಿದರು.

Related posts

ಕುವೆಟ್ಟು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ 12ನೇ ವರ್ಷದ ಗುರು ಪೂಜೆ ಹಾಗೂ ಸಾರ್ವಜನಿಕ ಶನೈಶ್ಚರ ಪೂಜೆಯ ಪೂರ್ವಭಾವಿ ಸಭೆ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: ದೂರುದಾರ ಎಸ್ಐಟಿ ಕಸ್ಟಡಿಗೆ

Suddi Udaya

ಪಡಂದಡ್ಕ ವ್ಯಾಪ್ತಿಯಲ್ಲಿ ರಸ್ತೆ ಹಾಗೂ ಚರಂಡಿ ದುರಸ್ತಿಗೆ ಎಸ್.ಡಿ.ಪಿ.ಐ ಮನವಿ

Suddi Udaya

ವಲಯ ಮಟ್ಟದ ಪ್ರಾಥಮಿಕ ವಿಭಾಗದ ಕ್ರೀಡಾಕೂಟ: ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಅ.16: ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ನಿಮಿತ್ತ ‘ಅಟ್ಟಳಿಗೆಯ ಸ್ತಂಭ ನ್ಯಾಸ’ ಕಾರ್ಯಕ್ರಮ

Suddi Udaya

ಖಿಳ್ರ್ ಜುಮ್ಮಾ ಮಸೀದಿ ಹಾಗೂ ಹಯಾತುಲ್ ಇಸ್ಲಾಂ ಮದರಸ ಬೆಳ್ತಂಗಡಿ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!