25.4 C
ಪುತ್ತೂರು, ಬೆಳ್ತಂಗಡಿ
April 13, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ, ವೇಣೂರು, ಬೆಳ್ತಂಗಡಿ ನಕ್ಸಲ್ ಪ್ರಕರಣ: ನಕ್ಸಲ್ ಬಿ.ಜಿ.ಕೃಷ್ಣಮೂರ್ತಿ, ಸಾವಿತ್ರಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

ಬೆಳ್ತಂಗಡಿ : ಮೂರು ನಕ್ಸಲ್ ಚಟುವಟಿಕೆ ಪ್ರಕರಣ ದಾಖಲಾದ ಸಂಬಂಧ ಇಬ್ಬರು ನಕ್ಸಲ್ ನಾಯಕರನ್ನು ಬೆಳ್ತಂಗಡಿ ಪೊಲೀಸರು ಕೇರಳ ಜೈಲಿನಿಂದ ಬಾಡಿ ವಾರೆಂಟ್ ಮೂಲಕ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬೆಳ್ತಂಗಡಿ ಪೊಲೀಸರು ಇಬ್ಬರು ನಕ್ಸಲರನ್ನು ಎರಡು ದಿನ ಕಸ್ಟಡಿಗೆ ಪಡೆದು ಮೂರು ಪ್ರಕರಣವನ್ನು ತನಿಖೆ ನಡೆಸಲಿದ್ದಾರೆ‌.

8-11-2021 ರಂದು ಕೇರಳ ರಾಜ್ಯದ ಪೊಲೀಸರು ಮೋಸ್ಟ್ ವಾಟೆಂಡ್ ನಕ್ಸಲ್ ನಾಯಕರಾದ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ನಿವಾಸಿ ನಕ್ಸಲ್ ಪಶ್ಚಿಮ ಘಟ್ಟದ ವಿಶೇಷ ಸಮಿತಿಯ ಕಾರ್ಯದರ್ಶಿಯಾಗಿದ್ದ ಬಿ.ಜಿ.ಕೃಷ್ಣಮೂರ್ತಿ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕಳಸ ನಿವಾಸಿ ಸಾವಿತ್ರಿಯನ್ನು ಬಂಧಿಸಿ ತ್ರಿಶೂರ್ ಜೈಲಿನಡಿಲಾಗಿತ್ತು. ಕರ್ನಾಟಕ, ಕೇರಳ, ತಮಿಳುನಾಡಿನಲ್ಲಿ ಬಿ.ಜಿ.ಕೃಷ್ಣಮೂರ್ತಿ ವಿರುದ್ಧ 53 ಪ್ರಕರಣ ,ಸಮಿತ್ರಿ ವಿರುದ್ಧ 22 ಪ್ರಕರಣ ತನಿಖೆಯಲ್ಲಿದೆ.

2012-2013 ರಲ್ಲಿ ನಡೆದ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾಮಚಂದ್ರ ಭಟ್ ಮನೆಯ ಅಂಗಳದಲ್ಲಿದ್ದ ಕಾರು, ಬೈಕ್ ಗೆ ಬೆಂಕಿ ಹಚ್ಚಿದ ಪ್ರಕರಣ,ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಕಾರ್ಯತಡ್ಕ ಗ್ರಾಮದಲ್ಲಿ ನಕ್ಸಲ್ ಬೆಂಬಲಿತ ಬ್ಯಾನರ್ ಹಾಕಿದ ಪ್ರಕರಣ,ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಮಲವಂತಿಗೆ ಗ್ರಾಮದಲ್ಲಿ ಭಾರಿ ಸ್ಪೋಟಕ ಪತ್ತೆ ಪ್ರಕರಣದಲ್ಲಿ ಇಬ್ಬರನ್ನು ಬಾಡಿ ವಾರೆಂಟ್ ಮೂಲಕ ಕೇರಳ ರಾಜ್ಯದ ತ್ರಿಶೂರ್ ಜೈಲಿನಿಂದ ಎ.7 ರಂದು ಭದ್ರತೆಯಲ್ಲಿ ಕರೆದುಕೊಂಡು ಬಂದಿದ್ದಾರೆ.

ಇಬ್ಬರು ನಕ್ಸಲರು ಎರಡು ದಿನ ಬೆಳ್ತಂಗಡಿ ಪೊಲೀಸ್ ಕಸ್ಟಡಿಗೆ:

ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದಲ್ಲಿ ಭಾರಿ ಸ್ಫೋಟಕ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ದಿನ ಕಾಲ ಅಂದರೆ ಎ.9 ವರೆಗೆ ಬೆಳ್ತಂಗಡಿ ಪೊಲೀಸ್ ಕಸ್ಟಡಿಗೆ ನಕ್ಸಲ್ ನಾಯಕರಾದ ಬಿ.ಜಿ.ಕೃಷ್ಣಮೂರ್ತಿ(50) ಮತ್ತು ಸಾವಿತ್ರಿ(36) ಯನ್ನು ನೀಡುವಂತೆ ಬೆಳ್ತಂಗಡಿ ಪ್ರಧಾನ ವ್ಯವಹಾರಿಕ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಯ ನ್ಯಾಯಾಧೀಶರು ಸಂದೇಶ್.ಕೆ ಆದೇಶ ಹೊರಡಿಸಿದರು. ಇಬ್ಬರನ್ನು ಬಂಟ್ವಾಳ ಡಿವೈಎಸ್ಪಿ ವಿಜಯ ಪ್ರಸಾದ್ ವಶಕ್ಕೆ ನೀಡಿದ್ದಾರೆ. ಉಳಿದ ಎರಡು ಪ್ರಕರಣದಲ್ಲಿ ಎ.9 ರಂದು ನ್ಯಾಯಲಯಕ್ಕೆ ಹಾಜರುಪಡಿಸಿ, ಬಳಿಕ ವೇಣೂರು ಮತ್ತು ಧರ್ಮಸ್ಥಳ ಪೊಲೀಸರು ಕಸ್ಟಡಿಗೆ ಪಡೆಯಲಿದ್ದಾರೆ.

ಕೇರಳ ರಾಜ್ಯದಿಂದ ಅಲ್ಲಿನ ಪೊಲೀಸರು ಬಿಗಿ ಭದ್ರತೆಯಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು.‌ ಬಳಿಕ ತನಿಖಾಧಿಕಾರಿ ಬಂಟ್ವಾಳ ಡಿವೈಎಸ್ಪಿ ವಿಜಯ ಪ್ರಸಾದ್ ಅವರ ತಂಡಕ್ಕೆ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ಪಡೆಯಲು ಇಬ್ಬರು ನಕ್ಸಲರನ್ನು ಒಪ್ಪಿಸಿದೆ. ಬೆಳ್ತಂಗಡಿ, ವೇಣೂರು, ಧರ್ಮಸ್ಥಳ , ಪುಂಜಾಲಕಟ್ಟೆ ಪೊಲೀಸರು ಭದ್ರತೆ ನೀಡಿದ್ದಾರೆ.

Related posts

ಶ್ರೀ ಕ್ಷೇ.ಧ. ಗ್ರಾ.ಯೋ ಕೊಕ್ಕಡ ವಲಯದ ಉಪ್ಪಾರಪಳಿಕೆ ಕಾರ್ಯಕ್ಷೇತ್ರದಲ್ಲಿ ವಿಶ್ವಜ್ಯೋತಿ ಜ್ಞಾನ ವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ

Suddi Udaya

ಎಕ್ಸೆಲ್ ಗೆ ಎಸ್ ಡಿ ಎಂ ನ ಎಕ್ಸ್ ಪಿರಿಯ ವಿಜ್ಞಾನ ಮೇಳದಲ್ಲಿ ಚಾಂಪಿಯನ್ ಶಿಪ್

Suddi Udaya

ನಿಡ್ಲೆ: 24 ನೇ ವರ್ಷದ ಕರುಂಬಿತ್ತಿಲು ಸಂಗೀತ ಶಿಬಿರ ಸಮಾರೋಪ

Suddi Udaya

ಮೇ.31ಕ್ಕೆ ನಿವೃತ್ತರಾಗುತ್ತಿರುವ ಟೀಚರ್ಸ್ ಕೋಪರೇಟಿವ್ ಬ್ಯಾಂಕ್ ಮೆನೇಜರ್ ಲ| ರವೀಂದ್ರ ಶೆಟ್ಟಿ ಬಳಂಜ

Suddi Udaya

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಸಾಮೂಹಿಕ ಪ್ರಾರ್ಥನೆ

Suddi Udaya

ಕೊಯ್ಯೂರು: ಶ್ರೀ ಪಂಚದುರ್ಗಾಪರಮೇಶ್ವರಿ ಭಜನಾ ಮಂಡಳಿಯಿಂದ ಮಕ್ಕಳ ಕುಣಿತ ಭಜನಾ ತಂಡದ ಉದ್ಘಾಟನಾ ಕಾರ್ಯಕ್ರಮ

Suddi Udaya
error: Content is protected !!