24.5 C
ಪುತ್ತೂರು, ಬೆಳ್ತಂಗಡಿ
May 26, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುದುವೆಟ್ಟು ಶ್ರೀಧ.ಮಂ.ಅನುದಾನಿತ ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟುವಿನಲ್ಲಿ 2024-25 ನೇ ಸಾಲಿನ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ನಡೆಯಿತು.

ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ದೇವಳದ ಖರ್ಚು ಉಗ್ರಾಣದ ಪ್ರಬಂಧಕ ಪುಷ್ಪರಾಜ ಶೆಟ್ಟಿ , ಬಾವಂತಬೆಟ್ಟು ಆಗಮಿಸಿ ಮಾತನಾಡಿ ಬೇಸಿಗೆ ಶಿಬಿರದಲ್ಲಿ ಮೂರು ದಿನಗಳ ಕಾಲ ನಡೆದ ಎಲ್ಲಾ ತರಬೇತಿಗಳ ಉತ್ತಮ ಅಂಶಗಳನ್ನು ತಮ್ಮ ಮುಂದಿನ ಜೀವನದಲ್ಲಿ ಅಳವಡಿಸಿಕೊಂಡು ವಿದ್ಯಾರ್ಥಿಗಳು ಕ್ರಿಯಾಶೀಲರಾಗಿ ಸತ್ಪ್ರಜೆಗಳಾಗಿ ಬೆಳೆಯಬೇಕು ಎಂದು ಹೇಳಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು .

ಬೇಸಿಗೆ ಶಿಬಿರದ ಸಂಪನ್ಮೂಲ ವ್ಯಕ್ತಿ ಉಜಿರೆ ಶ್ರೀ.ಧ.ಮಂ.ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಸಹಶಿಕ್ಷಕರು ಕೂಸಪ್ಪ ಗೌಡ ಮಾತನಾಡಿ .ವಿದ್ಯಾರ್ಥಿಗಳು ಮೊಬೈಲ್ , ಸಾಮಾಜಿಕ ಜಾಲತಾಣಗಳಲ್ಲಿ ತಲ್ಲೀನರಾಗಿ ತಮ್ಮ ಬಾಲ್ಯವನ್ನು ವ್ಯರ್ಥ ಮಾಡದೆ ಗ್ರಾಮೀಣ ಆಟಗಳನ್ನು ಆಡುವುದು. ಕ್ರಿಯಾಶೀಲ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಮುಂತಾದವುಗಳ ಮೂಲಕ ತಮ್ಮ ಬಾಲ್ಯವನ್ನು ಅರ್ಥಪೂರ್ಣವಾಗಿ ಕಳೆಯಬೇಕು ಎಂದು ಕಿವಿಮಾತು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಾಲಾ ಮುಖ್ಯೋಪಾಧ್ಯಾಯರಾದ ಶೀನಪ್ಪಗೌಡ ಮಾತನಾಡಿ ಮೂರು ದಿನದ ಬೇಸಿಗೆ ಶಿಬಿರದ ಚಟುವಟಿಕೆಗಳನ್ನು ನೆನಪಿಸಿ ಎಲ್ಲಾ ಚಟುವಟಿಕೆಗಳ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಂಡು ಶಿಬಿರವನ್ನು ಅರ್ಥಪೂರ್ಣವಾಗಿಸಬೇಕು ಎಂಬ ಕಿವಿ ಮಾತನ್ನು ಹೇಳಿದರು.

ಪವನ್ ಕುಮಾರ್ ಸ್ವಾಗತಿಸಿ, ಶ್ರೀಮತಿ ಶೀಲಾ ಎನ್. ಧನ್ಯವಾದವಿತ್ತರು. ಕುಮಾರಿ ಜಿತೀಕ್ಷ ಕಾರ್ಯಕ್ರಮ ನಿರೂಪಿಸಿದರು. ಮೂರು ದಿನಗಳ ಕಾಲ ನಡೆದ ಶಿಬಿರದಲ್ಲಿ ವಿದ್ಯಾರ್ಥಿಗಳಿಗೆ ಜಾನಪದ ಗೀತೆ ಗೀಗಿ ಪದಗಳು , ಜಾನಪದ ನೃತ್ಯ ತೆಂಗಿನ ಗರಿ ಗಳಿಂದ ವಿವಿಧ ಕಲಾ ಕೃತಿಗಳ ರಚನೆ, ಡ್ರಾಯಿಂಗ್ ಶೀಟ್ ಮತ್ತು ಪೇಪರ್ ನಿಂದ ವಿವಿಧ ರೀತಿಯ ಮಾದರಿಗಳ ರಚನೆ ಮುಂತಾದ ತರಬೇತಿಗಳನ್ನು ವಿವಿಧ ಸಂಪನ್ಮೂಲ ವ್ಯಕ್ತಿಗಳು ನೀಡಿದರು. ಎಲ್ಲಾ ಶಿಕ್ಷಕ ವೃಂದದವರು ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

Related posts

ಗೇರುಕಟ್ಟೆ : ಪರಪ್ಪು ಜಮಾಅತ್ ನಲ್ಲಿ ಪವಿತ್ರ ಹಜ್ ಯಾತ್ರೆ ಕೈಗೊಳ್ಳಲಿರುವ ಎಂ.ಕೆ. ಅಹ್ಮದ್ ಯೂಸುಫ್ ರವರಿಗೆ ಗೌರವಾರ್ಪಣೆ

Suddi Udaya

ದೆಹಲಿಯಲ್ಲಿ ಕೇಂದ್ರ ಸರ್ಕಾರದಗ್ರಾಮೀಣಾಭಿವೃದ್ಧಿ ಸಚಿವಾಲಯ ಮತ್ತು ನೇಶನಲ್ ಅಕಾಡೆಮಿ ಆಫ್ ರುಡ್‌ಸೆಟಿ ಮಧ್ಯೆ ಒಪ್ಪಂದ ಪತ್ರಕ್ಕೆ ಸಹಿ

Suddi Udaya

ಶಿಶಿಲ ಗ್ರಾಮ ಪಂಚಾಯತ್‌ನಲ್ಲಿ ರೈತರ ಸದಸ್ಯತ್ವ ನೋಂದಾವಣೆ ಮತ್ತು ರೈತರಿಗೆ ಮಾಹಿತಿ ಕಾರ್ಯಕ್ರಮ

Suddi Udaya

ಶತಾಯುಷಿ ಪಟ್ರಮೆ ಅಶ್ಚತ್ತಡಿ ನಿವಾಸಿ ಪಮಣ ಗೌಡ ನಿಧನ

Suddi Udaya

ಓಡಿಲ್ನಾಳ : ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪ್ರಥಮ ವರ್ಷದ ಶ್ರೀ ಶಾರದೋತ್ಸವ: ಧಾರ್ಮಿಕ ಸಭೆ

Suddi Udaya

ಮೊಗ್ರು :ಮುಗೇರಡ್ಕ ಮೂವರು ದೈವಸ್ಥಾನದಲ್ಲಿ ಕುಡಿಯುವ ನೀರಿನ ಘಟಕ ಉದ್ಘಾಟನೆ

Suddi Udaya
error: Content is protected !!