April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಅಭ್ಯಾಸ್ ಪದವಿ ಪೂರ್ವ ಕಾಲೇಜಿನಲ್ಲಿ ಸೇತುಬಂಧ ಕಾರ್ಯಕ್ರಮ

ಉಜಿರೆ: ಅಭ್ಯಾಸ್ ಪದವಿ ಪೂರ್ವ ಕಾಲೇಜು ಉಜಿರೆ ಕಾಶಿಬೆಟ್ಟು ಪ್ರಗತಿನಗರ ಇದರ ವತಿಯಿಂದ ಅಭ್ಯಾಸ್ ಸ್ಪಾರ್ಕ್ ಶೀರ್ಷಿಕೆಯಡಿಯಲ್ಲಿ ಸೇತುಬಂಧ ಕಾರ್ಯಕ್ರಮ ಏ.6 ರಂದು ನಡೆಯಿತು.

ಸಂಸ್ಥೆಯ ಅಧ್ಯಕ್ಷ ಕಾರ್ತಿಕೇಯ ಉದ್ಘಾಟಿಸಿ ಕಾರ್ಯಕ್ರಮದ ಔಚಿತ್ಯವನ್ನು ವಿವರಿಸಿದರು. ಸಂಸ್ಥೆಯ ಆಡಳಿತ ಅಧಿಕಾರಿ ಪ್ರಮೋದ್ ಗೌಡ ಹಾಗೂ ಪಿ.ಆರ್.ಓ ಧನಂಜಯ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ವಿಷಯವಾರು ಪರಿಣಿತ ಉಪನ್ಯಾಸಕರುಗಳು ವೇದಿಕೆಯಲ್ಲಿ ಆಸೀನರಾಗಿದ್ದರು. ಕಾಲೇಜಿನ ಉಪಪ್ರಾಂಶುಪಾಲರು ಪ್ರೊ. ಚಂದ್ರಶೇಖರ್ ಗೌಡ ಕಾರ್ಯಕ್ರಮ ನಿರೂಪಿಸಿ ಪ್ರಾಸ್ತಾವಿಕವಾಗಿ ಮಾತನಾಡಿ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ತಾವು ಆಯ್ಕೆ ಮಾಡುವ ವಿಷಯ ಹಾಗೂ ಮುಂದಿನ ಉದ್ಯೋಗ ಅವಕಾಶಗಳ ಕುರಿತು ಮಾತನಾಡಿದರು. 80ಕ್ಕಿಂತ ಹೆಚ್ಚು ವಿದ್ಯಾರ್ಥಿ ಹಾಗೂ ಪೋಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಂಪ್ಯೂಟರ್ ವಿಭಾಗದ ಮುಖ್ಯಸ್ಥ ಗುರುಪ್ರಸಾದ್ ಭಟ್ ಧನ್ಯವಾದ ನೀಡಿದರು.

Related posts

ಲಾಯಿಲ: ವಿಶ್ವಮಟ್ಟದ ಸ್ಥಾನಿಕ ಬ್ರಾಹ್ಮಣ ಸಮಾವೇಶ

Suddi Udaya

ಮಹಿಳೆಯ ಬ್ಯಾಗ್ ನಲ್ಲಿ ಇರಿಸಿದ್ದ ರೂ. 2 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya

ತಣ್ಣೀರುಪಂತ: ಪಾಲೇದು ಮಹಮ್ಮಾಯಿ ದೇವಿಯ ಅಂಗಾರ ಪೂಜೆ

Suddi Udaya

ಬಂದಾರು: ಬೈಹುಲ್ಲು ಸಾಗಾಟದ ಲಾರಿಗೆ ಬೆಂಕಿ

Suddi Udaya

ಲಾಯಿಲ: ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸೀದಿಯಲ್ಲಿ ಈದುಲ್ – ಹದಾ ಆಚರಣೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಬೆಳ್ತಂಗಡಿ ಸ.ಮಾ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಊಟದ ತಟ್ಟೆ ವಿತರಣೆ

Suddi Udaya
error: Content is protected !!